ETV Bharat / state

ಮೈತ್ರಿ ಸರ್ಕಾರ ಉಳಿಯುತ್ತಾ,ಉರುಳುತ್ತಾ? ಕರ್‌'ನಾಟಕ'ದಲ್ಲಿ ಕದನ ಕುತೂಹಲ!

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕಿರುವ ಬಹುಮತ ಸಾಬೀತುಪಡಿಸುವ ಅಚಲ ವಿಶ್ವಾಸ ಹೊಂದಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಸರ್ಕಾರದ ರಕ್ಷಣೆಗೆ ಬೇಕಿರುವ ಕಾರ್ಯತಂತ್ರಗಳನ್ನು ರಹಸ್ಯವಾಗಿ ರೂಪಿಸುತ್ತಿದ್ದಾರೆ.

ಮೈತ್ರಿ ಸರ್ಕಾರ
author img

By

Published : Jul 13, 2019, 7:57 PM IST

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕದನ ಕುತೂಹಲ ಮುಂದುವರೆದಿದೆ. ದೋಸ್ತಿ ಸರ್ಕಾರವನ್ನು ಉರುಳಿಸುವ ಮತ್ತು ಉಳಿಸಿಕೊಳ್ಳುವ ನಿಟ್ಟಿನಲ್ಲಿ ದೋಸ್ತಿ ಪಕ್ಷಗಳಾದ ಜೆಡಿಎಸ್-ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ಪೈಪೋಟಿ ಜೋರಾಗಿಯೇ ನಡೆದಿದೆ.

ಮೂರೂ ಪಕ್ಷಗಳಲ್ಲಿನ ಶಾಸಕರ ಮೇಲೆ ಸ್ವತಃ ಆಯಾ ಪಕ್ಷದ ನಾಯಕರಿಗೇ ವಿಶ್ವಾಸವಿಲ್ಲದಂತಾಗಿದೆ. ಕಾಂಗ್ರೆಸ್​ನ 13 ಮಂದಿ ಶಾಸಕರು ರಾಜೀನಾಮೆ ನೀಡುತ್ತಿದ್ದಂತೆ ಕೈ ಪಾಳಯದಲ್ಲಿ ತಳಮಳ ಉಂಟಾಗಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಅಷ್ಟೇ ಅಲ್ಲದೇ ತಾವು ಕಾಂಗ್ರೆಸ್ ಪಕ್ಷಕ್ಕೆ ನಿಷ್ಠರು ಎಂದು ಎದೆ ತಟ್ಟಿ ಹೇಳುತ್ತಿದ್ದವರೇ ಪಕ್ಷಕ್ಕೆ ಕೈ ಕೊಟ್ಟಿರುವುದು ಹಾಗೂ ಇನ್ನಷ್ಟು ಮಂದಿ ಸಂಪರ್ಕಕ್ಕೆ ಸಿಗದೆ ಅಡ್ಡಾಡುತ್ತಿರುವುದು ಕಾಂಗ್ರೆಸ್ ಪಾಳೆಯದಲ್ಲಿ ಮತ್ತಷ್ಟು ಆತಂಕ ಎದುರಾಗಿದೆ. ಹಾಗಾಗಿ, ಈಗಿರುವ ಶಾಸಕರನ್ನಾದರೂ ಹಿಡಿದಿಟ್ಟುಕೊಳ್ಳಲು ನಾಯಕರು ಹರಸಾಹಸಪಡುತ್ತಿದ್ದಾರೆ.

ಜೆಡಿಎಸ್​​​ನಲ್ಲೂ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. ಜೆಡಿಎಸ್​​​ನ ಮೂವರು ಶಾಸಕರು ಏಕಾಏಕಿ ಪಕ್ಷ ತೊರೆದಿರುವುದು ಪಕ್ಷದ ವರಿಷ್ಠರಿಗೆ ದೊಡ್ಡ ಶಾಕ್ ನೀಡಿದೆ. ಮತ್ತಷ್ಟು ಶಾಸಕರು ಬಂಡಾಯವೇಳುವ ಮುನ್ಸೂಚನೆಯಿದ್ದು, ಸರ್ಕಾರದ ಉಳಿವಿಗೆ ಶಾಸಕರನ್ನು ರೆಸಾರ್ಟ್​ನಲ್ಲಿರಿಸಿ ಅವರ ವಿಶ್ವಾಸವನ್ನು ಗಳಿಸುವ ಕೆಲಸದಲ್ಲಿ ನಿರತವಾಗಿದೆ.

