ಬೆಂಗಳೂರು: ಆದಾಯ ತೆರಿಗೆ ಇಲಾಖೆ ಮುಂದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರಿ ತುಮಕೂರು ಜಿಲ್ಲೆಯ ಎ.ಮಲ್ಲಿಕಾರ್ಜುನ ಸಲ್ಲಿಸಿದ್ದ ಅರ್ಜಿಯು ಜನಪ್ರತಿನಿಧಿ ನ್ಯಾಯಾಲಯದ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ ಅವರ ನ್ಯಾಯಪೀಠದಲ್ಲಿ ವಿಚಾರಣೆ ನಡೆಯಿತು.
ವಾದ ಮಂಡಿಸಿದ ಅರ್ಜಿದಾರ ಎ.ಮಲ್ಲಿಕಾರ್ಜುನ್, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿ ಇನ್ನಿತರ ಜನಪ್ರತಿನಿಧಿಗಳು ಆದಾಯ ತೆರಿಗೆ ಇಲಾಖೆ ಎದುರು ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಿದ್ದಾರೆ. ಆದ್ರೆ ಪೊಲೀಸರು ಇದರ ಬಗ್ಗೆ ಎಫ್‌ಐಆರ್ ಕೂಡ ದಾಖಲಿಸಿಕೊಳ್ಳುತ್ತಿಲ್ಲ. ಪ್ರತಿಭಟನೆ ಸಂಬಂಧ ಎಫ್‌ಐಆರ್ ದಾಖಲಿಸಲು ನಿರ್ದೇಶಿಸಬೇಕೆಂದು ಮನವಿ ಮಾಡಿದರು.
ಅರ್ಜಿದಾರರ ವಾದ ಆಲಿಸಿದ ನ್ಯಾಯಾಲಯ, ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣಾಧಿಕಾರಿಗಳಿಗೆ ತನಿಖೆ ನಡೆಸಲು ಆದೇಶ ನೀಡಿ ವಿಚಾರಣೆಯನ್ನು ಜೂ.15ಕ್ಕೆ ಮುಂದೂಡಿದೆ.