ಬೆಂಗಳೂರು: ಸಿ ಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ದಾವಣಗೆರೆಯ ಜೆಜೆಎಂ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಶಿಷ್ಯ ವೇತನದ ಬಗ್ಗೆ ಸಭೆ ನಡೆಸಲಾಯಿತು.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಜೆಜೆಎಂ ಮೆಡಿಕಲ್ ಕಾಲೇಜ್ ಅಧ್ಯಕ್ಷ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೂಕ್ತ ತೀರ್ಮಾನ ಕೈಗೊಳ್ಳುವಂತೆ ಶಾಮನೂರು ಶಿವಶಂಕರಪ್ಪ ಅವರಿಗೆ ಸಿಎಂ ಮನವಿ ಮಾಡಿದರು.