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕಿರುವ ಬಹುಮತ ಸಾಬೀತುಪಡಿಸುವ ಅಚಲ ವಿಶ್ವಾಸ ಹೊಂದಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಸರ್ಕಾರದ ರಕ್ಷಣೆಗೆ ಬೇಕಿರುವ ಕಾರ್ಯತಂತ್ರಗಳನ್ನು ರಹಸ್ಯವಾಗಿ ರೂಪಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರೊಂದಿಗೆ ನಿರಂತರ ಸಂಪರ್ಕದಲ್ಲಿರುವ ಸಿಎಂ, ಕ್ಷಣಕ್ಷಣಕ್ಕೂ ತಿರುವು ಪಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ. ರಾಜೀನಾಮೆ ನೀಡಿರುವ ಶಾಸಕರ ಮನವೊಲಿಸುವ ಪ್ರಯತ್ನವನ್ನು ಸಹ ಮುಂದುವರಿಸಿದ್ದಾರೆ.

ಈಗಾಗಲೇ ವಿಧಾನಸಭೆಯಲ್ಲಿ ಕುಮಾರಸ್ವಾಮಿ ಅವರು ವಿಶ್ವಾಸಮತ ಕೋರಲು ಸಮಯ ನಿಗದಿಪಡಿಸುವಂತೆ ವಿಧಾನಸಭೆಯ ಸ್ಪೀಕರ್ ಅವರನ್ನು ಕೋರಿದ್ದಾರೆ. ಬುಧವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸಲು ಅವಕಾಶ ನೀಡುವಂತೆ ಮನವಿ ಮಾಡಲಾಗಿದ್ದು, ಅಲ್ಲಿಯವರೆಗೂ ನಾಲ್ಕು ದಿನಗಳ ಕಾಲಾವಕಾಶವಿದ್ದು, ಅಷ್ಟರಲ್ಲಿ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಬೇಕಾದ ತಂತ್ರಗಳನ್ನು ರೂಪಿಸಲಾಗುತ್ತಿದೆ.

ವಿಶ್ವಾಸಮತ ಸಾಬೀತುಪಡಿಸುವ ದೃಢ ನಿಲುವು ಹೊಂದಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ಯಾವ ರೀತಿಯಲ್ಲಿ ಶಾಸಕರ ವಿಶ್ವಾಸ ಗಳಿಸಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲಾಗುತ್ತದೆ ಎಂಬ ಗುಟ್ಟನ್ನು ಮಾತ್ರ ಇದುವರೆಗೂ ಬಿಟ್ಟುಕೊಟ್ಟಿಲ್ಲ. ಕಾಂಗ್ರೆಸ್-ಜೆಡಿಎಸ್ ಶಾಸಕರು ರಾಜೀನಾಮೆ ನೀಡಿದ ನಂತರ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿ ಮಾಡಿ ನಿರಂತರವಾಗಿ ಸಲಹೆ, ಮಾರ್ಗದರ್ಶನ ಪಡೆದು ಮೈತ್ರಿ ಸರ್ಕಾರದ ಉಳಿವಿಗೆ ಕಾರ್ಯತಂತ್ರವನ್ನು ರೂಪಿಸುತ್ತಿದ್ದಾರೆ.

