ETV Bharat / state

ಪತ್ರಕರ್ತರಿಗೆ ಕೋವಿಡ್ ಲಸಿಕೆ ನೀಡಲು ಕ್ರಮ ಕೈಗೊಳ್ಳಲು ಸಿಎಂ ಸೂಚನೆ - Journalists and media personnel Covid Frontline Warriors

ಪತ್ರಕರ್ತರು ಮತ್ತು ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಕೋವಿಡ್ ಫ್ರಂಟ್‌ಲೈನ್ ವಾರಿಯರ್ ಎಂದು ಪರಿಗಣಿಸಿ, ಆದ್ಯತೆಯ ಮೇಲೆ ಕೋವಿಡ್ ಲಸಿಕೆ ನೀಡಲು ಕೂಡಲೇ ಸೂಕ್ತ ಆದೇಶ ಹೊರಡಿಸಿ ಅನುಷ್ಠಾನಗೊಳಿಸಲು ಎಲ್ಲಾ ವ್ಯವಸ್ಥೆ ಮಾಡುವಂತೆ ಸಿಎಂ ಸೂಚಿಸಿದ್ದಾರೆ.

cm-instructs-chief-secretary-to-take-action-to-vaccinate-journalists
ಪತ್ರಕರ್ತರಿಗೆ ಕೋವಿಡ್ ಲಸಿಕೆ ನೀಡಲು ಕ್ರಮ ಕೈಗೊಳ್ಳಲು ಸಿಎಂ ಸೂಚನೆ
author img

By

Published : May 6, 2021, 12:26 PM IST

ಬೆಂಗಳೂರು: ಪತ್ರಕರ್ತರು ಮತ್ತು ಮಾಧ್ಯಮ ಸಿಬ್ಬಂದಿಯನ್ನು ಫ್ರಂಟ್‌ಲೈನ್ ವಾರಿಯರ್ಸ್ ಎಂದು ಪರಿಗಣಿಸಿ ಕೊರೊನಾ ಲಸಿಕೆ ನೀಡುವ ಕುರಿತು ಸಚಿವ ಸಂಪುಟದಲ್ಲಿ ಕೈಗೊಂಡ ನಿರ್ಣಯ ಜಾರಿಗೆ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಪತ್ರಕರ್ತರು ಮತ್ತು ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಕೋವಿಡ್ ಫ್ರಂಟ್‌ಲೈನ್ ವಾರಿಯರ್ ಎಂದು ಪರಿಗಣಿಸಬೇಕು. ಅವರಿಗೆ ಆದ್ಯತೆಯ ಮೇಲೆ ಕೋವಿಡ್ ಲಸಿಕೆ ನೀಡಲು ಕೂಡಲೇ ಸೂಕ್ತ ಆದೇಶ ಹೊರಡಿಸಿ ಅನುಷ್ಠಾನಗೊಳಿಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಬೇಕು ಎಂದು ಸಿಎಂ ಇಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್​ಗೆ ಸೂಚಿಸಿದ್ದಾರೆ.

cm-instructs-chief-secretary-to-take-action-to-vaccinate-journalists
ಸಿಎಂ ಸೂಚನೆ

ಎರಡು ದಿನಗಳ ಹಿಂದಷ್ಟೇ ನಡೆದಿದ್ದು ತುರ್ತು ಸಚಿವ ಸಂಪುಟ ಸಭೆಯಲ್ಲಿ ಪತ್ರಕರ್ತರು ಮತ್ತು ಮಾಧ್ಯಮ ಸಿಬ್ಬಂದಿಯನ್ನು ಫ್ರಂಟ್‌ಲೈನ್ ವಾರಿಯರ್ಸ್ ಎಂದು ಪರಿಗಣಿಸಿ ಕೊರೊನಾ ಲಸಿಕೆ ನೀಡುವ ನಿರ್ಣಯ ಮಾಡಲಾಗಿತ್ತು. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದ್ದರು.

ಇದನ್ನೂ ಓದಿ: ಬಿಜೆಪಿ ನೇತೃತ್ವದ ಸ್ಕ್ಯಾಮ್‌ ಸರ್ಕಾರ ಕೋಮು ವಿಷಬೀಜ ಬಿತ್ತುತ್ತಿದೆ: ನಟ ಚೇತನ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.