ETV Bharat / state

ದೇವೇಗೌಡರ ಪುತ್ರ ವ್ಯಾಮೋಹ ಸಾಬೀತಾಗಿದೆ; ಉಚ್ಚಾಟನೆ ನಿರ್ಧಾರವನ್ನು ಚು.ಆಯೋಗದಲ್ಲಿ ಪ್ರಶ್ನಿಸುವೆ: ಸಿ.ಎಂ.ಇಬ್ರಾಹಿಂ - ​ ETV Bharat Karnataka

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಂಡ ಬಳಿಕ ಸಿ.ಎಂ.ಇಬ್ರಾಹಿಂ ಮಾಧ್ಯಮಗಳೊಂದಿಗೆ ಮಾತನಾಡಿದರು.

ಸಿ.ಎಂ ಇಬ್ರಾಹಿಂ
ಸಿ.ಎಂ ಇಬ್ರಾಹಿಂ
author img

By ETV Bharat Karnataka Team

Published : Oct 19, 2023, 5:07 PM IST

ಬೆಂಗಳೂರು: ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರಿಗೆ ಪುತ್ರ ವ್ಯಾಮೋಹ ಇರುವುದು ಸಾಬೀತಾಗಿದೆ. ನನ್ನನ್ನು ಕೆಣಕಿದ್ದೀರಿ, ಇದರ ಪರಿಣಾಮ ಮುಂದೆ ಕಾದು ನೋಡಿ ಎಂದು ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟಿತರಾದ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.

ಬೆನ್ಸನ್ ಟೌನ್‌ನಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಜೆಡಿಎಸ್ ನಾಯಕರಿಗೆ ನನ್ನನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆಯುವ ಅಧಿಕಾರ ಇಲ್ಲ. ಕಾರ್ಯಕಾರಿ ಸಮಿತಿಯ 2/3ನೇ ಸದಸ್ಯರ ಅನುಮತಿ ಪಡೆದು ಮೊದಲು ನನಗೆ ನೊಟೀಸ್ ಕೊಡಬೇಕು. ನಾನು ಚುನಾವಣಾ ಆಯೋಗದಲ್ಲಿ ಜೆಡಿಎಸ್ ವರಿಷ್ಠರ ನಿರ್ಧಾರವನ್ನು ಪ್ರಶ್ನೆ ಮಾಡುತ್ತೇನೆ. ಇವತ್ತಿನವರೆಗೂ ದೇವೇಗೌಡರನ್ನು ನಾನು ನನ್ನ ತಂದೆ ಸಮಾನರು ಅಂದುಕೊಂಡಿದ್ದೆ. ನನ್ನ ವಿಧಾನಪರಿಷತ್ ಸ್ಥಾನ ಬಿಟ್ಟು ನಿಮ್ಮ ಬಳಿ ಬಂದೆ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಜೆಡಿಎಸ್ ನೂತನ ಅಧ್ಯಕ್ಷರಾಗಿ ಕುಮಾರಸ್ವಾಮಿ ನೇಮಕ.. ಸಿ ಎಂ ಇಬ್ರಾಹಿಂ ಸೇರಿ ರಾಜ್ಯ ಕಾರ್ಯಕಾರಿ ಸಮಿತಿ ವಿಸರ್ಜನೆ

"ಸಿದ್ದರಾಮಯ್ಯಗೆ ಬೈಯ್ಯುತ್ತಿಲ್ಲವೆಂದು ದೇವೇಗೌಡರಿಗೆ ಬೇಸರ": ನಾನು ಸಿದ್ದರಾಮಯ್ಯರನ್ನು ಬೈಯ್ಯುತ್ತಿಲ್ಲವೆಂದು ದೇವೇಗೌಡರಿಗೆ ಬೇಸರ ಇದೆ. ಸುಮ್ಮಸುಮ್ಮನೆ ನಾನ್ಯಾಕೆ ಬೈಯ್ಯಲಿ?. ಸಿದ್ದರಾಮಯ್ಯ ಜತೆ ನನಗೆ ಯಾವುದೇ ವೈಷಮ್ಯ ಇಲ್ಲ. ಅವರು ಅವರ ಪಾಡಿಗೆ ಅಧಿಕಾರ ಮಾಡುತ್ತಿದ್ದಾರೆ. ನನಗೆ ಕಾಂಗ್ರೆಸ್ ಬಿಟ್ಟಿದ್ದು ತಪ್ಪು ಅನಿಸಿಲ್ಲ. ನಾನು ಪ್ರಧಾನಿ ಮೋದಿಗೂ ಬೈದಿಲ್ಲ ಎಂದು ಸಿ.ಎಂ.ಇಬ್ರಾಹಿಂ ತಿಳಿಸಿದರು.

