ETV Bharat / state

ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆ ಕುರಿತು ಕೇಂದ್ರ ಸಚಿವರಿಗೆ ಸಿಎಂ ಪತ್ರ - ಏಮ್ಸ್‌

ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆ ಮಾಡಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿತ್ತು. ಇದರ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ರಾಯಚೂರಿನಲ್ಲಿ ಏಮ್ಸ್‌ ಸ್ಥಾಪಿಸುವಂತೆ ಒತ್ತಾಯಿಸಿ ಕೇಂದ್ರ ಆರೋಗ್ಯ ಸಚಿವ ಮನ್‌ ಸುಖ್‌ ಮಾಂಡವೀಯಗೆ ಪತ್ರ ಬರೆದಿದ್ದಾರೆ.

Chief Minister Siddaramaiah
ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆ ಕುರಿತು ಕೇಂದ್ರ ಸಚಿವರಿಗೆ ಸಿಎಂ ಪತ್ರ
author img

By

Published : Jun 17, 2023, 7:58 PM IST

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಯಚೂರಿನಲ್ಲಿ ಏಮ್ಸ್‌ (All India Institute of Medical Sciences) ಸ್ಥಾಪಿಸುವಂತೆ ಒತ್ತಾಯಿಸಿ ಕೇಂದ್ರ ಆರೋಗ್ಯ ಸಚಿವ ಮನ್‌ ಸುಖ್‌ ಮಾಂಡವೀಯ ಅವರಿಗೆ ಪತ್ರ ಬರೆದಿದ್ದಾರೆ.

ದೇಶದ ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಒಂದಾಗಿರುವ ರಾಯಚೂರಿನಲ್ಲಿ ಆರೋಗ್ಯ, ಶಿಕ್ಷಣದ ಮಟ್ಟ ಮತ್ತು ತಲಾ ಆದಾಯವು ಇತರ ಪ್ರದೇಶಗಳಿಗಿಂತ ಕಡಿಮೆ ಇದೆ. ವಿಪರೀತ ಹವಾಗುಣದಿಂದಾಗಿ ಭೌಗೋಳಿಕವಾಗಿಯೂ ಪ್ರತಿಕೂಲ ವಾತಾವರಣ ಹೊಂದಿದೆ. ಈ ಎಲ್ಲ ಕಾರಣಗಳಿಂದಾಗಿ ರಾಯಚೂರಿನಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳ ಅಗತ್ಯವಿದೆ. ಏಮ್ಸ್‌ ಸ್ಥಾಪನೆಯಿಂದ ಈ ಭಾಗದಲ್ಲಿ ವಿಶ್ವದರ್ಜೆಯ ವೈದ್ಯಕೀಯ ಸೌಲಭ್ಯ ಒದಗಿಸಿದಂತಾಗುತ್ತದೆ ಎಂದು ಮುಖ್ಯಮಂತ್ರಿಗಳು ಪ್ರತಿಪಾದಿಸಿದ್ದಾರೆ.

ಏಮ್ಸ್‌ ಸ್ಥಾಪನೆಗೆ ಈ ಭಾಗದ ಜನತೆ ಹಾಗೂ ಜನಪ್ರತಿನಿಧಿಗಳ ಬೇಡಿಕೆ ಹೆಚ್ಚುತ್ತಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ನಮ್ಮ ಅತ್ಯಾದ್ಯತೆಯ ವಿಷಯವಾಗಿದೆ. ಆದ್ದರಿಂದ ಸಂಬಂಧಿಸಿದವರಿಗೆ ಈ ಕುರಿತು ಕ್ರಮ ವಹಿಸಲು ಸೂಚನೆ ನೀಡುವಂತೆ ಮುಖ್ಯಮಂತ್ರಿಗಳು ಕೇಂದ್ರ ಸಚಿವರನ್ನು ಕೋರಿದ್ದಾರೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಅವರು ರಾಯಚೂರಿನಲ್ಲಿ ಏಮ್ಸ್‌ ಸ್ಥಾಪಿಸುವ ಬಗ್ಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಇತ್ತೀಚೆಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು. ಅದರಂತೆ ಮುಖ್ಯಮಂತ್ರಿಯವರು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ.

