ETV Bharat / state

ಶಿವಾನಂದ ಪಾಟೀಲ್ ಹೇಳಿಕೆಯಲ್ಲಿ ರೈತರನ್ನು ಅವಮಾನಿಸುವ ದುರುದ್ದೇಶ ಇಲ್ಲ: ಸಿಎಂ ಸಿದ್ದರಾಮಯ್ಯ

ಸಚಿವ ಶಿವಾನಂದ ಪಾಟೀಲ್​ ಅವರು ರೈತರ ಕುರಿತು ನೀಡಿದ ಹೇಳಿಕೆಯನ್ನು ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

author img

By ETV Bharat Karnataka Team

Published : Dec 26, 2023, 6:43 PM IST

ಸಚಿವ ಶಿವಾನಂದ ಪಾಟೀಲ್ ಹೇಳಿಕೆ ಸಮರ್ಥಿಸಿಕೊಂಡ ಸಿಎಂ

ಬೆಂಗಳೂರು: ಕೃಷಿ ಮಾರುಕಟ್ಟೆ ಸಚಿವರಿಗೆ ರೈತರನ್ನು ಅವಮಾನಿಸಬೇಕೆಂಬ ದುರುದ್ದೇಶ ಖಂಡಿತಾ ಇರಲಾರದು. ತನ್ನ ಜೊತೆಗಿದ್ದ ರೈತರೊಂದಿಗಿನ ಸಲುಗೆಯಿಂದ ಕೆಲವು ಮಾತುಗಳನ್ನು ಆಡಿದ್ದಾರೆ ಅಷ್ಟೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇದೇ ವೇಳೆ, ಬಿಜೆಪಿ ನಾಯಕರು ಇಂತಹ ಸಂದರ್ಭಕ್ಕಾಗಿ ಕಾದು ಕುಳಿತಿದ್ದು ವಿವಾದ ಮಾಡಿದ್ದಾರೆ ಎಂದರು.

ಸಚಿವ ಶಿವಾನಂದ ಪಾಟೀಲ್ ಹೇಳಿಕೆಯನ್ನು ಸಮರ್ಥಿಸಿಕೊಂಡು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ, ಅನ್ನದಾತರಾದ ರೈತರ ಬಗ್ಗೆ ನಾವು ಎಚ್ಚರಿಕೆಯಿಂದ ಮಾತ್ರವಲ್ಲ, ಗೌರವದಿಂದ ಮಾತನಾಡಬೇಕು. ಹಗುರ ಮಾತುಗಳ ಮೂಲಕ ರೈತರಿಗೆ ಅವಮಾನವಾಗುವಂತೆ ಮಾಡಬಾರದು. ಇದು ಪ್ರತಿಯೊಬ್ಬರೂ ಕಡ್ಡಾಯವಾಗಿ ಅನುಸರಿಸಿಕೊಂಡು ಬರಬೇಕಾದ ನೀತಿ ಸಂಹಿತೆ ಎಂದು ತಿಳಿಸಿದ್ದಾರೆ.

ರೈತರ ಕಲ್ಯಾಣಕ್ಕಾಗಿ ಕಿಂಚಿತ್ತೂ ಕೆಲಸ ಮಾಡದೆ ಇರುವ, ಮೂಲತಃ ರೈತ ವಿರೋಧಿಯಾಗಿರುವ ಬಿಜೆಪಿಯ ನಾಯಕರು ಇಂತಹದ್ದೇ ಅವಕಾಶಕ್ಕಾಗಿ ಕಾದು ಕೂತವರಂತೆ ಶಿವಾನಂದ ಪಾಟೀಲರ ಮಾತುಗಳನ್ನು ವಿವಾದವನ್ನಾಗಿ ಮಾಡಿದ್ದಾರೆ. ಬೀಜ-ಗೊಬ್ಬರ ಕೊಡಿ ಎಂದು ಕೇಳಿದ ರೈತರನ್ನು ಗುಂಡಿಕ್ಕಿ ಸಾಯಿಸಿದ ಮತ್ತು ರೈತರ ಸಾಲ ಮನ್ನಾ ಮಾಡಿ ಎಂದು ಕೇಳಿದರೆ ನೋಟ್ ಪ್ರಿಂಟಿಂಗ್ ಮೆಷಿನ್ ಇದೆಯೇ ಎಂದು ಕೇಳಿದ ಭಾರತೀಯ ಜನತಾ ಪಕ್ಷದ ನಾಯಕರಿಗೆ ಕಾಂಗ್ರೆಸ್ ಪಕ್ಷದ ವಿರುದ್ಧ ಮಾತನಾಡುವ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ್ದಾರೆ.