"ಚುನಾವಣಾ ಆಯೋಗದಲ್ಲಿ ಪ್ರಶ್ನಿಸುವೆ": ನನ್ನ ಮುಂದಿನ ನಡೆ ಜನತಾದಳ. ಜನತಾ ದಳದ ರಾಜ್ಯ ಘಟಕವನ್ನು ವಿಸರ್ಜನೆ ಮಾಡುವುದಕ್ಕೆ ಆಗಲ್ಲ. ಇದನ್ನು ಚುನಾವಣಾ ಆಯೋಗದಲ್ಲಿ ಪ್ರಶ್ನೆ ಮಾಡುತ್ತೇನೆ. ನಿಜವಾದ ಜನತಾ ದಳ ನಮ್ಮದೇ. ಬಹುತೇಕ ಶಾಸಕರು ನಮ್ಮ ಜತೆ ಇದ್ದಾರೆ. ಸಮಯ, ಸಂದರ್ಭ ಬಂದಾಗ ಶಾಸಕರ ಸಭೆ ಕರೆಯುತ್ತೇನೆ. ಶಾಸಕರನ್ನು ಎಲ್ಲ ಬಲಗಳಿಂದಲೂ ಹೆದರಿಸಿಕೊಂಡು ನಾಯಕರು ಇಟ್ಟುಕೊಂಡಿದ್ದಾರೆ ಎಂದು ಕಿಡಿಕಾರಿದರು.

"ಮಹಾಭಾರತದ ಪರಿಸ್ಥಿತಿ ಜೆಡಿಎಸ್‌ಗೆ..": ದೇವೇಗೌಡರಿಗೆ ಸ್ವಲ್ಪವಾದರೂ ಪ್ರಜ್ಞೆ ಬೇಡವೇ?. ನಾನು ಒಬ್ಬ ಹಿರಿಯ, ಪರಿಷತ್ ಸದಸ್ಯ ಸ್ಥಾನ ಬಿಟ್ಟು ಬಂದಿದೀನಿ. ನನ್ನ ಜತೆ ಮಾತನಾಡಬೇಕೆಂದು ಅವರಿಗೆ ಅನಿಸಲಿಲ್ಲವೇ?. ಚನ್ನಪಟ್ಟಣದಲ್ಲಿ ನಾನು ಹೋಗದಿದ್ದರೆ ಕುಮಾರಸ್ವಾಮಿ ಗೆಲ್ಲುತ್ತಿರಲಿಲ್ಲ. ನನ್ನ ಹೋರಾಟ ಈಗಾಗಲೇ ಶುರುವಾಗಿದೆ. ಮೊದಲು ಅವರ ನೊಟೀಸ್ ನನ್ನ ಕೈಗೆ ಬರಲಿ. ನನ್ನನ್ನು ಉಚ್ಚಾಟನೆ ಮಾಡಲು ಆಗಲ್ಲ. ಕಾಲಾಯೇ ತಸ್ಮೈ ನಮ:, ವಿನಾಶಕಾಲೇ ವಿಪರೀತ ಬುದ್ಧಿ. ಮಹಾಭಾರತದಲ್ಲಿ ಆದ ಹಾಗೆ ಜೆಡಿಎಸ್​ಗೂ ಆಗುತ್ತದೆ ಎಂದು ಇಬ್ರಾಹಿಂ ಭವಿಷ್ಯ ನುಡಿದರು.

ಇದನ್ನೂ ಓದಿ: ಸಿ.ಎಂ.ಇಬ್ರಾಹಿಂ ವಜಾಗೊಳಿಸಿದ ದೇವೇಗೌಡರು: ಜೆಡಿಎಸ್ ಹಂಗಾಮಿ ರಾಜ್ಯಾಧ್ಯಕ್ಷರಾಗಿ ಹೆಚ್.ಡಿ.ಕುಮಾರಸ್ವಾಮಿ ಆಯ್ಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.