ಬೆಂಗಳೂರು: ಹಾಸನ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೊತೆಯಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ನೇತೃತ್ವದ ಜೆಡಿಎಸ್ ನಿಯೋಗ ಚರ್ಚೆ ನಡೆಸಿತು.
ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಶಿವಲಿಂಗೇಗೌಡ, ಬೇಲೂರು ಶಾಸಕ ಲಿಂಗೇಶ್ ಸೇರಿದಂತೆ ಹಾಸನ ಜಿಲ್ಲೆಯ ಶಾಸಕರು ಆಗಮಿಸಿದರು.
ಜಿಲ್ಲೆಯಲ್ಲಿನ ಅಭಿವೃದ್ಧಿ ಕಾಮಗಾರಿಗಳು, ಯೋಜನೆಗಳ ಸ್ಥಿತಿಗತಿ, ಮಂಜೂರಾಗಿರುವ ಯೋಜನೆಗಳ ಪ್ರಗತಿ ಸೇರಿದಂತೆ ಹಾಸನ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತು ಸಿಎಂ ಜೊತೆ ಚರ್ಚೆ ನಡೆಸಿದರು. ಯೋಜನೆಗಳಿಗೆ ಅಗತ್ಯ ಹಾಣಕಾಸು ಬಿಡುಗಡೆ ಮಾಡಿ ತ್ವರಿತವಾಗಿ ಪೂರ್ಣಗೊಳ್ಳಲು ಸಹಕಾರ ನೀಡುವಂತೆ ಮನವಿ ಮಾಡಿದರು.
ರೇವಣ್ಣ ನೇತೃತ್ವದ ಜೆಡಿಎಸ್ ನಿಯೋಗದ ಮನವಿ ಆಲಿಸಿದ ಸಿಎಂ, ಎಲ್ಲವನ್ನೂ ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳಲಾಗುತ್ತದೆ. ಪರಿಶೀಲನೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು ಎನ್ನಲಾಗಿದೆ.