ETV Bharat / state

ಅಲ್ಪಸಂಖ್ಯಾತರ ಕಾಲೊನಿ ಅಭಿವೃದ್ಧಿಗೆ ಸಾವಿರ ಕೋಟಿ ರೂ ಕ್ರಿಯಾ ಯೋಜನೆಗೆ ಸಿಎಂ ಸೂಚನೆ

ಅಲ್ಪಸಂಖ್ಯಾತರು ಹೆಚ್ಚಾಗಿ ನೆಲೆಸಿರುವ ಪ್ರದೇಶಗಳನ್ನು ಗುರುತಿಸಿ ಅನುದಾನ ಹಂಚಿಕೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಿಎಂ ಸೂಚನೆ

author img

By ETV Bharat Karnataka Team

Published : Dec 29, 2023, 3:48 PM IST

ಬೆಂಗಳೂರು: ಅಲ್ಪಸಂಖ್ಯಾತರ ಕಾಲೊನಿ ಅಭಿವೃದ್ಧಿಗೆ ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಅವರು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಕ್ರಿಯಾ ಯೋಜನೆ ತಯಾರಿಸುವ ಸಂದರ್ಭದಲ್ಲಿ ಅಲ್ಪಸಂಖ್ಯಾತರು ಹೆಚ್ಚಾಗಿ ನೆಲೆಸಿರುವ ಪ್ರದೇಶಗಳನ್ನು ಗುರುತಿಸಿ, ಅನುದಾನ ಹಂಚಿಕೆ ಮಾಡಬೇಕು ಎಂದರು. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಇದನ್ನು ಭರಿಸಲು ತೀರ್ಮಾನಿಸಿದೆ. 6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಸರ್ಕಾರ ಸಿದ್ಧವಾಗಿದೆ. ಆಯವ್ಯಯದಲ್ಲಿ 60 ಕೋಟಿ ರೂ. ನಿಗದಿಯಾಗಿದೆ. ಇಲಾಖೆಗೆ ಲಭ್ಯ ಅನುದಾನದಲ್ಲಿಯೇ ಮರುಹಂಚಿಕೆ ಮಾಡಿ ಹೆಚ್ಚುವರಿ 40 ಕೋಟಿ ರೂ ಭರಿಸಲು ಸಿಎಂ ತಿಳಿಸಿದರು.

ಅಲ್ಪಸಂಖ್ಯಾತರಿಗೆ ಸವಲತ್ತು ವಿತರಿಸುವ ವಿವಿಧ ಯೋಜನೆಗಳಿಗೆ ಆನ್‌ಲೈನ್‌ ಮೂಲಕ ಭಾರಿ ಪ್ರಮಾಣದಲ್ಲಿ ಅರ್ಜಿ ಸ್ವೀಕೃತವಾಗಿದೆ. ಹೀಗಾಗಿ, ಮುಂದಿನ ವರ್ಷ ಹೆಚ್ಚಿನ ಅನುದಾನ ಒದಗಿಸಲು ತೀರ್ಮಾನಿಸಲಾಯಿತು. ವಸತಿ ಇಲಾಖೆ ವಿವಿಧ ವಸತಿ ಯೋಜನೆಗಳಡಿ ಪ್ರಸಕ್ತ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿಗೆ ಎದುರಾಗಿ ಈವರೆಗೆ 1.31 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಂಡಿದೆ. ಮುಕ್ತಾಯದ ಹಂತದಲ್ಲಿರುವ 1.6 ಲಕ್ಷ ಮನೆಗಳನ್ನು ಮಾರ್ಚ್‌ ಒಳಗೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.

ಈ ಬಗ್ಗೆ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಂಬಂಧಿಸಿದ ಎಂಜಿನಿಯರುಗಳ ಸಭೆ ನಡೆಸಿ, ಲಿಂಟೆಲ್‌ ಮತ್ತು ಛಾವಣಿ ಹಂತದಲ್ಲಿರುವ ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಮನೆಗಳನ್ನು ಮಾರ್ಚ್‌ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ತಿಳಿಸಿದರು.

ಇನ್ನು, ಕೊಳೆಗೇರಿ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಡಿ 1.8 ಲಕ್ಷ ಮನೆ ನಿರ್ಮಾಣ ಪ್ರಗತಿಯಲ್ಲಿವೆ. ಫಲಾನುಭವಿಗಳ ವಂತಿಗೆ ಸೇರಿದಂತೆ 5 ಲಕ್ಷ ರೂ.ಗಳನ್ನು ಭರಿಸಲು ಹಾಗೂ ಇದಕ್ಕಾಗಿ ಮತ್ತು ಬಡಾವಣೆಗಳ ಮೂಲಸೌಕರ್ಯ ಅಭಿವೃದ್ಧಿಗಾಗಿ 500 ಕೋಟಿ ರೂ. ಬಿಡುಗಡೆ ಮಾಡಲು ಸಚಿವ ಸಂಪುಟ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಮುಕ್ತಾಯದ ಹಂತದಲ್ಲಿರುವ 25 ಸಾವಿರ ಮನೆಗಳನ್ನು ಫೆಬ್ರವರಿ ಅಂತ್ಯದ ವೇಳೆ ಪೂರ್ಣಗೊಳಿಸಬೇಕು ಎಂದರು.

ರಾಜೀವ್‌ ಗಾಂಧಿ ವಸತಿ ನಿಗಮದ ಮುಕ್ತಾಯದ ಹಂತದಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಅನುದಾನಕ್ಕೆ ಸಂಬಂಧಿಸಿದ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸುವಂತೆ ನಿರ್ದೇಶನ ಕೊಟ್ಟರು. ನಿಗಮದ ವ್ಯಾಪ್ತಿಯಲ್ಲಿ 2133 ಕೋಟಿ ರೂ. ಲಭ್ಯವಿದ್ದು, ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ವಕ್ಫ್​​ ಆಸ್ತಿ ಒತ್ತುವರಿ ಕುರಿತು ತಿಂಗಳಲ್ಲಿ ವರದಿ ನೀಡಲು ಸಚಿವ ಜಮೀರ್ ಗಡುವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.