ETV Bharat / state

ನೂರಕ್ಕೆ ನೂರರಷ್ಟು ತೆರಿಗೆ ಸಂಗ್ರಹದ ಗುರಿ ಮುಟ್ಟಲಿದ್ದೇವೆ: ಸಿಎಂ ವಿಶ್ವಾಸ - ತೆರಿಗೆ ಸಂಗ್ರಹಣಾ ಇಲಾಖೆ

ಸಿಎಂ‌ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ತೆರಿಗೆ ಸಂಗ್ರಹಣಾ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಯಿತು. ಈ ವೇಳೆ ಮಾತನಾಡಿದ ಸಿಎಂ ಯಡಿಯೂರಪ್ಪ ಈ ಬಾರಿ 1,17,044 ಕೋಟಿ ರೂಪಾಯಿ ತೆರಿಗೆ ಸಂಗ್ರಹ ಗುರಿ ಇದೆ ಎಂದು ಹೇಳಿದ್ರು.

CM meeting
ಯಡಿಯೂರಪ್ಪ
author img

By

Published : Jan 6, 2020, 4:31 PM IST

ಬೆಂಗಳೂರು: ಎಲ್ಲ ಇಲಾಖೆಗಳಿಂದ ಒಟ್ಟು 1,17,044 ಕೋಟಿ ರೂ‌ಪಾಯಿ ತೆರಿಗೆ ಸಂಗ್ರಹದ ಗುರಿ ಹೊಂದಿದ್ದು, ನೂರಕ್ಕೆ ನೂರರಷ್ಟು ಗುರಿ ಮುಟ್ಟಲಿದ್ದೇವೆ ಎಂದು ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತೆರಿಗೆ ಸಂಗ್ರಹಣಾ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ

ಸಿಎಂ‌ ನೇತೃತ್ವದಲ್ಲಿ ವಿಧಾನಸೌಧದಲ್ಲಿ ತೆರಿಗೆ ಸಂಗ್ರಹಣಾ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಇಲಾಖೆ, ಸಾರಿಗೆ ಇಲಾಖೆ, ನೋಂದಣಿ ಮತ್ತು ಮುದ್ರಾಂಕ, ಗಣಿ ಮತ್ತು ಭೂವಿಜ್ಞಾನ ಇಲಾಖೆಗಳ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಈ ವರ್ಷ ನಾವು 1,17,044 ಕೋಟಿ ರೂ. ಗುರಿ ಹೊಂದಿದ್ದೇವೆ. ಬೇರೆ ಇಲಾಖೆಗಳಿಂದ ಹೆಚ್ಚು ತೆರಿಗೆ ಸಂಗ್ರಹ‌‌ ಮಾಡಿ, ಎಲ್ಲಿ ಕೊರತೆ ಆಗುತ್ತದೆಯೋ ಅದನ್ನು ಸರಿದೂಗಿಸಲಿದ್ದೇವೆ. ಆ ಮೂಲಕ ಈ‌ ಗುರಿ ಮುಟ್ಟಲೇಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ನೂರಕ್ಕೆ ನೂರರಷ್ಟು ಈ ಗುರಿ ಮುಟ್ಟಲು ಎಲ್ಲ ಸಾಧ್ಯ ಪ್ರಯತ್ನಗಳನ್ನು ಮಾಡಲಿದ್ದೇವೆ ಎಂದು ತಿಳಿಸಿದರು.

ರಾಜ್ಯದಲ್ಲಿ ವಾಣಿಜ್ಯ ತೆರಿಗೆ ಇಲಾಖೆಗೆ 76,046 ಕೋಟಿ ರೂ. ತೆರಿಗೆ ಸಂಗ್ರಹ ಗುರಿ ಇದ್ದು, ಡಿಸೆಂಬರ್ 2019 ರ ಅಂತ್ಯದವರೆಗೆ 55,984 ಕೋಟಿ ರೂ. ತೆರಿಗೆ ಸಂಗ್ರಹ ಆಗಿದ್ದು, ಶೇ. 73.6 ರಷ್ಟು ಸಾಧನೆ ಆಗಿದೆ. ಇನ್ನು, ಜಿಎಸ್‍ಟಿ ಸಂಗ್ರಹದಲ್ಲಿ ಇಲ್ಲಿಯವರೆಗೆ ರಾಜ್ಯದ ಸಾಧನೆ 61,245 ಕೋಟಿ ರೂ. ಇದ್ದು, ರಾಷ್ಟ್ರದಲ್ಲೇ ಎರಡನೇ ಸ್ಥಾನದಲ್ಲಿದ್ದೇವೆ. ರಾಜ್ಯದ ಜಿಎಸ್‍ಟಿ ಬೆಳವಣಿಗೆ ಶೇ. 14.2 ರಷ್ಟು ಇದೆ ಎಂದು ತಿಳಿಸಿದರು.

