ETV Bharat / state

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿನ ಅಕ್ರಮಗಳ ತನಿಖೆಗೆ ಸಿಎಸ್​ಗೆ ಸಿಎಂ ಸೂಚನೆ: 15 ದಿನದಲ್ಲಿ ವರದಿ ನೀಡಲು ಗಡುವು - ಭ್ರಷ್ಟಾಚಾರ ಆರೋಪ

ಬಿಜೆಪಿ ಅವಧಿಯಲ್ಲಿ ಕೇಳಿ ಬಂದ ಭ್ರಷ್ಟಾಚಾರ ಆರೋಪ ಕುರಿತು ಒಂದೊಂದೇ ವಿಚಾರಗಳ ತನಿಖೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.

CM Siddaramaiah
ಮುಖ್ಯಮಂತ್ರಿ ಸಿದ್ದರಾಮಯ್ಯ
author img

By

Published : May 30, 2023, 3:07 PM IST

Updated : May 30, 2023, 3:18 PM IST

ಬೆಂಗಳೂರು: ಬಿಜೆಪಿ ಅವಧಿಯಲ್ಲಾದ ಭ್ರಷ್ಟಾಚಾರಗಳ ತನಿಖೆ ನಡೆಸುವ ಆಸಕ್ತಿ ವ್ಯಕ್ತಪಡಿಸಿದ್ದ ಸಿಎಂ ಸಿದ್ದರಾಮಯ್ಯ ಅದನ್ನೀಗ ಹಂತ ಹಂತವಾಗಿ ಜಾರಿಗೆ ತರಲು ಮುಂದಾಗಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಹ ಇದೇ ಮಾಹಿತಿ ನೀಡಿದ್ದರು. ಬಿಜೆಪಿ ಸರ್ಕಾರ ಭ್ರಷ್ಟಾಚಾರವನ್ನು ತನಿಖೆಗೆ ಒಳಪಡಿಸುತ್ತೇವೆ. ತಪ್ಪಿತಸ್ತರನ್ನು ಶಿಕ್ಷೆಗೆ ಗುರಿಪಡಿಸುತ್ತೇವೆ ಎಂದಿದ್ದರು.

ಇದಾದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ್ದ ಸಚಿವ ಎಂ.ಬಿ. ಪಾಟೀಲ್​ ಸಹ ಸಿಎಂ ಹಿಂದಿನ ಸರ್ಕಾರದ ಭ್ರಷ್ಟಾಚಾರದ ತನಿಖೆ ನಡೆಸುವ ಆಸಕ್ತಿಯನ್ನು ತಮ್ಮ ಬಳಿ ವ್ಯಕ್ತಪಡಿಸಿದ್ದರು ಎಂದು ಹೇಳಿದ್ದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನೇಕ ಹಗರಣಗಳು ನಡೆದಿರುವ ಆರೋಪಗಳು ಕೇಳಿ ಬಂದಿದ್ದವು. ನಮಗೆಲ್ಲ ಗೊತ್ತಿರುವಂತೆ ಪಿಎಸ್​ಐ ನೇಮಕಾತಿ ಹಗರಣ, ಗುತ್ತಿಗೆದಾರರ ವಲಯದಿಂದ ಬಂದಿದ್ದ 40 ಪರ್ಸೆಂಟ್ ಕಮಿಷನ್ ದಂಧೆ ಆರೋಪಗಳು ಸೇರಿ ಅನೇಕ ಗಂಭೀರ ಆರೋಪಗಳು ಸರ್ಕಾರದ ವಿರುದ್ಧ ಕೇಳಿ ಬಂದಿದ್ದವು.

ಇಂಥ ಕೆಲವು ಹಗರಣಗಳ ಬಗ್ಗೆ ತನಿಖೆ ನಡೆಸಲಾಗಿದೆ ಆದರೂ ಅವು ತೃಪ್ತಿಕರವಾಗಿಲ್ಲ. ಹಾಗಾಗಿ, ನೂತನ ಕಾಂಗ್ರೆಸ್ ಸರ್ಕಾರ ಆ ಎಲ್ಲ ಹಗರಣಗಳ ಮರು ತನಿಖೆ ಮಾಡುತ್ತದೆ. ಜೊತೆಗೆ, ತನಿಖೆಯಾಗದೇ ಉಳಿದಿರುವ ಕೆಲವು ಪ್ರಕರಣಗಳ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ವಾರದ ಹಿಂದೆ ಎಂ.ಬಿ. ಪಾಟೀಲ್ ತಿಳಿಸಿದ್ದರು.

ಇದೀಗ ಬಿಜೆಪಿ ಅವಧಿಯಲ್ಲಿ ಆದ ಭ್ರಷ್ಟಾಚಾರ ಆರೋಪ ಕುರಿತಾದ ಒಂದೊಂದೇ ವಿಚಾರಗಳ ತನಿಖೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ 3 ಸಾವಿರ ಕೋಟಿ ಅನುದಾನದಲ್ಲಿ ವ್ಯಾಪಕ ಅಕ್ರಮ ಆರೋಪ ಕೇಳಿ ಬಂದಿದ್ದು, ಇದರ ಸೂಕ್ತ ತನಿಖೆ ನಡೆಸುವಂತೆ ಟಿಪ್ಪಣಿ ಬರೆದ ಸಿಎಂ ಸಿದ್ದರಾಮಯ್ಯ ಇದನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

ಕಳೆದ ಎರಡು ಮೂರು ವರ್ಷಗಳಲ್ಲಿ ಬಂದಿರುವ ದೂರುಗಳ ವಿವರದ ಮೇಲೆ ತನಿಖೆಯಾಗಬೇಕೆಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಅಲ್ಲದೆ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಸಿಎಂಗೆ ಪತ್ರ ಸಹ ಬಂದಿದ್ದು, ಇದೇ ವಿಚಾರವಾಗಿ ಅವರು ಒತ್ತಡ ಹೇರಿದ್ದರು. ಈ ಬಗ್ಗೆ ನಿರ್ದಾಕ್ಷಿಣ್ಯವಾಗಿ ತನಿಖೆ ನಡೆಸುವಂತೆ ಸೂಚನೆ ನೀಡುವಂತೆ ಕೋರಿದ್ದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ ಅಕ್ರಮದ ತನಿಖೆ ನಡೆಸಿ 15 ದಿನಗಳಲ್ಲಿ ವರದಿ ನೀಡುವಂತೆ ಆದೇಶ ಮಾಡಿದ್ದಾರೆ.

