ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲದ ನಡುವೆ ಸಿಎಂ ಬಿ.ಎಸ್ ಯಡಿಯೂರಪ್ಪ ಇಂದು ತಮ್ಮ ತವರು ಜಿಲ್ಲೆ ಶಿವಮೊಗ್ಗದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು ಮತ್ತು ಉದ್ಘಾಟಿಸಿದರು.
ಗೃಹ ಕಚೇರಿ ಕೃಷ್ಣಾದಿಂದ ವರ್ಚುಯಲ್ ವ್ಯವಸ್ಥೆ ಮೂಲಕ ಸುಮಾರು 1,800 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ ನೀಡಿದರು ಮತ್ತು ಕೆಲ ಕಾಮಗಾರಿಗಳನ್ನು ಉದ್ಘಾಟಿಸಿದರು. ಮೊನ್ನೆ ನಡೆದ ಸಂಪುಟ ಸಭೆಯಲ್ಲಿ ಸಿಎಂ ಶಿವಮೊಗ್ಗ ಜಿಲ್ಲೆಗೆ ಸಂಬಂಧಪಟ್ಟ ಹಲವು ನಿರ್ಣಯಗಳಿಗೆ ಅನುಮೋದನೆ ನೀಡಿದ್ದರು. ಇಂದು ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವರಾದ ಬಸವರಾಜ್ ಬೊಮ್ಮಾಯಿ, ಬೈರತಿ ಬಸವರಾಜ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಯಾವೆಲ್ಲಾ ಕಾಮಗಾರಿಗಳಿಗೆ ಚಾಲನೆ ?
- 185 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಪ್ರವಾಸಿ ಸೌಲಭ್ಯಗಳ ಅಭಿವೃದ್ಧಿ ಕಾಮಗಾರಿ
- 100 ಕೋಟಿ ರೂ. ವೆಚ್ಚದಲ್ಲಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 200 ಹಾಸಿಗೆಗಳ ಕಿದ್ವಾಯಿ ಮಾದರಿಯ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ
- 120 ಕೋಟಿ ರೂ.ಗಳ ವೆಚ್ಚದಲ್ಲಿ ನೂತನ ಜಿಲ್ಲಾಡಳಿತ ಭವನ ಕಾಮಗಾರಿ
- 15 ಕೋಟಿ ರೂ. ವೆಚ್ಚದಲ್ಲಿ ಎನ್‌ಜಿಒ ಕ್ವಾಟ್ರಸ್ ಕಟ್ಟಡ ಕಾಮಗಾರಿ
- 107.89 ಕೋಟಿ ರೂ. ವೆಚ್ಚದಲ್ಲಿ ವಿಮಾನ ನಿಲ್ದಾಣದ ಟರ್ಮಿನಲ್ ಕಾಮಗಾರಿ, ಈ ಪೈಕಿ 6 ಕೋಟಿ ರೂ. ವೆಚ್ಚದಲ್ಲಿ ಕೆಇಬಿ ವೃತ್ತದಲ್ಲಿ ನೌಕರರ ಸಮುದಾಯ ಭವನ ನಿರ್ಮಾಣ
- 1.50 ಕೋಟಿ ವೆಚ್ಚದಲ್ಲಿ ಸಾಗರ ತಾಲೂಕು ನೀರುಕೋಡು ಗ್ರಾಮದಲ್ಲಿ ಸಾರ್ವಜನಿಕ ಸಮುದಾಯ ಭವನ ಕಾಮಗಾರಿ
- 10 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್ ರಸ್ತೆಗಳ ಕಾಮಗಾರಿ
- 20.89 ಕೋಟಿ ರೂ. ವೆಚ್ಚದಲ್ಲಿ ಸಕ್ರೆಬೈಲಿನಲ್ಲಿ ಜೈವಿಕ ಉದ್ಯಾನವನ ಅಭಿವೃದ್ಧಿ ಕಾಮಗಾರಿ
- 32 ಕೋಟಿ ರೂ. ವೆಚ್ಚದಲ್ಲಿ ಊರಗಡೂರು ಪ್ರದೇಶದಲ್ಲಿ ವಸತಿ ಬಡಾವಣೆ ನಿರ್ಮಾಣ ಕಾಮಗಾರಿ
- 55 ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ 169ರ (ತೀರ್ಥಹಳ್ಳಿ ಪಟ್ಟಣದಲ್ಲಿ ದ್ವಿಪಥದ ಬೃಹತ್ ಸೇತುವೆ ಮತ್ತು ಬೈಪಾಸ್ ರಸ್ತೆ)
- ರಾ.ಹೆ. 206ರಲ್ಲಿ ಸಾಗರ ನಗರ ವ್ಯಾಪ್ತಿಯಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗಳಿಗೆ ಶಂಕುಸ್ಥಾಪನೆ
- 155 ಕೋಟಿ ರೂ. ವೆಚ್ಚದಲ್ಲಿ ಇರುವಕ್ಕಿಯಲ್ಲಿ ನಿರ್ಮಾಣಗೊಂಡಿರುವ ಕೃಷಿ ವಿಶ್ವವಿದ್ಯಾಲಯದ ಕಟ್ಟಡ ಉದ್ಘಾಟನೆ
- 850 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಉಡುಗಣಿ, ತಾಳಗುಂದ, ಹೊಸೂರು ಹೋಬಳಿಗಳ 255 ಕೆರೆಗಳಿಗೆ ನೀರು ತುಂಬುವ ಏತ ನೀರಾವರಿ ಯೋಜನೆಯ ಲೋಕಾರ್ಪಣೆ
- 100 ಕೋಟಿ ರೂ. ವೆಚ್ಚದಲ್ಲಿ 50 ಹಾಸಿಗೆ ವ್ಯವಸ್ಥೆ ಹೊಂದಿರುವ ಹೃದಯ ರೋಗ ವಾರ್ಡ್ ಕ್ಯಾಡ್ ಲ್ಯಾಬ್ ಉದ್ಘಾಟನೆ
- 9.19 ಕೋಟಿ ರೂ. ವೆಚ್ಚದಲ್ಲಿ ಮುಖ್ಯ ಇಂಜಿನಿಯರ್ ಕಟ್ಟಡ ನಿರ್ಮಾಣ ಕಾಮಗಾರಿ
- 41.39 ಕೋಟಿ ರೂ. ವೆಚ್ಚದಲ್ಲಿ ನವುಲೆಯಲ್ಲಿ ಮೆಸ್ಕಾಂ ಶಾಖಾ ಕಚೇರಿ ಕಟ್ಟಡ ಕಾಮಗಾರಿ
- 4.81 ಕೋಟಿ ರೂ. ವೆಚ್ಚದ ಭದ್ರಾವತಿ ನಗರದ ಮೆಸ್ಕಾಂ ವಿಭಾಗೀಯ ಕಚೇರಿ
- 1.10 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ ನಗರದಲ್ಲಿ ನಿರ್ಮಿಸಿರುವ ಮೆಸ್ಕಾಂ ಅತಿಥಿ ಗೃಹ ಕಟ್ಟಡಗಳ ಲೋಕಾರ್ಪಣೆ