ETV Bharat / state

ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Yediyurappa
ಯಡಿಯೂರಪ್ಪ
author img

By

Published : Sep 25, 2020, 3:18 PM IST

ಬೆಂಗಳೂರು: ಖ್ಯಾತ ಸಂಗೀತ ದಿಗ್ಗಜ, ಗಾಯಕರಾದ ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಚಲನಚಿತ್ರರಂಗದ ಶ್ರೇಷ್ಠ ಗಾಯಕರಾಗಿದ್ದ ಅವರು, ಹಿಂದಿ ಸೇರಿದಂತೆ ದಕ್ಷಿಣ ಭಾರತದ ಎಲ್ಲ ಭಾಷೆಗಳ ಚಲನಚಿತ್ರ ಗೀತೆಗಳಿಗೆ ಹಿನ್ನೆಲೆ ಗಾಯನ ಮಾಡಿ ಅಪಾರ ಜನಪ್ರಿಯತೆ ಗಳಿಸಿದ್ದರು. ನಟನೆ, ಸಂಗೀತ ಸಂಯೋಜನೆ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆಯನ್ನೂ ಮಾಡಿ ಸಂಗೀತ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಯನ್ನು ಮಾಡಿದ್ದರು.

10ಕ್ಕಿಂತ ಹೆಚ್ಚು ಭಾಷೆಗಳಲ್ಲಿ 40 ಸಾವಿರಕ್ಕೂ ಹಾಡುಗಳನ್ನು ಹಾಡಿದ ಕೀರ್ತಿ ಅವರದ್ದು. ಕನ್ನಡ ಮತ್ತು ಕನ್ನಡಿಗರ ಬಗ್ಗೆ ವಿಶೇಷ ಅಭಿಮಾನವನ್ನು ಹೊಂದಿದ್ದರು. ಪದ್ಮಶ್ರೀ, ಪದ್ಮ ವಿಭೂಷಣ ಪ್ರಶಸ್ತಿ ಹಾಗೂ ಇನ್ನಿತರ ಪ್ರಶಸ್ತಿ ಗೌರವಗಳನ್ನು ಪಡೆದ ಸುಪ್ರಸಿದ್ಧ ಗಾಯಕರು. ಅವರ ಹಾಡುಗಳು ಜನಮಾನಸದಲ್ಲಿ ಚಿರಸ್ಥಾಯಿಯಾಗಿ ನೆಲೆಸಿವೆ. ಅವರ ನಿಧನದಿಂದ ಸಂಗೀತ ಕ್ಷೇತ್ರದ ಪ್ರಮುಖ ಕೊಂಡಿಯೊಂದು ಕಳಚಿದಂತಾಗಿದೆ.

ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬ ಮತ್ತು ಕೋಟ್ಯಾಂತರ ಅಭಿಮಾನಿಗಳಿಗೆ ಭಗವಂತ ದು:ಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.