ETV Bharat / state

ಬೆಂಗಳೂರಿನಲ್ಲಿ ಜನವರಿ ಕೊನೆಗೆ ಉದ್ಯೋಗ ಮೇಳ: ಸಿದ್ಧತೆಗೆ ಸಚಿವರ ತಂಡ ರಚನೆ - ರಾಜ್ಯಮಟ್ಟದ ಉದ್ಯೋಗ ಮೇಳ

ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜಿಸುವ ಕುರಿತು ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಉದ್ಯೋಗ ಮೇಳ ಆಯೋಜನೆ ಪೂರ್ವಭಾವಿ ಸಭೆ
ಉದ್ಯೋಗ ಮೇಳ ಆಯೋಜನೆ ಪೂರ್ವಭಾವಿ ಸಭೆ
author img

By ETV Bharat Karnataka Team

Published : Dec 29, 2023, 9:19 PM IST

ಬೆಂಗಳೂರು: ಜನವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲು ಉದ್ದೇಶಿಸಲಾಗಿದ್ದು, ಸಚಿವರ ತಂಡ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿಂದು ರಾಜ್ಯಮಟ್ಟದ ಉದ್ಯೋಗ ಮೇಳ ಆಯೋಜಿಸುವ ಕುರಿತು ಪೂರ್ವಭಾವಿ ಸಭೆ ನಡೆಸಿದರು. ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಐಟಿ ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ, ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌, ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌, ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರನ್ನೊಳಗೊಂಡ ಸಚಿವರ ತಂಡ ರಚಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಸಚಿವರ ಈ ತಂಡವು ಉದ್ಯೋಗದಾತರೊಂದಿಗೆ ಸಭೆ ನಡೆಸಿ, ಚರ್ಚಿಸಿ ಅವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಚುನಾವಣಾ ಪ್ರಣಾಳಿಕೆಯಂತೆ ಉದ್ಯೋಗ ಮೇಳ: ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಉದ್ಯೋಗ ಮೇಳ ಆಯೋಜಿಸಲಾಗುವುದು. ಕೈಗಾರಿಕೆಗಳೊಂದಿಗೆ ಚರ್ಚಿಸಿ, ಉದ್ಯೋಗಾಕಾಂಕ್ಷಿಗಳ ಕೌಶಲ್ಯ ಹಾಗೂ ಕೈಗಾರಿಕೆಗಳ ಅಗತ್ಯತೆಯ ನಡುವಿನ ಅಂತರ ಸರಿಪಡಿಸುವ ಬಗ್ಗೆ ದೂರಗಾಮಿ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆಯೂ ಶಿಫಾರಸುಗಳನ್ನು ಮಾಡುವಂತೆ ಸಚಿವರ ತಂಡಕ್ಕೆ ಸಿಎಂ ಹೇಳಿದ್ದಾರೆ.

ವಿದೇಶದಲ್ಲಿನ ಉದ್ಯೋಗಾವಕಾಶ ಪರಿಶೀಲನೆಗೆ ಸೂಚನೆ: ವಿದೇಶದಲ್ಲಿರುವ ಉದ್ಯೋಗಾವಕಾಶಗಳ ಕುರಿತೂ ಸಹ ಪರಿಶೀಲಿಸಲು ಮುಖ್ಯಮಂತ್ರಿಗಳು ಹೇಳಿದರು. ಇದಲ್ಲದೆ ರಾಜ್ಯದ ಯುವಕರಿಗೆ ಉದ್ಯೋಗಾವಕಾಶಗಳನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಉದ್ಯೋಗ ನೀತಿಯನ್ನು ಹೊಂದುವ ಅಗತ್ಯವಿದೆ. ಈ ನೀತಿಯನ್ನು ರೂಪಿಸಲು ಸಿದ್ಧತೆ ನಡೆಸಬೇಕು ಎಂದರು.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌, ಗೃಹ ಸಚಿವ ಡಾ.ಜಿ.ಪರಮೇಶ್ವರ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಐಟಿ, ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌, ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್‌, ಕಾರ್ಯದರ್ಶಿ ಡಾ.ಕೆ.ವಿ.ತ್ರಿಲೋಕಚಂದ್ರ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಅತ್ಯಾಧುನಿಕ ಸಮುದಾಯ ಬೆಕ್ಕು ಜನನನಿಯಂತ್ರಣ ಕೇಂದ್ರ ಉದ್ಘಾಟನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.