ETV Bharat / state

ನೇಕಾರರ ಬೇಡಿಕೆ ಸಂಬಂಧ ಸಿಎಂ ಸಭೆ: 50% ಸಹಾಯಧನ, ನೇಕಾರ ಸಮ್ಮಾನ್ ಯೋಜನೆ ವಿಸ್ತರಣೆಗೆ ತೀರ್ಮಾನ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನೇಕಾರರ ಸಮಸ್ಯೆಗಳ ಕುರಿತು ಚರ್ಚೆ ನಡೆಸಿ ಹಲವು ಕ್ರಮ ಕೈಗೊಳ್ಳಲು ನಿರ್ಧರಿಸಲಾಯಿತು.

cm meeting on problems of weavers
ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ
author img

By

Published : Dec 17, 2022, 2:29 PM IST

ಬೆಂಗಳೂರು: ಸಿಎಂ ರೇಸ್ ಕೋರ್ಸ್ ಸರ್ಕಾರಿ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನೇಕಾರರ ಸಮಸ್ಯೆಗಳ ಕುರಿತು ಚರ್ಚೆ ನಡೆಸಿ ಹಲವು ಕ್ರಮ ಕೈಗೊಳ್ಳಲು ನಿರ್ಧರಿಸಲಾಯಿತು.

ಸಭೆಯಲ್ಲಿ ಜವಳಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಕೆಎಚ್ ಡಿ ಸಿ ಅಧ್ಯಕ್ಷ ಸಿದ್ದು ಸವದಿ, ಶಾಸಕ ಅಭಯ್ ಪಾಟೀಲ್, ಮಹದೇವಪ್ಪ ಯಾದವಾಡ, ಮಾಜಿ ಶಾಸಕ ಎಂ ಡಿ ಲಕ್ಷ್ಮೀನಾರಾಯಣ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಐಎಸ್ಎನ್ ಪ್ರಸಾದ್ ಭಾಗವಹಿಸಿದ್ದರು.

ನೇಕಾರರ ಬೇಡಿಕೆ ಈಡೇರಿಕೆಗೆ ಕ್ರಮ:ಈ ಸಂದರ್ಭದಲ್ಲಿ ನೇಕಾರರ ನಾನಾ ಬೇಡಿಕೆ ಈಡೇರಿಕೆ ಕುರಿತು ಚರ್ಚೆ ನಡೆಸಿ ಹಲವು ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲಾಯಿತು. ವೃತ್ತಿಪರ ನೇಕಾರ ಸಮುದಾಯಗಳಿಗೆ ಶೇ. 50 ರಷ್ಟು ಸಹಾಯಧನ ನೀಡುವ ಯೋಜನೆ ರೂಪಿಸುವುದು.ಪವರ್ ಲೂಮ್ ನಲ್ಲಿ ಕಾರ್ಯನಿರ್ವಹಿಸುವ ಕೂಲಿಕಾರರಿಗೆ ನೇಕಾರ ಸಮ್ಮಾನ್ ಯೋಜನೆ ವಿಸ್ತರಿಸುವುದು. ನೇಕಾರರ ಜನವಸತಿ ಪ್ರದೇಶದಲ್ಲಿರುವ ನೇಕಾರರಿಗೆ Occupancy certificate ನೀಡಲು ತೀರ್ಮಾನಿಸಲಾಯಿತು.

ಪ್ರಮುಖ ತೀರ್ಮಾನಗಳೇನು?: ಮನೆಯಲ್ಲಿ ಉದ್ಯೋಗ ನಡೆಸುತ್ತಿರುವ ನೇಕಾರರಿಗೆ ಗುಡಿ ಕೈಗಾರಿಕೆಗಳೆಂದು ಪರಿಗಣಿಸಿ, ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿಯಿಂದ ವಿನಾಯಿತಿ ನೀಡಲು ಆದೇಶ ಹೊರಡಿಸಲು ತೀರ್ಮಾನ.
ಸರ್ಕಾರದ ನೇಕಾರ (ಕೈಮಗ್ಗ ಮತ್ತು ವಿದ್ಯುತ್ ಚಾಲಿತ) ನಿಗಮಗಳ ಉತ್ಪಾದನಾ ಸಾಮರ್ಥ್ಯದ ಅನುಗುಣವಾಗಿ ವಿದ್ಯಾವಿಕಾಸ ಯೋಜನೆಯಡಿ ಸಮವಸ್ತ್ರ ಪೂರೈಕೆ ಪ್ರಮಾಣ ನಿಗದಿಪಡಿಸಿ, ಉಳಿದ ಪ್ರಮಾಣಕ್ಕೆ ಟೆಂಡರ್ ಕರೆಯಲು ತೀರ್ಮಾನಿಸಲಾಯಿತು.

-ಡಿಸೆಂಬರ್ ತಿಂಗಳಿನಲ್ಲಿ ಕಾರ್ಯಾದೇಶ ನೀಡಿ, ಸಕಾಲದಲ್ಲಿ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

-ವಿವಿಧ ಇಲಾಖೆಗಳ ಸಮವಸ್ತ್ರದ ಅಗತ್ಯತೆಯ ಶೇ. 25ರಷ್ಟನ್ನು ಕೈಮಗ್ಗ ನಿಗಮದ ಮೂಲಕ ಖರೀದಿಸಲು ತೀರ್ಮಾನ,

-ನೇಕಾರ ರಿಗೆ 2 ಲಕ್ಷ ರೂ. ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಒದಗಿಸಲು ತೀರ್ಮಾನ.

-5 ಎಚ್‍.ಪಿ. ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳಿಗೆ ತಮಿಳುನಾಡು ಮಾದರಿಯಲ್ಲಿ ಉಚಿತ ವಿದ್ಯುತ್ ಒದಗಿಸಲು ತೀರ್ಮಾನ.
-Fixed charges ನಲ್ಲಿ ಶೇ. 50 ರಿಯಾಯಿತಿ ನೀಡಲು ತೀರ್ಮಾನ

- ನೇಕಾರರನ್ನು ಅಸಂಘಟಿತ ವಲಯದಲ್ಲಿ ಸೇರಿಸಿ, ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳನ್ನು ವೃತ್ತಿಪರ ಕೂಲಿ ನೇಕಾರರಿಗೂ ವಿಸ್ತರಿಸುವ ಬಗ್ಗೆ ಪರಿಶೀಲಿಸಿ, ಆಯವ್ಯಯದ ಮಂಡನೆಯ ಸಂದರ್ಭದಲ್ಲಿ ಹೆಚ್ಚು ಒತ್ತು ನೀಡಲು ಸಿಎಂ ನೇತೃತ್ವದಲ್ಲಿ ನಿರ್ಧರಿಸಲಾಯಿತು.

ಇದನ್ನೂಓದಿ:ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಮತ್ತೆ ಬೆಳಗಾವಿಗೆ ಬರುವುದಾಗಿ ಹೇಳಿಕೆ ಕೊಟ್ಟ ಮಹಾ ಸಚಿವ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.