ETV Bharat / state

ತಕ್ಷಣವೇ ಮನೆ ಮತ್ತು ಬೆಳೆ ಪರಿಹಾರ ವಿತರಿಸಿ... ಜಿಲ್ಲಾಡಳಿತಗಳಿಗೆ ಸಿಎಂ ಸೂಚನೆ - Chief Minister Basavaraja Bommai

ಮಳೆಯಿಂದ ಜಿಲ್ಲೆಗಳಲ್ಲಿ ಸಂಭವಿಸಿರುವ ಮನೆಹಾನಿಗೆ ತಕ್ಷಣ ಪರಿಹಾರ ಒದಗಿಸಬೇಕು. ಬೆಳೆಹಾನಿಯ ನಿಖರ ಮಾಹಿತಿ ಪಡೆಯಬೇಕು ಎಂದು ಜಿಲ್ಲಾಡಳಿತಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

CM instruct Carry out rain damage relief operations quickly
ಜಿಲ್ಲಾಡಳಿತಗಳಿಗೆ ಸಿಎಂ ಸೂಚನೆ
author img

By

Published : Aug 28, 2022, 6:55 PM IST

Updated : Aug 28, 2022, 7:43 PM IST

ಬೆಂಗಳೂರು: ಮಳೆಹಾನಿ ಪರಿಹಾರ ಕಾರ್ಯಾಚರಣೆಯನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದು ಜಿಲ್ಲಾಡಳಿತಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸೂಚನೆ ನೀಡಿದ್ದಾರೆ. ಆದ್ಯತೆ ಮೇರೆಗೆ ಪರಿಹಾರ ಕಾರ್ಯಾಚರಣೆ ಕೈಗೆತ್ತಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಇತ್ತೀಚೆಗೆ ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಳೆಯಿಂದಾದ ಹಾನಿಯ ವಿವರ ಪಡೆದರು.

ಮಳೆಯಿಂದ ಜಿಲ್ಲೆಗಳಲ್ಲಿ ಸಂಭವಿಸಿರುವ ಮನೆಹಾನಿಗೆ ತಕ್ಷಣ ಪರಿಹಾರ ಒದಗಿಸಬೇಕು. ಬೆಳೆಹಾನಿಯ ನಿಖರ ಮಾಹಿತಿ ಪಡೆಯಬೇಕು ಹಾಗೂ ರಸ್ತೆ ಹಾನಿಯಿಂದ ವಾಹನ ಸಂಚಾರ ಸುಗಮವಾಗದಿದ್ದಲ್ಲಿ, ಮಾರ್ಗ ಬದಲಾಯಿಸಬೇಕು. ವಿಳಂಬ ಮಾಡದೆ ತಕ್ಷಣವೇ ಮನೆ ಮತ್ತು ಬೆಳೆ ಹಾನಿಗೆ ಪರಿಹಾರ ವಿತರಿಸುವಂತೆ ಎಂದು ಸೂಚನೆ ನೀಡಿದರು.

ಇದನ್ನೂ ಓದಿ: ತುಮಕೂರು ವಿವಿ ವೀರ ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆಗೆ ಸರ್ಕಾರದ ಸಹಾಯ.. ಸಿಎಂ ಬೊಮ್ಮಾಯಿ

ಕೆರೆಗಳು ಒಡೆಯದಂತೆ ಹಾಗೂ ಬಿರುಕು ಬೀಳದಂತೆ ಎಚ್ಚರಿಕೆ ವಹಿಸಬೇಕು. ಸಮೀಕ್ಷೆ ನಡೆಸಿ ಅಗತ್ಯವಿದ್ದೆಡೆ ತಕ್ಷಣವೇ ದುರಸ್ತಿ ಕಾರ್ಯ ಕೈಗೊಳ್ಳಬೇಕು. ದೊಡ್ಡ ಕೆರೆಗಳಿರುವಲ್ಲಿ ಜಾಗೃತರಾಗಿದ್ದು, ಸಾವು ನೋವು ಸಂಭವಿಸದಂತೆ ಎಚ್ಚರ ವಹಿಸಬೇಕು. ಮೈಸೂರು ಹೆದ್ದಾರಿಯಲ್ಲಿ ಮಳೆಯಿಂದಾಗಿ ನೀರು ನಿಂತಿರುವುದರಿಂದ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಇಂದಿನಿಂದಲೇ ಅನುವು ಮಾಡಿಕೊಡುವಂತೆ ಮೈಸೂರು, ರಾಮನಗರ ಹಾಗೂ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದರು.

ಮಳೆಯಿಂದ ಹಾನಿಗೊಳಗಾಗಿರುವ ರಸ್ತೆ ಮತ್ತು ಸೇತುವೆಗಳನ್ನು ತಕ್ಷಣವೇ ದುರಸ್ತಿ ಮಾಡಬೇಕು. ಅಧಿಕಾರಿಗಳು ಸಂವಹನದ ಮೂಲಕ ಕಾರ್ಯನಿರ್ವಹಿಸಬೇಕು. ಲೋಕೋಪಯೋಗಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ರಸ್ತೆ ದುರಸ್ತಿ ಕೈಗೊಳ್ಳಬೇಕು. ಸಕಾಲದಲ್ಲಿ ಕಡಿತಗೊಂಡಿರುವ ವಿದ್ಯುತ್ ಸಂಪರ್ಕ ಮರುಸ್ಥಾಪಿಸಬೇಕು ಎಂದು ಸೂಚಿಸಿದರು.

ಕಾಳಜಿ ಕೇಂದ್ರಗಳಲ್ಲಿರುವವರಿಗೆ ಗುಣಮಟ್ಟದ ಆಹಾರ ಹಾಗೂ ಬಂಧುಗಳ ಮನೆಗೆ ತೆರಳಿರುವವರಿಗೆ ಆಹಾರ ಕಿಟ್​​ಗಳನ್ನು ತಲುಪಿಸುವಂತೆ ಸೂಚನೆ ನೀಡಿದರು. ಸಚಿವರಾದ ಎಸ್.ಟಿ. ಸೋಮಶೇಖರ್, ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್, ಉಮೇಶ್ ಕತ್ತಿ ಸಭೆಯಲ್ಲಿ ಪಾಲ್ಗೊಂಡು ತಮ್ಮ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಆಗಿರುವ ಹಾನಿಯ ಕುರಿತು ವಿವರಿಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಮತ್ತಿತರರು ಪಾಲ್ಗೊಂಡಿದ್ದರು.

Last Updated : Aug 28, 2022, 7:43 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.