ಬೆಂಗಳೂರು: ರಾಜ್ಯಸಭಾ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಬಿಜೆಪಿಯ ಈರಣ್ಣ ಕಡಾಡಿ ಹಾಗೂ ಅಶೋಕ್ ಗಸ್ತಿ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.
ಜೊತೆಗೆ ಕಾಂಗ್ರೆಸ್ನಿಂದ ಆಯ್ಕೆಯಾಗಿರುವ ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಜೆಡಿಎಸ್ನಿಂದ ಆಯ್ಕೆಯಾಗಿರುವ ಮಾಜಿ ಪ್ರಧಾನಿ ದೇವೇಗೌಡರಿಗೂ ಶುಭ ಹಾರೈಕೆಗಳು ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ರಾಜ್ಯಸಭೆಯ ನಾಲ್ಕು ಸ್ಥಾನಗಳಲ್ಲಿ ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿ ಎರಡು ಕಾಂಗ್ರೆಸ್ ಒಂದು ಸ್ಥಾನ ಪಡೆದಿದ್ದು, ಕಾಂಗ್ರೆಸ್ನ ಹೆಚ್ಚುವರಿ ಮತಗಳ ಬೆಂಬಲದ ಆಧಾರದಲ್ಲಿ ಜೆಡಿಎಸ್ನಿಂದ ದೇವೇಗೌಡ ಕಣಕ್ಕಿಳಿದಿದ್ದು, ಬಿಜೆಪಿ ಹೆಚ್ಚುವರಿ ಅಭ್ಯರ್ಥಿ ಹಾಕದ ಹಿನ್ನೆಲೆಯಲ್ಲಿ ಚುನಾವಣೆ ಇಲ್ಲದೆ ಅವಿರೋಧ ಆಯ್ಕೆಯನ್ನು ಪ್ರಕಟಿಸಲಾಗಿದೆ.