Intro:ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಕದನ ಕುತೂಹಲ ಮುಂದುವರೆದಿದೆ. ದೋಸ್ತಿ ಸರ್ಕಾರವನ್ನು ಉರುಳಿಸುವ ಮತ್ತು ಉಳಿಸಿಕೊಳ್ಳುವ ನಿಟ್ಟಿನಲ್ಲಿ ದೋಸ್ತಿ ಪಕ್ಷಗಳಾದ ಜೆಡಿಎಸ್-ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ಪೈಪೋಟಿ ಜೋರಾಗಿಯೇ ನಡೆದಿದೆ.Body:ಮೂರೂ ಪಕ್ಷಗಳಲ್ಲಿನ ಶಾಸಕರ ಮೇಲೆ ಸ್ವತಃ ಆಯಾ ಪಕ್ಷದ ನಾಯಕರಿಗೇ ವಿಶ್ವಾಸವಿಲ್ಲದಂತಾಗಿದೆ. ಕಾಂಗ್ರೆಸ್ನಳ 13 ಮಂದಿ ಶಾಸಕರು ರಾಜೀನಾಮೆ ನೀಡುತ್ತಿದ್ದಂತೆ ಕೈ ಪಾಳೆಯದಲ್ಲಿ ತಳಮಳ ಉಂಟಾಗಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಅಷ್ಟೇ ಅಲ್ಲದೇ ತಾವು ಕಾಂಗ್ರೆಸ್ ಪಕ್ಷಕ್ಕೆ ನಿಷ್ಠರು ಎಂದು ಎದೆ ತಟ್ಟಿ ಹೇಳುತ್ತಿದ್ದವರೇ ಪಕ್ಷಕ್ಕೆ ಕೈ ಕೊಟ್ಟಿರುವುದು ಹಾಗೂ ಇನ್ನಷ್ಟು ಮಂದಿ ಸಂಪರ್ಕಕ್ಕೆ ಸಿಗದೆ ಅಡ್ಡಾಡುತ್ತಿರುವುದು ಕಾಂಗ್ರೆಸ್ ಪಾಳೆಯದಲ್ಲಿ ಮತ್ತಷ್ಟು ಆತಂಕ ಎದುರಾಗಿದೆ. ಹಾಗಾಗಿ, ಈಗಿರುವ ಶಾಸಕರನ್ನಾದರೂ ಹಿಡಿದಿಟ್ಟುಕೊಳ್ಳಲು ನಾಯಕರು ಹರಸಾಹಸಪಡುತ್ತಿದ್ದಾರೆ.
ಇನ್ನು ಜೆಡಿಎಸ್ ನಲ್ಲೂ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. ಜೆಡಿಎಸ್ ನ ಮೂವರು ಶಾಸಕರು ಏಕಾಏಕಿ ಪಕ್ಷ ತೊರೆದಿರುವುದು ಪಕ್ಷದ ವರಿಷ್ಠರಿಗೆ ದೊಡ್ಡ ಶಾಕ್ ನೀಡಿದೆ. ಮತ್ತಷ್ಟು ಶಾಸಕರು ಬಂಡಾಯವೇಳುವ ಮುನ್ಸೂಚನೆಯಿದ್ದು, ಸರ್ಕಾರದ ಉಳಿವಿಗೆ ಶಾಸಕರನ್ನು ರೆಸಾರ್ಟ್ನಾಲ್ಲಿರಿಸಿ ಅವರ ವಿಶ್ವಾಸವನ್ನು ಗಳಿಸುವ ಕೆಲಸದಲ್ಲಿ ನಿರತವಾಗಿದೆ.
ಇನ್ನು ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕಿರುವ ಬಹುಮತ ಸಾಬೀತುಪಡಿಸುವ ಅಚಲ ವಿಶ್ವಾಸ ಹೊಂದಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಸರ್ಕಾರದ ರಕ್ಷಣೆಗೆ ಬೇಕಿರುವ ಕಾರ್ಯತಂತ್ರಗಳನ್ನು ರಹಸ್ಯವಾಗಿ ರೂಪಿಸುತ್ತಿದ್ದಾರೆ.
ಕಾಂಗ್ರೆಸ್ ಪಕ್ಷದ ನಾಯಕರೊಂದಿಗೆ ನಿರಂತರ ಸಂಪರ್ಕದಲ್ಲಿರುವ ಸಿಎಂ, ಕ್ಷಣ ಕ್ಷಣಕ್ಕೂ ತಿರುವು ಪಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ. ರಾಜೀನಾಮೆ ನೀಡಿರುವ ಶಾಸಕರ ಮನವೊಲಿಸುವ ಪ್ರಯತ್ನವನ್ನು ಸಹ ಮುಂದುವರಿಸಿದ್ದಾರೆ.
ಈಗಾಗಲೇ ವಿಧಾನಸಭೆಯಲ್ಲಿ ಕುಮಾರಸ್ವಾಮಿ ಅವರು ವಿಶ್ವಾಸಮತ ಕೋರಲು ಸಮಯ ನಿಗದಿಪಡಿಸುವಂತೆ ವಿಧಾನಸಭೆಯ ಸ್ಪೀಕರ್ ಅವರನ್ನು ಕೋರಿದ್ದಾರೆ. ಬುಧವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸಲು ಅವಕಾಶ ನೀಡುವಂತೆ ಮನವಿ ಮಾಡಲಾಗಿದ್ದು, ಅಲ್ಲಿಯವರೆಗೂ ನಾಲ್ಕು ದಿನಗಳ ಕಾಲಾವಕಾಶವಿದ್ದು, ಅಷ್ಟರಲ್ಲಿ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಬೇಕಾದ ತಂತ್ರಗಳನ್ನು ರೂಪಿಸಲಾಗುತ್ತಿದೆ.
ವಿಶ್ವಾಸಮತ ಸಾಬೀತುಪಡಿಸುವ ದೃಢ ನಿಲುವು ಹೊಂದಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ಯಾವ ರೀತಿಯಲ್ಲಿ ಶಾಸಕರ ವಿಶ್ವಾಸ ಗಳಿಸಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲಾಗುತ್ತದೆ ಎಂಬ ಗುಟ್ಟನ್ನು ಮಾತ್ರ ಇದುವರೆಗೂ ಬಿಟ್ಟುಕೊಟ್ಟಿಲ್ಲ. ಕಾಂಗ್ರೆಸ್-ಜೆಡಿಎಸ್ ಶಾಸಕರು ರಾಜೀನಾಮೆ ನೀಡಿದ ನಂತರ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿ ಮಾಡಿ ನಿರಂತರವಾಗಿ ಸಲಹೆ, ಮಾರ್ಗದರ್ಶನ ಪಡೆದು ಮೈತ್ರಿ ಸರ್ಕಾರದ ಉಳಿವಿಗೆ ಕಾರ್ಯತಂತ್ರವನ್ನು ರೂಪಿಸುತ್ತಿದ್ದಾರೆ.
Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.