ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 2.O ಒಂದು ವರ್ಷ ಮುಗಿಸಿದ ಹಿನ್ನೆಲೆಯಲ್ಲಿ ಆಯೋಜನೆ ಮಾಡಿರುವ ಕರ್ನಾಟಕ ಜನ ಸಂವಾದ ವರ್ಚುವಲ್ ರ‍್ಯಾಲಿ ಆರಂಭಗೊಂಡಿದೆ.
ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವರ್ಚುವಲ್ ರ‍್ಯಾಲಿಗೆ ಚಾಲನೆ ನೀಡಿದರು. ಆನ್ ಲೈನ್ ಮೂಲಕವೇ ಅತಿಥಿಗಳು ಉದ್ಘಾಟನೆಯಲ್ಲಿ ಭಾಗಿಯಾದರು.
ಜೆ.ಪಿ ನಡ್ಡಾ ಅವರ ಜೊತೆ ಕೇಂದ್ರ ಸಚಿವರಾದ ಡಿ.ವಿ ಸದಾನಂದ ಗೌಡ, ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿ ಭಾಗಿಯಾಗಿದ್ದಾರೆ. ರಾಜ್ಯದಲ್ಲಿ ಸಿಎಂ ಬಿಎಸ್ವೈ, ರಾಜ್ಯಾಧ್ಯಕ್ಷ ಕಟೀಲ್ ಜೊತೆ, ಡಿಸಿಎಂಗಳಾದ ಗೋವಿಂದ ಕಾರಜೋಳ, ಡಾ. ಅಶ್ವತ್ಥ ನಾರಾಯಣ್, ಕಂದಾಯ ಸಚಿವ ಆರ್.ಅಶೋಕ್, ಸಚಿವ ಗೋಪಾಲಯ್ಯ, ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ, ರಾಜ್ಯ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಕೆಲ ನಾಯಕರು ಮಾತ್ರ ಪಾಲ್ಗೊಂಡಿದ್ದಾರೆ.
ಒಂದು ವರ್ಷದ ಸಾಧನೆಯನ್ನು ವರ್ಚುವಲ್ ರ‍್ಯಾಲಿ ಮೂಲಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ರಾಜ್ಯದ ಜನತೆಯ ಮುಂದಿಡುತ್ತಿದ್ದಾರೆ.