ETV Bharat / state

ಸಿ.ಎಂ. ಇಬ್ರಾಹಿಂ ಅಸಮಾಧಾನ ಶಮನಕ್ಕೆ ಮಾತುಕತೆ ನಡೆಸುತ್ತೇನೆ: ಡಿಕೆಶಿ

ಕಾಂಗ್ರೆಸ್​ನ ಹಿರಿಯ ನಾಯಕ ಸಿ.ಎಂ. ಇಬ್ರಾಹಿಂ ಅವರು ಪಕ್ಷದ ಕೆಲಸ ಮಾಡಿಕೊಂಡು ಬಂದಿದ್ದಾರೆ. ಅಸಮಾಧಾನ ಇರುತ್ತದೆ. ನಾನು ಅವರ ಬಳಿ ಮಾತುಕತೆ ನಡೆಸುತ್ತೇನೆ. ಕಾಂಗ್ರೆಸ್​ನಲ್ಲಿ ಇಬ್ರಾಹಿಂ, ನಾನು, ಸಿದ್ದರಾಮಯ್ಯ ಸೇರಿದಂತೆ ಯಾರೂ ತಬ್ಬಲಿಯಾಗಿಲ್ಲ. ನಾವೆಲ್ಲಾ ಒಂದೇ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

author img

By

Published : Jan 27, 2022, 5:44 PM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು: ವಿಧಾನ ಪರಿಷತ್​ ಸದಸ್ಯ, ಕಾಂಗ್ರೆಸ್​ನ ಹಿರಿಯ ಮುಖಂಡ ಸಿ.ಎಂ. ಇಬ್ರಾಹಿಂ ಅಸಮಾಧಾನ ಶಮನಕ್ಕೆ ಅವರೊಂದಿಗೆ ಮಾತುಕತೆ ನಡೆಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ನನ್ನ ಹಾಗೂ ಕಾಂಗ್ರೆಸ್ ಸಂಬಂಧ ಮುಗಿಯಿತು ಎಂಬ ಸಿ.ಎಂ. ಇಬ್ರಾಹಿಂ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇಬ್ರಾಹಿಂ ಅವರು ಹಿರಿಯ ನಾಯಕರು. ಕಾಂಗ್ರೆಸ್ ಸರ್ಕಾರದಲ್ಲಿ ಮಂತ್ರಿಯಾಗಿದ್ದರು. ಸಿದ್ದರಾಮಯ್ಯ ಅವರ ಕಾಲದಲ್ಲಿ ಹಾಲಿ ಶಾಸಕರನ್ನು ಬಿಟ್ಟು ಅವರಿಗೆ ಟಿಕೆಟ್ ನೀಡಲಾಗಿತ್ತು. ಅವರು ಸೋತ ನಂತರವೂ ಅವರಿಗೆ ಸಂಪುಟ ಸ್ಥಾನಮಾನ ನೀಡಿ ಯೋಜನಾ ಆಯೋಗದ ಮುಖ್ಯಸ್ಥರನ್ನಾಗಿ ಮಾಡಲಾಗಿತ್ತು. ಸತತ ಎರಡು ಬಾರಿ ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಲಾಗಿತ್ತು. ಅವರು ಪಕ್ಷದ ಕೆಲಸ ಮಾಡಿಕೊಂಡು ಬಂದಿದ್ದಾರೆ. ಅಸಮಾಧಾನ ಇರುತ್ತದೆ, ಹೀಗಾಗಿ ಅವರು ಮಾತನಾಡಿದ್ದಾರೆ. ಅವರು ನಮ್ಮ ಸ್ನೇಹಿತರು, ನಮಗೆ ಒಳ್ಳೆಯದನ್ನು ಬಯಸಿದ್ದಾರೆ. ಪಕ್ಷಕ್ಕಾಗಿ ದುಡಿದಿದ್ದಾರೆ. ಖಂಡಿತವಾಗಿಯೂ ಅವರ ಜತೆ ಮಾತನಾಡುತ್ತೇನೆ ಎಂದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದೆ ಎಂಬ ಇಬ್ರಾಹಿಂ ಹೇಳಿಕೆಗೆ ಪ್ರತಿಕ್ರಿಯಿಸಿ ಡಿಕೆಶಿ, ಅವರು ಕಾಂಗ್ರೆಸ್ ಪಕ್ಷದ ಸದಸ್ಯರು. ಪಕ್ಷ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿದೆ. ಅವರು ನೋವಿನಿಂದ ಮಾತನಾಡಿದ್ದಾರೆ. ಅದನ್ನು ಗಂಭೀರವಾಗಿ ತೆಗೆದುಕೊಳ್ಳಬಾರದು. ಕಾಂಗ್ರೆಸ್​ನಲ್ಲಿ ಇಬ್ರಾಹಿಂ, ನಾನು, ಸಿದ್ದರಾಮಯ್ಯ ಸೇರಿದಂತೆ ಯಾರೂ ತಬ್ಬಲಿಯಾಗಿಲ್ಲ. ನಾವೆಲ್ಲಾ ಒಂದೇ ಎಂದು ಪುನರುಚ್ಚರಿಸಿದರು.

