ಬೆಂಗಳೂರು: ಕೇಂದ್ರದ ಮಾಜಿ ಸಚಿವ ಎಂ.ವಿ.ರಾಜಶೇಖರನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.
-
ಆತ್ಮೀಯರು,ಕೇಂದ್ರದ ಮಾಜಿ ಸಚಿವರಾಗಿದ್ದ ಎಂ ವಿ ರಾಜಶೇಖರನ್ ಅವರ ನಿಧನ ದುಃಖಕರ.
— B.S. Yediyurappa (@BSYBJP) April 13, 2020 " class="align-text-top noRightClick twitterSection" data="
ಸರಳ, ಸಜ್ಜನಿಕೆಗಳ ಎಂ ವಿ ಆರ್ ಅವರ ಅಗಲಿಕೆಯಿಂದ ಮೌಲ್ಯಾಧಾರಿತ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಂತಾಗಿದೆ.
ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
">ಆತ್ಮೀಯರು,ಕೇಂದ್ರದ ಮಾಜಿ ಸಚಿವರಾಗಿದ್ದ ಎಂ ವಿ ರಾಜಶೇಖರನ್ ಅವರ ನಿಧನ ದುಃಖಕರ.
— B.S. Yediyurappa (@BSYBJP) April 13, 2020
ಸರಳ, ಸಜ್ಜನಿಕೆಗಳ ಎಂ ವಿ ಆರ್ ಅವರ ಅಗಲಿಕೆಯಿಂದ ಮೌಲ್ಯಾಧಾರಿತ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಂತಾಗಿದೆ.
ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.ಆತ್ಮೀಯರು,ಕೇಂದ್ರದ ಮಾಜಿ ಸಚಿವರಾಗಿದ್ದ ಎಂ ವಿ ರಾಜಶೇಖರನ್ ಅವರ ನಿಧನ ದುಃಖಕರ.
— B.S. Yediyurappa (@BSYBJP) April 13, 2020
ಸರಳ, ಸಜ್ಜನಿಕೆಗಳ ಎಂ ವಿ ಆರ್ ಅವರ ಅಗಲಿಕೆಯಿಂದ ಮೌಲ್ಯಾಧಾರಿತ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಂತಾಗಿದೆ.
ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಎಂ. ವಿ. ರಾಜಶೇಖರನ್ ಸರಳತೆ, ಸಜ್ಜನಿಕೆಯ ಪ್ರಬುದ್ಧ ರಾಜಕಾರಣಿಯಾಗಿದ್ದರು. ಮಾಜಿ ಮುಖ್ಯಮಂತ್ರಿ ದಿ. ಎಸ್. ನಿಜಲಿಂಗಪ್ಪನವರ ಅಳಿಯನಾದ ಅವರಿಗೆ, ಗ್ರಾಮೀಣ ಆರ್ಥಿಕತೆಯ ವಿಚಾರದಲ್ಲಿ ಆಳವಾದ ಜ್ಞಾನವಿತ್ತು. ಗ್ರಾಮೀಣ ಅಭಿವೃದ್ಧಿ ಕುರಿತು ಅಧ್ಯಯನ ಸಂಸ್ಥೆಯೊಂದನ್ನು ಅವರು ಸ್ಥಾಪಿಸಿದ್ದರು.
ಲೋಕಸಭೆ, ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಸದಸ್ಯರಾಗಿಯೂ ಅತ್ಯುತ್ತಮ ಸಂಸದೀಯ ಪಟುವಾಗಿ ಗುರುತಿಸಿಕೊಂಡಿದ್ದರು. ಡಾ ಮನಮೋಹನ್ ಸಿಂಗ್ ಸರ್ಕಾರದಲ್ಲಿ ಕೇಂದ್ರ ಯೋಜನೆ ಮತ್ತು ಅಂಕಿ ಅಂಶ ಖಾತೆಯ ರಾಜ್ಯ ಸಚಿವರಾಗಿ ಹೊಣೆಗಾರಿಕೆ ನಿಭಾಯಿಸಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.
ಮೌಲ್ಯಾಧಾರಿತ ರಾಜಕಾರಣಿಯ ನಿಧನ ಅತ್ಯಂತ ದುಃಖಕರ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬ ವರ್ಗ, ಅಭಿಮಾನಿ ಬಳಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಿಎಂ ತಿಳಿಸಿದ್ದಾರೆ.