ETV Bharat / state

ನಾರಾಯಣರಾವ್ ಅವರ ನಿಧನಕ್ಕೆ ಸಿಎಂ, ಡಿಸಿಎಂ ತೀವ್ರ ಸಂತಾಪ - MLA B Narayana Rao passes away

ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹಾಗೂ ಡಿಸಿಎಂ ಗೋವಿಂದ ಕಾರಜೋಳ ತೀವ್ರ ಸಂತಾಪ ಸೂಚಿಸಿದ್ದಾರೆ.

CM, DCM express condolences on MLA Narayanarao's death
ನಾರಾಯಣರಾವ್ ಅವರ ನಿಧನಕ್ಕೆ ಸಿಎಂ, ಡಿಸಿಎಂ ತೀವ್ರ ಸಂತಾಪ
author img

By

Published : Sep 24, 2020, 5:54 PM IST

ಬೆಂಗಳೂರು: ಶಾಸಕ ಬಿ. ನಾರಾಯಣರಾವ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ನಿನ್ನೆ ನಮ್ಮನ್ನಗಲಿದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿಯವರನ್ನು ಕಳೆದುಕೊಂಡಿರುವ ದು:ಖದಿಂದ ಚೇತರಿಸಿಕೊಳ್ಳುವ ಮುನ್ನವೇ ಶಾಸಕ ಬಿ. ನಾರಾಯಣರಾವ್ ಅವರು ಮೃತಪಟ್ಟಿರುವುದು ಮತ್ತೊಂದು ಆಘಾತ ತಂದಿದೆ ಎಂದು ಹೇಳಿದ್ದಾರೆ.

2018ರ ವಿಧಾನಸಭೆಯ ಚುನಾವಣೆಯಲ್ಲಿ ಬಸವಕಲ್ಯಾಣ ಕ್ಷೇತ್ರದಿಂದ ಸ್ಪರ್ಧಿಸಿ ನಾರಾಯಣರಾವ್ ಅವರು ಗೆಲುವು ಸಾಧಿಸಿದ್ದರು. ವಿಧಾನಸಭೆಯಲ್ಲಿ ಜ್ವಲಂತ ಸಮಸ್ಯೆಗಳ ಕುರಿತು ಧ್ವನಿ ಎತ್ತುತ್ತಿದ್ದ ಅವರು ಅಸಾಧರಣ ವಾಗ್ಮಿಗಳಾಗಿದ್ದರು. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿದು, ಬಸವಕಲ್ಯಾಣ ಕ್ಷೇತ್ರದ ಅಭಿವೃದ್ಧಿಗೆ ಬಹಳಷ್ಟು ಕೊಡುಗೆ ನೀಡಿದ್ದಾರೆ. ಅವರ ನಿಧನದಿಂದ ಅತ್ಯುತ್ತಮ ಶಾಸಕರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಮೃತರ ಆತ್ಮಕ್ಕೆ ಭಗವಂತ ಸದ್ಗತಿ ನೀಡಲಿ ಹಾಗೂ ಅವರ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಡಿಸಿಎಂ ಗೋವಿಂದ ಕಾರಜೋಳ ಸಂತಾಪ ಸೂಚನೆ:

ಬಸವಕಲ್ಯಾಣ ಕ್ಷೇತ್ರದ ಶಾಸಕ ನಾರಾಯಣರಾವ್ ನಿಧನದ ಸುದ್ದಿ ಅತೀವ ದುಃಖ ತಂದಿದೆ ಎಂದು ಶಾಸಕರ ನಿಧನಕ್ಕೆ ಡಿಸಿಎಂ ಗೋವಿಂದ ಕಾರಜೋಳ ತೀವ್ರ ಸಂತಾಪ ಸೂಚಿಸಿದ್ದಾರೆ.

ನಾರಾಯಣ ರಾವ್ ಬಸವ ತತ್ವಗಳನ್ನು ಅಳವಡಿಸಿಕೊಂಡು ಬಸವ ತತ್ವದಡಿಯಲ್ಲಿ ಬಾಳಿ ಬದುಕಿದ್ದಾರೆ. ಅವರು ಬಡವರ, ದೀನ ದಲಿತರ ಬಗ್ಗೆ ಅಪಾರ ಕಳಕಳಿ ಹೊಂದಿದ್ದರು. ಇವರ ನಿಧನದಿಂದ ಅಸಂಖ್ಯಾತ ಬಸವ ಭಕ್ತರಿಗೆ ಅತೀವ ನೋವು ಉಂಟಾಗಿದೆ. ಅವರು ತಮ್ಮೊಂದಿಗೆ ನಿಕಟವರ್ತಿಗಳಾಗಿದ್ದು, ಆತ್ನೀಯರೂ ಆಗಿದ್ದರು. ಅವರ ಕುಟುಂಬ ಪರಿವಾರ ಹಾಗೂ ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ನೀಡಿ, ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಡಿಸಿಎಂ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.