ಅಧಿಕಾರಕ್ಕೆ ಬಂದರೆ ಬಿಜೆಪಿ ನಡೆಸಿರುವ ಅಕ್ರಮಗಳ ಕುರಿತು ತನಿಖೆ ನಡೆಸುವುದಾಗಿ ಕಾಂಗ್ರೆಸ್​ ಹೇಳುತ್ತಾ ಬಂದರೆ, ಕಾಂಗ್ರೆಸ್​ ಅಧಿಕಾರಕ್ಕೆ ಬಂದ ನಂತ ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ, ಯಾವುದೇ ಇಲಾಖೆಗಳು ಅಥವಾ ಮಂಡಳಿಗಳಲ್ಲಾಗಲಿ ಯಾವುದೇ ಅಕ್ರಮಗಳು ನಡೆದಿಲ್ಲ. ಬೇಕಿದ್ದರೆ ಕಾಂಗ್ರೆಸ್​ ತನಿಖೆ ಮಾಡಿಸಿ ನೋಡಲಿ ಎಂದು ಬಹಿರಂಗವಾಗಿಯೇ ಓಪನ್​ ಚ್ಯಾಲೆಂಜ್​ ಅನ್ನು ಕೂಡ ಹಾಕಿದೆ. ಇದೀಗ ಸಿದ್ದರಾಮಯ್ಯ ತಾವು ಹೇಳಿದಂತೆ ಮಂಡಳಿಗಳಲ್ಲಿ ಅದರಲ್ಲೂ ಬಿಜೆಪಿ ಅಧಿಕಾರಾವಧಿಯಲ್ಲಾದ ಅಕ್ರಮಗಳ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ದಿನಗಳ ಗಡುವು ನೀಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆವರು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರದಲ್ಲಿ ಯಾವುದೇ ಭ್ರಷ್ಟಾಚಾರ ಆಗಿಲ್ಲ, ಬೇಕಾದ್ರೆ ತನಿಖೆ ಮಾಡಲಿ: ಜೋಶಿ

ಆರನೆಯ ಗ್ಯಾರೆಂಟಿ‌ ಪಕ್ಕಾ- ಸಚಿವ ಪ್ರಿಯಾಂಕ್ ಖರ್ಗೆ: ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಕಲ್ಯಾಣ ಕರ್ನಾಟಕ ಭಾಗದಲ್ಲಿ ಯಾರೆಲ್ಲ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದರೋ ಅಂತವರ ವಿರುದ್ಧ ನಿರ್ದಾಕ್ಷಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ನಾನು ಆರನೇ ಗ್ಯಾರಂಟಿ ನೀಡಿದ್ದೆ. ಅದರಂತೆ ಕಳೆದ ಬಿಜೆಪಿ ಸರ್ಕಾರದಲ್ಲಿ ಯಾರೆಲ್ಲ ಭ್ರಷ್ಟಾಚಾರದಲ್ಲಿ ಮುಳುಗಿದ್ದರೋ ಅವರ ಮೇಲೆ ಸಂವಿಧಾನದ ಅಡಿಯಲ್ಲಿ, ಕಾನೂನು ಬದ್ಧವಾಗಿ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಕುರಿತು ತಮ್ಮ ಫೇಸ್​​ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು KKRDB ಅನುದಾನದಲ್ಲಿ ಖಾಸಗಿ ಪ್ರವಾಸ ಕೈಗೊಂಡವರ ಬಗ್ಗೆ 2022ರ ಡಿಸೆಂಬರ್ 12 ರಂದು ಹಿಂದಿನ ಸರ್ಕಾರಕ್ಕೆ ಪತ್ರ ಬರೆದು ತನಿಖೆ ನಡೆಸಲು ಆಗ್ರಹಿಸಲಾಗಿತ್ತು. ಗಂಗಾಕಲ್ಯಾಣ ಯೋಜನೆ ಅಡಿಯಲ್ಲಿ 431 ಕೋಟಿ ಅವ್ಯವಹಾರದ ಬಗ್ಗೆ 1 - 6 -2022 ರಂದು ಪತ್ರ ಬರೆಯಲಾಗಿತ್ತು. ನೂತನ ಸರ್ಕಾರ ಬಂದ ನಂತರ ಹಿಂದಿನ ಮುಖ್ಯಮಂತ್ರಿಗಳಿಗೆ ಬರೆದಿದ್ದ ಪತ್ರಗಳನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದ ನಂತರ ತಕ್ಷಣ ತನಿಖೆಗೆ ಆದೇಶ ನೀಡಿರುವುದು ಸ್ವಾಗತಾರ್ಹ. ಭ್ರಷ್ಟಾಚಾರದಲ್ಲಿ ಯಾರೇ ಮುಳುಗಿದ್ದರು ಸಹ ನಮ್ಮ ಕಾಂಗ್ರೆಸ್ ಸರ್ಕಾರವು ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

Last Updated : May 30, 2023, 3:18 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.