ಬೆಂಗಳೂರು: ವಿಧಾನಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಗಾಂಧಿ ಜಯಂತಿ ಆಚರಣೆ ಮಾಡಿದರು. ಮಹಾತ್ಮ ಗಾಂಧೀಜಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಇದೇ ವೇಳೆ ವಿಧಾನಸೌಧ ಆವರಣದಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಶಾಸ್ತ್ರಿಯವರ ಜನ್ಮದಿನ ಆಚರಿಸಿದರು.
ಈ ವೇಳೆ ಸಚಿವರಾದ ಆರ್ ಅಶೋಕ್, ರಾಜಕೀಯ ಕಾರ್ಯದರ್ಶಿ ಶಾಸಕ ವಿಶ್ವನಾಥ ಉಪಸ್ಥಿತರಿದ್ದರು. ಬಳಿಕ ಮಾತನಾಡಿದ ಸಿಎಂ , ಗಾಂಧೀಜಿಯವರ 150 ನೇ ಜನ್ಮದಿನವನ್ನು ಶ್ರದ್ದೆ ,ಭಕ್ತಿಯಿಂದ ಆಚರಿಸಿದ್ದೇವೆ. ಇಬ್ಬರೂ ಮಹಾತ್ಮರ ಮೌಲ್ಯಗಳು ನಮಗೆಲ್ಲ ಮಾದರಿಯಾಗಿವೆ, ಲಾಲ್ ಬಹದ್ದೂರ್ ಶಾಸ್ತ್ರಿಯವರ ಜೈ ಜವಾನ್ ಜೈ ಕಿಸಾನ್ ಘೋಷವಾಕ್ಯ ಇಂದಿಗೂ ಪ್ರಸ್ತುತ ಎಂದರು.