ತಡವಾಗಿ ಜಿಎಸ್‍ಟಿ ರಿಟರ್ನ್​ ಫೈಲ್ ಮಾಡುವ ಮತ್ತು ರಿಟರ್ನ್​ ಫೈಲ್ ಮಾಡದೇ ಇರುವವರ ವ್ಯಾಪಾರ ಸ್ಥಳಗಳಿಗೇ ಭೇಟಿ ನೀಡಿ 551.44 ಕೋಟಿ ತೆರಿಗೆ ಸಂಗ್ರಹಿಸಲಾಗಿದೆ. 2020ರ ಎಪ್ರಿಲ್ 1ರಿಂದ ಹೊಸ ಜಿಎಸ್‍ಟಿ ರಿಟರ್ನ್ ನಮೂನೆ ಜಾರಿಗೆ ಬರಲಿದೆ. ಹೊಸ ನಮೂನೆಯನ್ನು ತೆರಿಗೆದಾರರಲ್ಲಿ ಜನಪ್ರಿಯಗೊಳಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಸಿಎಂ ವಿವರಿಸಿದರು.

ಅಬಕಾರಿ ಇಲಾಖೆಯಲ್ಲಿ ಈ ವರ್ಷ 20,950 ಕೋಟಿ ರೂ. ರಾಜಸ್ವ ಸಂಗ್ರಹದ ವಾರ್ಷಿಕ ಗುರಿ ನಿಗದಿಯಾಗಿದೆ. ಈವರೆಗೆ 16,187.95 ಕೋಟಿ ರೂ. ರಾಜಸ್ವ ಸಂಗ್ರಹ ಆಗಿದ್ದು, ಶೇ. 77.23 ರಷ್ಟು ಗುರಿ ಸಾಧನೆ ಆಗಿದೆ. ಕಳೆದ ವರ್ಷ ಇದೇ ಅವಧಿಗೆ ಹೋಲಿಸಿದರೆ 1165.33 ಕೋಟಿ ರೂ. ತೆರಿಗೆ ಸಂಗ್ರಹವಾಗಿದ್ದು, ಬೆಳವಣಿಗೆ ದರ ಶೇ. 7.76 ರಷ್ಟಿದೆ ಎಂದು ತಿಳಿಸಿದರು.

ಸಾರಿಗೆ ಇಲಾಖೆಯಲ್ಲಿ ಒಟ್ಟು 7100 ಕೋಟಿ ರೂ. ತೆರಿಗೆ ಸಂಗ್ರಹ ಗುರಿ ಹೊಂದಿದ್ದೇವೆ. ಸಾರಿಗೆ ಇಲಾಖೆಯಿಂದ 6601.96 ಕೋಟಿ ರೂ. ಹಾಗೂ ಸಾರಿಗೆ ಸಂಸ್ಥೆಗಳಿಂದ 498.04 ಕೋಟಿ ರೂ. ಆದಾಯದ ಗುರಿ ಹೊಂದಲಾಗಿದೆ. ಈವರೆಗೆ 4864.80 ಕೋಟಿ ರಾಜಸ್ವ ಸಂಗ್ರಹ ಆಗಿದ್ದು, ವಾಹನಗಳ ಮಾರಾಟ ಕುಸಿದಿರುವುದರಿಂದ ಸುಮಾರು 460.20 ಕೋಟಿ ಕೊರತೆ ಆಗಿದೆ. ಈ ಇಲಾಖೆಯಲ್ಲಿ ವರ್ಷಾಂತ್ಯಕ್ಕೆ ಸುಮಾರು 300 ಕೋಟಿ ಕೊರತೆಯಾಗುವ ಸಾಧ್ಯತೆ ಇದೆ ಎಂದು ಇದೇ ವೇಳೆ ಬಿಎಸ್ವವೈ ಹೇಳಿದ್ರು.

ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ 11,828 ಕೋಟಿ ರೂ. ರಾಜಸ್ವ ಸಂಗ್ರಹದ ವಾರ್ಷಿಕ ಗುರಿ ಹೊಂದಿದ್ದು, ಈ ವರೆಗೆ 8297.65 ಕೋಟಿ ರೂ. ಸಂಗ್ರಹ ಆಗಿದ್ದು, ಕಳೆದ ವರ್ಷಕ್ಕಿಂತ 410.75 ಕೋಟಿ ರೂ. ಹೆಚ್ಚಳವಾಗಿದೆ ಎಂದರು.

ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗುತ್ತೇನೆ:

ಕೇಂದ್ರದಿಂದ ಬಾಕಿ ಹಣ ಬಿಡುಗಡೆ ವಿಚಾರವಾಗಿ ಮಾತನಾಡಿದ ಸಿಎಂ, 3-4 ದಿನಗಳಲ್ಲಿ ದೆಹಲಿಗೆ ಹೋಗುತ್ತೇನೆ. ಹಣಕಾಸು ಸಚಿವರನ್ನು ಭೇಟಿಯಾಗಿ ಹಣ ಬಿಡುಗಡೆಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

ಕೇಂದ್ರದಿಂದ ಜಿಎಸ್​ಟಿ ಪರಿಹಾರ ಬಾಕಿ ಹಣ ಬರುವ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಬೊಮ್ಮಾಯಿ, ಈಗಾಗಲೇ 3500 ಕೋಟಿ ರೂಪಾಯಿ ಬಂದಿದೆ. ಜಿಎಸ್ ಟಿ ಕೌನ್ಸಿಲ್ ನಲ್ಲಿ ಬಾಕಿ ಹಣ ಕೊಡಿ ಅಂತ ನಾವು ಮನವಿ ಮಾಡಿದ್ದೇವೆ. ಎರಡು ಕಂತಿನ ಹಣ ಬಾಕಿ‌ ಇದೆ. ಜನವರಿ ಕೊನೆ ಮತ್ತು ಮಾರ್ಚ್ ಕೊನೆ ವಾರ ಎರಡು ಕಂತು ಹಣ ಬರುವ ವಿಶ್ವಾಸ ಇದೆ ಎಂದರು.

Intro:Body:KN_BNG_02_TAXMEETING_CMBYTE_SCRIPT_7201951

ನೂರಕ್ಕೆ ನೂರರಷ್ಟು ತೆರಿಗೆ ಸಂಗ್ರಹದ ಗುರಿ ಮುಟ್ಟಲಿದ್ದೇವೆ: ಸಿಎಂ

ಬೆಂಗಳೂರು: ಎಲ್ಲ ಇಲಾಖೆಗಳಿಂದ ಒಟ್ಟು 1,17,044 ಕೋಟಿ ರೂ‌. ತೆರಿಗೆ ಸಂಗ್ರಹದ ಗುರಿ ಹೊಂದಿದ್ದು, ನೂರಕ್ಕೆ ನೂರರಷ್ಟು ಆ ಗುರಿ ಮುಟ್ಟಲಿದ್ದೇವೆ ಎಂದು ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಸಿಎಂ‌ ನೇತೃತ್ವದಲ್ಲಿ ವಿಧಾನಸೌಧದಲ್ಲಿ ತೆರಿಗೆ ಸಂಗ್ರಹಣಾ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಇಲಾಖೆ, ಸಾರಿಗೆ ಇಲಾಖೆ, ನೋಂದಣಿ ಮತ್ತು ಮುದ್ರಾಂಕ, ಗಣಿ ಮತ್ತು ಭೂವಿಜ್ಞಾನ ಇಲಾಖೆಗಳ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಈ ವರ್ಷ ನಾವು 1,17,044 ಕೋಟಿ ರೂ. ಗುರಿ ಹೊಂದಿದ್ದೇವೆ. ಬೇರೆ ಇಲಾಖೆಗಳಿಂದ ಹೆಚ್ಚು ತೆರಿಗೆ ಸಂಗ್ರಹ‌‌ ಮಾಡಿ, ಎಲ್ಲಿ ಕೊರತೆ ಆಗುತ್ತದೆ ಅದನ್ನು ಸರಿದೂಗಿಸಲಿದ್ದೇವೆ. ಆ ಮೂಲಕ ಈ‌ ಗುರಿ ಮುಟ್ಟಲೇ ಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ನೂರಕ್ಕೆ ನೂರರಷ್ಟು ಈ ಗುರಿ ಮುಟ್ಟಲು ಎಲ್ಲ ಸಾಧ್ಯ ಪ್ರಯತ್ನಗಳನ್ನು ಮಾಡಲಿದ್ದೇವೆ ಎಂದು ತಿಳಿಸಿದರು.