ಇದನ್ನೂ ಓದಿ: ಕಾಂಗ್ರೆಸ್ ಜೊತೆ ನನ್ನ ಸಂಬಂಧ ಕಡಿದಿದೆ.. ಶೀಘ್ರ ಎಂಎಲ್​ಸಿ ಸ್ಥಾನಕ್ಕೂ ರಾಜೀನಾಮೆ: ಸಿ ಎಂ ಇಬ್ರಾಹಿಂ ಘೋಷಣೆ

ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹೊತ್ತಲ್ಲಿ, ರೇಸ್ ಕೋರ್ಸ್​ನಲ್ಲಿ ಅಲ್ಟ್ರಾ ಡರ್ಬಿ ಬೆಂಗಳೂರು ರೇಸ್ ನಡೆಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, ಈ ವಿಚಾರವಾಗಿ ನಾನು ಟ್ವೀಟ್ ಮಾಡಿದ್ದೇನೆ. ನಾವು ರಾಜ್ಯದ ಹಿತಕ್ಕಾಗಿ ಪಾದಯಾತ್ರೆ ಮಾಡಿದಾಗ, ನಮ್ಮ ಮೇಲೆ ಕೇಸ್ ದಾಖಲಿಸಿದ್ದಾರೆ. ಈ ವಿಚಾರವಾಗಿ ಮುಖ್ಯಮಂತ್ರಿಗಳು, ಪೊಲೀಸ್ ಮಹಾನಿರ್ದೇಶಕರು, ಗೃಹಮಂತ್ರಿಗಳು ಗಮನಹರಿಸಲಿ. ರಾಜ್ಯಾದ್ಯಂತ ಬಿಜೆಪಿ ನಾಯಕರು ಸಾಕಷ್ಟು ಬಾರಿ ನಿಯಮ ಉಲ್ಲಂಘಿಸಿದ್ದಾರೆ. ರೇಸ್ ಕೋರ್ಸ್ ಆಡಳಿತ ಮಂಡಳಿಯಲ್ಲಿ ಸರ್ಕಾರದ ಅಧಿಕಾರಿಗಳು ಇದ್ದಾರೆ. ಇದರಲ್ಲಿ ಸರ್ಕಾರದ ಪಾತ್ರವೂ ಇದೆ. ಸರ್ಕಾರ ಯಾವ ರೀತಿ ಕ್ರಮ ಕೈಗೊಳ್ಳಲಿದೆ ಎಂದು ನೋಡಿಕೊಂಡು, ಈ ವಿಚಾರವಾಗಿ ಕೋರ್ಟ್​ಗೆ ಮಾಹಿತಿ ನೀಡಬೇಕೋ ಅಥವಾ ನಾವು ಏನು ಮಾಡಬಹುದು ಎಂಬುದನ್ನು ತೀರ್ಮಾನಿಸುತ್ತೇವೆ ಎಂದು ಹೇಳಿದ್ರು.

ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.