ETV Bharat / state

ಸಭಾಪತಿ ಸ್ಥಾನ ಜೆಡಿಎಸ್​​ಗೆ ಬಿಟ್ಟು ಕೊಡಲು ಸಿಎಂ ಗ್ರೀನ್ ಸಿಗ್ನಲ್!?

ವಿಧಾನ ಪರಿಷತ್ ಸಭಾಪತಿ ಸ್ಥಾನವನ್ನು ಜೆಡಿಎಸ್​​ಗೆ ಬಿಟ್ಟುಕೊಡಲು ಬಿಜೆಪಿ ಕಡೆಗೂ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಸಭಾಪತಿ ಸ್ಥಾನ ಜೆಡಿಎಸ್​​ಗೆ ಬಿಟ್ಟು ಕೊಡಲು ಸಿಎಂ ಗ್ರೀನ್ ಸಿಗ್ನಲ್

author img

By

Published : Jan 27, 2021, 10:54 PM IST

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನವನ್ನು ಜೆಡಿಎಸ್​​ಗೆ ಬಿಟ್ಟುಕೊಡಲು ಬಿಜೆಪಿ ಕಡೆಗೂ ನಿರ್ಧಾರ ಕೈಗೊಂಡಿದ್ದು, ಉಪಸಭಾಪತಿ ಸ್ಥಾನಕ್ಕೆ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಪರಿಷತ್ ಸದಸ್ಯರ ಸಭೆ ನಂತರ ಸಿಎಂ ಯಡಿಯೂರಪ್ಪ ತೀರ್ಮಾನ ಕೈಗೊಂಡಿದ್ದಾರೆ ಎಂದು ಬಿಜೆಪಿ ಆಪ್ತ ಮೂಲಗಳಿಂದ ತಿಳಿದು ಬಂದಿದೆ.

ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ವಿಧಾನ ಪರಿಷತ್ ಸದಸ್ಯರು ಹಾಗೂ ಹಿರಿಯ ಸಚಿವರೊಂದಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಭೆ ನಡೆಸಿ ಎಂಎಲ್ಸಿಗಳಿಂದ ಅಭಿಪ್ರಾಯ ಸಂಗ್ರಹ ಮಾಡಿದರು. ಸಭಾಪತಿ ಸ್ಥಾನ ಜೆಡಿಎಸ್​​​ಗೆ ನೀಡಬಾರದು ಎಂದು ಬಿಜೆಪಿ ಸದಸ್ಯರು ಮನವಿ ಮಾಡಿದರು.

ಅಭಿಪ್ರಾಯ ಆಲಿಸಿದ ಸಿಎಂ ಈ ಬಗ್ಗೆ ಮತ್ತೆ ಜೆಡಿಎಸ್ ಜೊತೆ ಮಾತುಕತೆ ನಡೆಸುತ್ತೇವೆ. ಆದರೆ ಯಾವುದೇ ನಿರ್ಧಾರ ಕೈಗೊಂಡರೂ ಅದನ್ನು ಒಪ್ಪಿಕೊಳ್ಳಬೇಕು, ಪರಿಸ್ಥಿತಿ ಅರ್ಥ ಮಾಡಿಕೊಂಡು ಸಹಕಾರ ನೀಡಬೇಕು. ಹಿರಿಯ ಸಚಿವರನ್ನು ಕಳಿಸಿ ಮತ್ತೊಮ್ಮೆ ಜೆಡಿಎಸ್ ನಾಯಕರ ಜೊತೆ ಸಮಾಲೋಚನೆ ನಡೆಸುತ್ತೇವೆ ಎನ್ನುವ ಭರವಸೆ ನೀಡಿ ಸಿಎಂ ಎಂಎಲ್ಸಿಗಳ ಸಭೆ ಮುಗಿಸಿದ್ದರು.

ನಂತರ ಹಿರಿಯ ಸಚಿವರಾದ ಬಸವರಾಜ ಬೊಮ್ಮಾಯಿ, ಆರ್.ಅಶೋಕ್ ಜೊತೆ ಚರ್ಚೆ ನಡೆಸಿದ ಸಿಎಂ ಯಡಿಯೂರಪ್ಪ, ಸದ್ಯದ ಸ್ಥಿತಿಯಲ್ಲಿ ಜೆಡಿಎಸ್​​ಗೆ ಸಭಾಪತಿ ಸ್ಥಾನ ನೀಡುವುದೇ ಸೂಕ್ತ ಎನ್ನುವ ಅಭಿಪ್ರಾಯಕ್ಕೆ ಬಂದಿದ್ದು ಉಪ ಸಭಾಪತಿ ಸ್ಥಾನವನ್ನು ಪಡೆಯಲು ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಸಭಾಪತಿ ಸ್ಥಾನವನ್ನು ಜೆಡಿಎಸ್​​ಗೆ ಬಿಟ್ಟುಕೊಡುತ್ತಿದ್ದು, ಉಪ ಸಭಾಪತಿ ಸ್ಥಾನಕ್ಕೆ ನಾಳೆ ಬಿಜೆಪಿ ಅಭ್ಯರ್ಥಿಯಾಗಿ ಹಿರಿಯ ಸದಸ್ಯ ಪ್ರಾಣೇಶ್ ನಾಮಪತ್ರ ಸಲ್ಲಿಸಲಿ ಎಂದು ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ನಾಳೆ ಈ ಬಗ್ಗೆ ಪಕ್ಷದಿಂದ ಅಧಿಕೃತ ಆದೇಶ ಹೊರಬೀಳಲಿದೆ ಎನ್ನಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.