ರಾಜ್ಯದಲ್ಲಿ ವಾಣಿಜ್ಯ ತೆರಿಗೆ ಇಲಾಖೆಗೆ 76,046 ಕೋಟಿ ರೂ. ತೆರಿಗೆ ಸಂಗ್ರಹ ಗುರಿ ಇದ್ದು, ಡಿಸೆಂಬರ್ 2019 ರ ಅಂತ್ಯದ ವರೆಗೆ 55,984 ಕೋಟಿ ರೂ. ತೆರಿಗೆ ಸಂಗ್ರಹ ಆಗಿದ್ದು, ಶೇ. 73.6 ರಷ್ಟು ಸಾಧನೆ ಆಗಿದೆ. ಇನ್ನು ಜಿಎಸ್‍ಟಿ ಸಂಗ್ರಹದಲ್ಲಿ ಇಲ್ಲಿಯ ವರೆಗೆ ರಾಜ್ಯದ ಸಾಧನೆ 61,245 ಕೋಟಿ ರೂ. ಇದ್ದು, ರಾಷ್ಟ್ರದಲ್ಲೆ ಎರಡನೇ ಸ್ಥಾನದಲ್ಲಿದ್ದೇವೆ. ರಾಜ್ಯದ ಜಿಎಸ್‍ಟಿ ಬೆಳವಣಿಗೆ ಶೇ. 14.2 ರಷ್ಟು ಇದೆ ಎಂದು ತಿಳಿಸಿದರು.

ತಡವಾಗಿ ಜಿಎಸ್‍ಟಿ ರಿಟನ್ರ್ಸ್ ಫೈಲ್ ಮಾಡುವ ಮತ್ತು ರಿಟನ್ರ್ಸ್ ಫೈಲ್ ಮಾಡದೇ ಇರುವವರ ವ್ಯಾಪಾರ ಸ್ಥಳಗಳಿಗೇ ಭೇಟಿ ನೀಡಿ 551.44 ಕೋಟಿ ತೆರಿಗೆ ಸಂಗ್ರಹಿಸಲಾಗಿದೆ.2020ರ ಏಪ್ರಿಲ್ 1ರಿಂದ ಹೊಸ ಜಿಎಸ್‍ಟಿ ರಿಟನ್ರ್ಸ್ ನಮೂನೆ ಜಾರಿಗೆ ಬರಲಿದೆ. ಹೊಸ ನಮೂನೆಯನ್ನು ತೆರಿಗೆದಾರರಲ್ಲಿ ಜನಪ್ರಿಯಗೊಳಿಸಲು ಕ್ರಮ ವಹಿಸಲಾಗುತ್ತಿದೆ ಎಂದು ವಿವರಿಸಿದರು.

ಅಬಕಾರಿ ಇಲಾಖೆಯಲ್ಲಿ ಈ ವರ್ಷ 20,950 ಕೋಟಿ ರೂ. ರಾಜಸ್ವ ಸಂಗ್ರಹದ ವಾರ್ಷಿಕ ಗುರಿ ನಿಗದಿಯಾಗಿದೆ. ಈ ವರೆಗೆ 16,187.95 ಕೋಟಿ ರೂ. ರಾಜಸ್ವ ಸಂಗ್ರಹ ಆಗಿದ್ದು, ಶೇ. 77.23 ರಷ್ಟು ಗುರಿ ಸಾಧನೆ ಆಗಿದೆ. ಕಳೆದ ವರ್ಷ ಇದೇ ಅವಧಿಗೆ ಹೋಲಿಸಿದರೆ 1165.33 ಕೋಟಿ ರೂ. ತೆರಿಗೆ ಸಂಗ್ರಹವಾಗಿದ್ದು, ಬೆಳವಣಿಗೆ ದರ ಶೇ. 7.76 ರಷ್ಟಿದೆ ಎಂದು ತಿಳಿಸಿದರು.

