ಬೆಂಗಳೂರು: ಕರ್ನಾಟಕ ನೀರಾವರಿ ನಿಗಮದ ಆಡಳಿತ ಮಂಡಳಿಯ ಸದಸ್ಯರು ಹಾಗೂ ನೀರಾವರಿ ತಜ್ಞ, ಲೋಕೋಪಯೋಗಿ ಇಲಾಖೆಯ ನಿವೃತ್ತ ಕಾರ್ಯದರ್ಶಿ ಡಿ.ಎನ್. ದೇಸಾಯಿ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಡಿ.ಎನ್. ದೇಸಾಯಿ ಅವರು ರಾಜ್ಯದ ಕೃಷ್ಣಾ ಹಾಗೂ ಮಹದಾಯಿ ಜಲವಿವಾದಕ್ಕೆ ಸಂಬಂಧಿಸಿದಂತೆ ರಚಿಸಲಾಗಿದ್ದ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರಾಗಿ ಅನುಪಮ ಸೇವೆ ಸಲ್ಲಿಸಿದ್ದಾರೆ. ರಾಜ್ಯದ ಬೇಡಿಕೆಗಳನ್ನು ಸಮರ್ಥವಾಗಿ ಮಂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಅವರು ಸ್ಮರಿಸಿಕೊಂಡಿದ್ದಾರೆ.
ಅವರ ನಿಧನದಿಂದ ನಾಡು ಒಬ್ಬ ಪರಿಣಿತ ನೀರಾವರಿ ತಜ್ಞರನ್ನು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬಕ್ಕೆ ಈ ನೋವು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸು ವುದಾಗಿ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.