ಭರವಸೆ ನೀಡಿದ್ದ ಸಚಿವ ಶರಣಪ್ರಕಾಶ್ ಪಾಟೀಲ್: ''ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನುಡಿದಂತೆ ನಡೆಯುವ ಸರ್ಕಾರವಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಾಡಲಾಗುವುದಿ. ರಾಯಚೂರಿಗೆ ಏಮ್ಸ್ ಸ್ಥಾಪನೆ ಒತ್ತು ನೀಡುತ್ತೇವೆ. ಸಿದ್ದರಾಮಯ್ಯ ಜೊತೆಗೆ ಚರ್ಚೆ ಮಾಡಿ ಜಾರಿಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ರಾಯಚೂರಿನಲ್ಲಿ ಜೂನ್ 11ರಂದು ಭರವಸೆ ನೀಡಿದ್ದರು. ಇದಕ್ಕೂ ಮುನ್ನ ರಾಯಚೂರಿನ ಏಮ್ಸ್ ಸ್ಥಾಪನೆಗೆ ಒತ್ತಾಯಿಸಿ ರಾಯಚೂರು ಜಿಲ್ಲಾ ಕ್ರೀಡಾಂಗಣದ ಬಳಿಯ ಮಹಾತ್ಮಗಾಂಧಿ ಪುತ್ಥಳಿಯ ಬಳಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ಸ್ಥಳಕ್ಕೆ ಭೇಟಿ ನೀಡಿದ್ದ ಅವರು, ಹೋರಾಟಗಾರರೊಂದಿಗೆ ಚರ್ಚಿಸಿದರು. ಆ ವೇಳೆ ಕಲಬುರಗಿ ಏಮ್ಸ್ ಸ್ಥಾಪನೆ ಮಾಡುತ್ತೇವೆ ಎನ್ನುವ ಹೇಳಿಕೆಯನ್ನು ವಾಪಸ್ ಪಡೆದು, ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆ ಮಾಡುತ್ತೇವೆ ಎನ್ನುವ ಹೇಳಿಕೆಗೆ ಹೋರಾಟಗಾರರು ಪಟ್ಟು ಹಿಡಿದ್ದರು. ಚುನಾವಣೆ ಪ್ರಣಾಳಿಕೆಯಲ್ಲಿ ಹೇಳಿದಂತೆ ರಾಯಚೂರಿನಲ್ಲೇ ಏಮ್ಸ್‌ ಸ್ಥಾಪಿಸಬೇಕು ಎನ್ನುವುದಕ್ಕೆ ಬದ್ಧವಾಗಿರಬೇಕು ಎಂದು ಒತ್ತಾಯಿಸಿದ್ದರು.

ರಾಯಚೂರು ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಸ್ಥಳೀಯವರಿಗೆ ನೀಡುವ ಬದಲು ಬೇರೆ ಜಿಲ್ಲೆಯವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕ ಮಾಡಿರುವುದನ್ನು ಖಂಡಿಸಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್‌ ಅವರಿಗೆ ಕಪ್ಪು ಬಟ್ಟೆ ಪ್ರದರ್ಶಿಸಲು ಮುಂದಾಗಿದ್ದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇನ್ನು, ರಾಯಚೂರು ಜಿಲ್ಲೆಗೆ ಏಮ್ಸ್ ಸ್ಥಾಪನೆ ಮಾಡಬೇಕು ಎಂದು ನೂರಾರು ದಿನಗಳಿಂದ ನಾಗರಿಕ ಹಿರಿಯ ವೇದಿಕೆ ನೇತೃತ್ವದಲ್ಲಿ ನಿರಂತರವಾಗಿ ಹೋರಾಟ ನಡೆಯುತ್ತಿದೆ.

ಇದನ್ನೂ ಓದಿ: ಮರಾಠಿಯಲ್ಲಿದ್ದ ಅರ್ಜಿಯನ್ನು ಅಚ್ಚ ಕನ್ನಡದಲ್ಲೇ ತುಂಬಿದ ಭೂಪ.. ಮಹಾರಾಷ್ಟ್ರ ವಿದ್ಯಾರ್ಥಿಯ ಕನ್ನಡ ಟಿಸಿ ವೈರಲ್​!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.