ರೈತರ ಕಲ್ಯಾಣಕ್ಕೆ ಬಿಜೆಪಿಯವರು ಏನು ಮಾಡಿದ್ದಾರೆ?: ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಬಿಜೆಪಿ ನಾಯಕರು ರೈತರ ಕಲ್ಯಾಣಕ್ಕಾಗಿ ಏನು ಮಾಡಿದ್ದಾರೆ? ನಾವು ನಿಜವಾದ ರೈತ ಮಿತ್ರರು, ಬಿಜೆಪಿಯವರಂತೆ ನಕಲಿ ಮಿತ್ರರಲ್ಲ. ರೈತರ ಬಗೆಗಿನ ನಮ್ಮ ಪ್ರೀತಿ-ಅಭಿಮಾನಕ್ಕೆ ನಮ್ಮ ಸರ್ಕಾರದ ಕಳೆದ ಆರು ತಿಂಗಳುಗಳ ಅವಧಿಯಲ್ಲಿ ಜಾರಿಗೆ ತಂದಿರುವ ರೈತ ಪರ ಕಾರ್ಯಕ್ರಮಗಳೇ ಸಾಕ್ಷಿ. ರಾಜ್ಯದಲ್ಲಿನ ಬರಗಾಲದಿಂದ ನೊಂದಿರುವ ರೈತರಿಗೆ ಕೇಂದ್ರ ಸರ್ಕಾರ ಚಿಕ್ಕಾಸಿನ ಪರಿಹಾರ ನೀಡದೇ ಇದ್ದರೂ ನಾವು ಪ್ರತಿ ರೈತ ಕುಟುಂಬಗಳಿಗೆ ಎರಡು ಸಾವಿರ ರೂಪಾಯಿಗಳನ್ನು ನೀಡಿದ್ದೇವೆ.

ಸಹಕಾರಿ ಬ್ಯಾಂಕುಗಳಿಂದ ಪಡೆದಿರುವ ಮಧ್ಯಮಾವಾಧಿ ಮತ್ತು ದೀರ್ಘಾವಧಿ ಸಾಲಗಳ ಬಡ್ಡಿ ಮನ್ನಾ ಮಾಡಲು ನಿರ್ಧರಿಸಿದ್ದೇವೆ. ರಾಜ್ಯದ 24 ಜಿಲ್ಲೆಗಳ 106 ತಾಲ್ಲೂಕುಗಳಲ್ಲಿ 100 ಕೋಟಿ ರೂ.ವೆಚ್ಚದಲ್ಲಿ ಕೃಷಿ ಭಾಗ್ಯ ಯೋಜನೆಗೆ ಚಾಲನೆ ನೀಡಿದ್ದೇವೆ. ಕೃಷಿ ಪಂಪ್​ಸೆಟ್​ಗಳಿಗೆ 7 ಗಂಟೆಗಳ ಕಾಲ ಮೂರು ಫೇಸ್ ವಿದ್ಯುತ್ ನೀಡುತ್ತಿದ್ದೇವೆ. ಹದಿನೈದು ವರ್ಷ ಸಾಗುವಳಿ ಮಾಡಿದ ಬಗರ್ ಹುಕುಂ ಭೂಮಿಗಳ ಸಕ್ರಮ ಗೊಳಿಸಲು ತೀರ್ಮಾನಿಸಿದ್ದೇವೆ. ಅಕ್ರಮ ವಿದ್ಯುತ್ ಸಂಪರ್ಕ ಹೊಂದಿರುವ 4 ಲಕ್ಷ ಕೃಷಿ ಪಂಪ್ ಸೆಟ್​ಗಳ ಸಕ್ರಮ ಮಾಡುವ ದಿಟ್ಟ ನಿರ್ಧಾರ ಕೈಗೊಂಡಿದ್ದೇವೆ. ಕೃಷಿಯಂತ್ರಧಾರೆ ಕೇಂದ್ರಗಳನ್ನು ಬಲಪಡಿಸಲು 100 ಕೋಟಿ ರೂ.ವೆಚ್ಚದಲ್ಲಿ ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ತಮ್ಮದು ರೈತ ಪರ ಸರ್ಕಾರ ಎಂದು ಸಮರ್ಥಿಸಿಕೊಂಡಿದ್ದಾರೆ.

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ರೈತರ ಸಾಲ ಮನ್ನಾ ಮಾಡುವಂತೆ ದೇಶಾದ್ಯಂತ ರೈತರು ಒತ್ತಾಯಿಸುತ್ತಿದ್ದರೆ, ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರ ಸರ್ಕಾರ ರೈತರ ಕತ್ತು ಹಿಸುಕಿ ಸಾಯಿಸುವ ಕರಾಳ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲು ಏನೆಲ್ಲ ಕಸರತ್ತು ನಡೆಸಿತ್ತು ಎನ್ನುವುದನ್ನು ಇಡೀ ದೇಶ ಕಂಡಿದೆ. ಕೃಷಿ ಕ್ಷೇತ್ರವನ್ನು ಕಾರ್ಪೊರೇಟ್ ಧಣಿಗಳಿಗೆ ಒತ್ತೆ ಇಡುವ ಬಿಜೆಪಿಯ ಹುನ್ನಾರವನ್ನು ದೇಶದ ರೈತರು ಅರ್ಥಮಾಡಿಕೊಂಡಿದ್ದಾರೆ. ತಮ್ಮ ರೈತ ವಿರೋಧಿ ಕೃತ್ಯಗಳನ್ನು ಮುಚ್ಚಿಹಾಕಲು ಬಿಜೆಪಿ ನಾಯಕರು ಆಗಾಗ ತಿರುಚಿದ ಹೇಳಿಕೆಗಳನ್ನು ಹಿಡ್ಕೊಂಡು ಎದೆ ಬಡಿದುಕೊಳ್ಳುತ್ತಿತ್ತಾರೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ’’ಬರಗಾಲದ ಸಮಯದಲ್ಲಿ ರೈತರು ಸಾಲ ಮನ್ನಾದ ನಿರೀಕ್ಷೆ ಇಟ್ಟುಕೊಳ್ತಾರೆ’’: ಸಚಿವ ಶಿವಾನಂದ ಪಾಟೀಲ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.