ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸರ್ಕಾರಕ್ಕಿರುವ ಕಂಟಕಗಳ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.
ಸಿದ್ದರಾಮಯ್ಯ ನಿವಾಸ ಕಾವೇರಿಗೆ ತೆರಳಿದ ಸಿಎಂ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಸಿಎಂ ಕಳೆದ ಒಂದು ವಾರದಲ್ಲಿ ಎರಡನೇ ಬಾರಿಗೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅವರ ಜೊತೆ ಚರ್ಚಿಸಿದ್ದಾರೆ.
ಸಿದ್ದರಾಮಯ್ಯ ಆಪ್ತ ಶಾಸಕರಿಂದ ಸರ್ಕಾರಕ್ಕೆ ಆತಂಕ ಎದುರಾಗಿರುವ ಹಿನ್ನೆಲೆಯಲ್ಲಿ ಈ ಭೇಟಿ ಅತ್ಯಂತ ಮಹತ್ವ ಪಡೆದಿದ್ದು, ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಿಎಂಗೆ ಈಗ ಸಿದ್ದರಾಮಯ್ಯರ ಅಗತ್ಯ ಹೆಚ್ಚಿದೆ. ಇದರಿಂದಲೇ ಪದೇ ಪದೇ ಭೇಟಿ ಮಾಡುತ್ತಿದ್ದಾರೆ.
ಪಕ್ಷೇತರರ ಭೇಟಿ :
ಪಕ್ಷೇತರ ಶಾಸಕರಾದ ಶಂಕರ್ ಹಾಗೂ ನಾಗೇಶ್ ಅವರುಗಳೂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಸಿಎಂ ಭೇಟಿ ಆದ ಬೆನ್ನಲ್ಲೇ ಇಂತಹದ್ದೊಂದು ಬೆಳವಣಿಗೆ ನಡೆದಿರುವುದು ವಿಶೇಷವಾಗಿದೆ.