ಬೆಂಗಳೂರು: ಬಳ್ಳಾರಿ ಜಿಲ್ಲೆಯ ಪಾಪಿನಾಯಕನಹಳ್ಳಿ ಮತ್ತು ಇತರೆ ಗಣಿಬಾಧಿತ 10 ಗ್ರಾಮಗಳಿಗೆ ತುಂಗ ಭದ್ರಾ ನದಿಯಿಂದ ಶಾಶ್ವತ ಕುಡಿಯುವ ನೀರು ಪೂರೈಸುವ ಮತ್ತು 23 ಕೆರೆಗಳನ್ನು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ಇದನ್ನೂ ಓದಿ: ಎಂದಿಗೂ ಬತ್ತದ ಹರಿಶಂಕರ ತೀರ್ಥದಲ್ಲಿ ಅದಿರು ಮಿಶ್ರಿತ ನೀರು ಪತ್ತೆ: ಭಕ್ತರಲ್ಲಿ ಆತಂಕ..!
ಸಿಎಂ ಗೃಹ ಕಚೇರಿ ಕೃಷ್ಣಾದಿಂದ ವರ್ಚುಯಲ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಶಂಕುಸ್ಥಾಪನೆ ನೆರೆವೇರಿಸಿದರು. ಕೊರೊನಾ ಮುಂಜಾಗ್ರತಾ ಕ್ರಮದ ಕಾರಣದಿಂದಾಗಿ ಕಾರ್ಯಕ್ರಮದಲ್ಲಿ ಖುದ್ದಾಗಿ ಪಾಲ್ಗೊಳ್ಳದ ಸಿಎಂ ಯಡಿಯೂರಪ್ಪ ವರ್ಚುವಲ್ ಮೂಲಕ ಭಾಗಿಯಾದರು.