ಮೈಸೂರು: ಶಾಸಕ ಕಂಪ್ಲಿ ಗಣೇಶ್‌ರನ್ನು ಬಂಧಿಸುವಂತೆ ಆದೇಶ ನೀಡಲಾಗಿದೆ. ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ಟ್ವೀಟ್ಗೆ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಇಂದು ಸುತ್ತೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಸಿಎಂ ಕುಮಾರಸ್ವಾಮಿ, ಕೇಂದ್ರ ಸರ್ಕಾರ ಭೂಗತ ಪಾತಕಿ ರವಿ ಪೂಜಾರಿಯನ್ನು ಬಂಧಿಸಿದೆ. ಕರ್ನಾಟಕದಲ್ಲಿ ತಲೆಮರೆಸಿಕೊಂಡಿರುವ ಕಂಪ್ಲಿ ಶಾಸಕರನ್ನು ಬಂಧಿಸುವ ಪೌರುಷವನ್ನು ಕುಮಾರಸ್ವಾಮಿ ತೋರಲಿ ಎಂದು ಬಿಜೆಪಿ ಟ್ವೀಟ್ ಮಾಡಿತ್ತು.
ಅಣ್ಣಾ ಕುಮಾರಣ್ಣ, ರವಿ ಪೂಜಾರಿಯನ್ನು ಬಂಧಿಸಿದ್ದು ನಮ್ಮ ಸಮ್ಮಿಶ್ರ ಸರ್ಕಾರವೇ ಎಂದು ತಮಗೆ ತಾವೇ ಕೀರ್ತಿ ಪಡೆಯುವ ಮೊದಲು, ಕಂಪ್ಲಿ ಶಾಸಕ ಗಣೇಶ್‌ರನ್ನು ಬಂಧಿಸಿ ನಿಮ್ಮ ಪೌರುಷ ತೋರಿಸಿ. pic.twitter.com/CwLU4Mdgex
— BJP Karnataka (@BJP4Karnataka) February 2, 2019 " class="align-text-top noRightClick twitterSection" data="
">ಅಣ್ಣಾ ಕುಮಾರಣ್ಣ, ರವಿ ಪೂಜಾರಿಯನ್ನು ಬಂಧಿಸಿದ್ದು ನಮ್ಮ ಸಮ್ಮಿಶ್ರ ಸರ್ಕಾರವೇ ಎಂದು ತಮಗೆ ತಾವೇ ಕೀರ್ತಿ ಪಡೆಯುವ ಮೊದಲು, ಕಂಪ್ಲಿ ಶಾಸಕ ಗಣೇಶ್‌ರನ್ನು ಬಂಧಿಸಿ ನಿಮ್ಮ ಪೌರುಷ ತೋರಿಸಿ. pic.twitter.com/CwLU4Mdgex
— BJP Karnataka (@BJP4Karnataka) February 2, 2019ಅಣ್ಣಾ ಕುಮಾರಣ್ಣ, ರವಿ ಪೂಜಾರಿಯನ್ನು ಬಂಧಿಸಿದ್ದು ನಮ್ಮ ಸಮ್ಮಿಶ್ರ ಸರ್ಕಾರವೇ ಎಂದು ತಮಗೆ ತಾವೇ ಕೀರ್ತಿ ಪಡೆಯುವ ಮೊದಲು, ಕಂಪ್ಲಿ ಶಾಸಕ ಗಣೇಶ್‌ರನ್ನು ಬಂಧಿಸಿ ನಿಮ್ಮ ಪೌರುಷ ತೋರಿಸಿ. pic.twitter.com/CwLU4Mdgex
— BJP Karnataka (@BJP4Karnataka) February 2, 2019
ರಾಜ್ಯ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ ಸಿಎಂ, ಈಗಾಗಲೇ ಕಂಪ್ಲಿ ಶಾಸಕರನ್ನು ಬಂಧಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಶೀಘ್ರವೇ ಒಳ್ಳೆಯ ಸುದ್ದಿಯನ್ನು ನೀಡಲಾಗುವುದು, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು.
ಕೇಂದ್ರ ಸರ್ಕಾರದ ನಿನ್ನೆಯ ಬಜೆಟ್ ಕರ್ನಾಟಕದ ಪಾಲಿಗೆ ನಿರಾಶಾದಾಯಕವಾಗಿದೆ. ಯಾವುದೇ ಯೋಜನೆಗಳನ್ನು ಕರ್ನಾಟಕಕ್ಕೆ ನೀಡಿಲ್ಲ. ರಾಜ್ಯದ ಯೋಜನೆಗಳನ್ನೇ ನಮ್ಮದು ಎಂದು ಕೇಂದ್ರ ಸರ್ಕಾರ ಬಿಂಬಿಸಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದ ಸಿಎಂ, ರೈತರ ಖಾತೆಗೆ ಹಣ ವರ್ಗಾವಣೆ ಬಗ್ಗೆ ವ್ಯಂಗ್ಯವಾಡಿದರು. ಇನ್ನು ಆದಾಯ ತೆರಿಗೆ ಮಿತಿ ಏರಿಕೆ ಜನರಿಗೆ ದೋಖಾ ಎಂದೂ ಹೇಳಿದರು.