ಸಾರಿಗೆ ಇಲಾಖೆಯಲ್ಲಿ ಒಟ್ಟು 7100 ಕೋಟಿ ರೂ. ತೆರಿಗೆ ಸಂಗ್ರಹ ಗುರಿ ಹೊಂದಿದ್ದೇವೆ. ಸಾರಿಗೆ ಇಲಾಖೆಯಿಂದ 6601.96 ಕೋಟಿ ರೂ ಹಾಗೂ ಸಾರಿಗೆ ಸಂಸ್ಥೆಗಳಿಂದ 498.04 ಕೋಟಿ ರೂ. ಆದಾಯದ ಗುರಿ ಹೊಂದಲಾಗಿದೆ. ಈವರೆಗೆ 4864.80 ಕೋಟಿ ರಾಜಸ್ವ ಸಂಗ್ರಹ ಆಗಿದ್ದು, ವಾಹನಗಳ ಮಾರಾಟ ಕುಸಿದಿರುವುದರಿಂದ ಸುಮಾರು 460.20 ಕೋಟಿ ಕೊರತೆ ಆಗಿದೆ. ಈ ಇಲಾಖೆಯಲ್ಲಿ ವರ್ಷಾಂತ್ಯಕ್ಕೆ ಸುಮಾರು 300 ಕೋಟಿ ಕೊರತೆಯಾಗುವ ಸಾಧ್ಯತೆ ಇದೆ ಎಂದು ಇದೇ ವೇಳೆ ತಿಳಿಸಿದರು.

ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ 11,828 ಕೋಟಿ ರೂ. ರಾಜಸ್ವ ಸಂಗ್ರಹದ ವಾರ್ಷಿಕ ಗುರಿ ಹೊಂದಿದ್ದು, ಈ ವರೆಗೆ 8297.65 ಕೋಟಿ ರೂ. ಸಂಗ್ರಹ ಆಗಿದ್ದು, ಕಳೆದ ವರ್ಷಕ್ಕಿಂತ 410.75 ಕೋಟಿ ರೂ. ಹೆಚ್ಚಳವಾಗಿದೆ ಎಂದರು.

ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗುತ್ತೇನೆ:

ಕೇಂದ್ರದಿಂದ ಬಾಕಿ ಹಣ ಬಿಡುಗಡೆ ವಿಚಾರವಾಗಿ ಮಾತನಾಡಿದ ಅವರು, 3-4 ದಿನಗಳಲ್ಲಿ ದೆಹಲಿಗೆ ಹೋಗುತ್ತೇನೆ. ಹಣಕಾಸು ಸಚಿವರನ್ನು ಭೇಟಿಯಾಗಿ ಹಣ ಬಿಡುಗಡೆಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

ಕೇಂದ್ರದಿಂದ ಜಿಎಸ್ ಟಿ ಪರಿಹಾರ ಬಾಕಿ ಹಣ ಬರುವ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಬೊಮ್ಮಾಯಿ, ಈಗಾಗಲೇ 3500 ಕೋಟಿ ಬಂದಿದೆ. ಜಿಎಸ್ ಟಿ ಕೌನ್ಸಿಲ್ ನಲ್ಲಿ ಬಾಕಿ ಹಣ ಕೊಡಿ ಅಂತ ನಾವು ಮನವಿ ಮಾಡಿದ್ದೇವೆ. ಎರಡು ಕಂತಿನ ಹಣ ಬಾಕಿ‌ ಇದೆ. ಜನವರಿ ಕೊನೆ ಮತ್ತು ಮಾರ್ಚ್ ಕೊನೆ ವಾರ ಎರಡು ಕಂತು ಹಣ ಬರುವ ವಿಶ್ವಾಸ ಇದೆ ಎಂದು ತಿಳಿಸಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.