ಬೆಂಗಳೂರು: ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರೀ ಮಳೆಯ ಹಿನ್ನೆಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಬಿಎಂಪಿ ಆಯುಕ್ತರಿಗೆ ಕರೆ ಮಾಡಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ್ದಾರೆ.
ನಿನ್ನೆ ಸುರಿದ ಮಳೆಗೆ ನಗರದ ಹಲವು ಪ್ರದೇಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು. ಈ ಹಿನ್ನೆಲೆ ಇಂದು ಸಿಎಂ ಬಿಎಸ್ವೈ, ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಅವರಿಗೆ ಕರೆ ಮಾಡಿ ನೀರು ನುಗ್ಗಿದ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುವಂತೆ ಸೂಚನೆ ನೀಡಿದ್ದಾರೆ. ಇಂದು ಮತ್ತು ನಾಳೆ ಸಹ ಅಧಿಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದರಿಂದ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಎಚ್ಚರ ವಹಿಸುವಂತೆ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ, ನಿನ್ನೆ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆ ಹಿನ್ನೆಲೆಯಲ್ಲಿ ನೀರು ನುಗ್ಗಿದ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುವಂತೆ ಹಾಗೂ ಹವಾಮಾನ ಇಲಾಖೆ ಇನ್ನೂ ಒಂದೆರಡು ದಿನಗಳ ಕಾಲ ಹೆಚ್ಚಿನ ಮಳೆಯ ಮುನ್ಸೂಚನೆ ನೀಡಿರುವುದರಿಂದ ಕಟ್ಟೆಚ್ಚರ ವಹಿಸಬೇಕು ಎಂದು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
-
ನಿನ್ನೆ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆ ಹಿನ್ನಲೆಯಲ್ಲಿ ನೀರು ನುಗ್ಗಿದ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುವಂತೆ ಹಾಗೂ ಹವಾಮಾನ ಇಲಾಖೆ ಇನ್ನೂ ಒಂದೆರಡು ದಿನಗಳ ಕಾಲ ಹೆಚ್ಚಿನ ಮಳೆಯ ಮುನ್ಸೂಚನೆ ನೀಡಿರುವುದರಿಂದ ಕಟ್ಟೆಚ್ಚರ ವಹಿಸಬೇಕು ಎಂದು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ.@BBMPCOMM
— B.S. Yediyurappa (@BSYBJP) October 24, 2020 " class="align-text-top noRightClick twitterSection" data="
">ನಿನ್ನೆ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆ ಹಿನ್ನಲೆಯಲ್ಲಿ ನೀರು ನುಗ್ಗಿದ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುವಂತೆ ಹಾಗೂ ಹವಾಮಾನ ಇಲಾಖೆ ಇನ್ನೂ ಒಂದೆರಡು ದಿನಗಳ ಕಾಲ ಹೆಚ್ಚಿನ ಮಳೆಯ ಮುನ್ಸೂಚನೆ ನೀಡಿರುವುದರಿಂದ ಕಟ್ಟೆಚ್ಚರ ವಹಿಸಬೇಕು ಎಂದು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ.@BBMPCOMM
— B.S. Yediyurappa (@BSYBJP) October 24, 2020ನಿನ್ನೆ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆ ಹಿನ್ನಲೆಯಲ್ಲಿ ನೀರು ನುಗ್ಗಿದ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುವಂತೆ ಹಾಗೂ ಹವಾಮಾನ ಇಲಾಖೆ ಇನ್ನೂ ಒಂದೆರಡು ದಿನಗಳ ಕಾಲ ಹೆಚ್ಚಿನ ಮಳೆಯ ಮುನ್ಸೂಚನೆ ನೀಡಿರುವುದರಿಂದ ಕಟ್ಟೆಚ್ಚರ ವಹಿಸಬೇಕು ಎಂದು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ.@BBMPCOMM
— B.S. Yediyurappa (@BSYBJP) October 24, 2020
ದಾವಣಗೆರೆ ಪ್ರವಾಸ ರದ್ದು: ಸಿಎಂ ಬಿಎಸ್ವೈ ಇಂದು ದಾವಣಗೆರೆ ಪ್ರವಾಸವನ್ನು ರದ್ದು ಮಾಡಿದ್ದಾರೆ. ಇಂದು ಬೆಳಗ್ಗೆ ಸಿಎಂ ಯಡಿಯೂರಪ್ಪ ದಾವಣಗೆರೆ ಪ್ರವಾಸ ಕೈಗೊಳ್ಳಬೇಕಿತ್ತು. ದಾವಣಗೆರೆಯಲ್ಲಿ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಸಿಎಂ ತೆರಳಬೇಕಿತ್ತು. ಆದರೆ ಪ್ರತಿಕೂಲ ಹವಾಮಾನದಿಂದಾಗಿ ದಾವಣಗೆರೆ ಪ್ರವಾಸ ರದ್ದುಪಡಿಸಲಾಗಿದೆ. ದಾವಣಗೆರೆ ಪ್ರವಾಸ ರದ್ದುಗೊಳಿಸಿ ಕೇವಲ ತುಮಕೂರು ಪ್ರವಾಸ ಮಾಡಲಿದ್ದಾರೆ. ತುಮಕೂರಿನಲ್ಲಿ ಪಕ್ಷದ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಿ ವಾಪಸ್ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.