ETV Bharat / state

ಸಾಮಾಜಿಕ ನ್ಯಾಯದ ಜತೆ ಸಾಮಾಜಿಕ ಅಭಿವೃದ್ಧಿಯ ಗುರಿ : ಮುಖ್ಯಮಂತ್ರಿ ಬೊಮ್ಮಾಯಿ - ಗೃಹ ಕಚೇರಿ ಕೃಷ್ಣಾದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಅಬುಲ್ ಕಲಾಂ ಆಜಾದ್ ಭವನವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮಕ್ಕಳ ವಿದ್ಯಾರ್ಜನೆ ವಿಚಾರದಲ್ಲಿ ಬಹಳ ಮುಕ್ತ ವಾತಾವರಣ ನಿರ್ಮಿಸಲು ರಾಷ್ಟ್ರೀಯ ಶಿಕ್ಷಣ ನೀತಿ ಅವಕಾಶ ಕಲ್ಪಿಸುತ್ತದೆ. ಪ್ರಧಾನಿಯವರ ನೇತೃತ್ವದಲ್ಲಿ ನವಭಾರತದ ನಿರ್ಮಾಣಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನ ಬಹಳಷ್ಟು ಅಧ್ಯಯನ ಮಾಡಿ ಜಾರಿಗೆ ತರಲಾಗಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಲಾಭವನ್ನು ಅಲ್ಪಸಂಖ್ಯಾತರೂ ಪಡೆಯಬೇಕು..

bsavaraja bommayi
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
author img

By

Published : Feb 25, 2022, 3:55 PM IST

ಬೆಂಗಳೂರು : ಅಲಸಂಖ್ಯಾತರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕ ಸಾಮಾಜಿಕ ನ್ಯಾಯದ ಜೊತೆ ಸಾಮಾಜಿಕ ಅಭಿವೃದ್ಧಿಯ ಗುರಿ ಸಾಧಿಸಲಾಗುವುದು. ಅಲ್ಪಸಂಖ್ಯಾತರ ಕೆಲ ಸಮುದಾಯಗಳು ಕಡು ಬಡತನದಲಿವೆ. ಅವರ ಅಭಿವೃದ್ಧಿಗೆ ಸೂಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ‌.

ಗೃಹ ಕಚೇರಿ ಕೃಷ್ಣಾದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಅಬುಲ್ ಕಲಾಂ ಆಜಾದ್ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬದಲಾವಣೆಯ ಯುಗದಲ್ಲಿ ಬದಲಾವಣೆಯ ವೇಗವನ್ನು ಅಳವಡಿಸಿಕೊಂಡು ಅಲ್ಪಸಂಖ್ಯಾತರು ಗುರಿಯನ್ನು ಸಾಧಿಸಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರ ಹಾಗೂ ಸಮಾಜ ಮಕ್ಕಳಿಗೆ ಸೂಕ್ತ ಅವಕಾಶಗಳನ್ನು ಹಾಗೂ ಸವಲತ್ತುಗಳನ್ನು ಕಲ್ಪಿಸಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಯಲು ಸಹಕರಿಸಬೇಕು ಎಂದರು.

ಅಲ್ಪಸಂಖ್ಯಾತರ ಮಕ್ಕಳಿಗೆ ಶಿಕ್ಷಣ, ವೃತ್ತಿ ಮಾರ್ಗದರ್ಶನ : ಅಲ್ಪಸಂಖ್ಯಾತ ಜನಾಂಗದ ಕಟ್ಟಕಡೆಯ ವ್ಯಕ್ತಿಯನ್ನು ತಲುಪುವ ಕಾರ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಆಗಬೇಕು. ಫ್ರೌಡ ಶಾಲಾ ಹಂತದಲ್ಲಿ ಮಕ್ಕಳಿಗೆ ಐಟಿ, ಇಂಜಿನಿಯರಿಂಗ್, ಐಟಿಐ, ಐಎಎಸ್, ಐಪಿಎಸ್ ಸೇರಿದಂತೆ ಮುಂತಾದ ಕ್ಷೇತ್ರದಲ್ಲಿನ ಉದ್ಯೋಗ ಅವಕಾಶಗಳ ಬಗ್ಗೆ ಮಾಹಿತಿ ನೀಡಬೇಕು.

ಅಲ್ಪಸಂಖ್ಯಾತರ ಹಾಗೂ ಬಡವರ ಮಕ್ಕಳು ಸೂಕ್ತ ವೃತ್ತಿ ಮಾರ್ಗದರ್ಶನದಿಂದ ಉತ್ತಮ ಶಿಕ್ಷಣ ಹಾಗೂ ಉದ್ಯೋಗ ಪಡೆದು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರಾಗುವ ಜೊತೆಗೆ ಅಲ್ಪಸಂಖ್ಯಾತರು ಸಮಾಜದ ಮುಖ್ಯವಾಹಿನಿಗೆ ಬರಲು ಸಹಕಾರಿಯಾಗುತ್ತದೆ ಎಂದರು.

ನೂತನ ರಾಷ್ಟ್ರೀಯ ಶಿಕ್ಷಣ ನೀತಿ : ಮಕ್ಕಳ ವಿದ್ಯಾರ್ಜನೆ ವಿಚಾರದಲ್ಲಿ ಬಹಳ ಮುಕ್ತ ವಾತಾವರಣ ನಿರ್ಮಿಸಲು ರಾಷ್ಟ್ರೀಯ ಶಿಕ್ಷಣ ನೀತಿ ಅವಕಾಶ ಕಲ್ಪಿಸುತ್ತದೆ. ಪ್ರಧಾನಿಯವರ ನೇತೃತ್ವದಲ್ಲಿ ನವಭಾರತದ ನಿರ್ಮಾಣಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನ ಬಹಳಷ್ಟು ಅಧ್ಯಯನ ಮಾಡಿ ಜಾರಿಗೆ ತರಲಾಗಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಲಾಭವನ್ನು ಅಲ್ಪಸಂಖ್ಯಾತರೂ ಪಡೆಯಬೇಕು ಎಂದರು.

ವಕ್ಫ್ ಆಸ್ತಿ ವಕ್ಫ್ ಸಮಾಜಕ್ಕೆ ಬಳಕೆ : ವಕ್ಫ್ ಆಸ್ತಿಯನ್ನು ಕಾಪಾಡಿಕೊಳ್ಳಲು ವಕ್ಫ್ ಮಂಡಳಿಗೆ ಅಧಿಕಾರ ನೀಡಲಾಗಿದೆ. ಇದರ ದುರುಪಯೋಗ ಆಗದಂತೆ ಕ್ರಮವಹಿಸಬೇಕು. ವಕ್ಫ್ ಸಮಾಜದ ಆಸ್ತಿಯನ್ನು ಸಮಾಜದ ಬಳಕೆಗಾಗಿ ಮೀಸಲಿಡಬೇಕು. ಈ ವಿಷಯದಲ್ಲಿ ಕಾನೂನು ಬಾಹಿರವಾಗಿ ನಡೆದುಕೊಂಡವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: ಫೆ.27 ರಂದು ರಾಜ್ಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.