ETV Bharat / state

ಪ್ರವಾಸೋದ್ಯಮ ಅಭಿವೃದ್ಧಿಗೆ ಸಮಗ್ರ ವರದಿ ಸಲ್ಲಿಸಿ: ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ - Tourism in the State

ಪ್ರವಾಸೋದ್ಯಮ ಇಲಾಖೆ ಪ್ರಮುಖ ಯೋಜನೆಗಳಿಗೆ ಸಂಬಂಧಿಸಿದಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.

dfsd
ಪ್ರವಾಸೋದ್ಯಮ ಅಭಿವೃದ್ಧಿಗೆ ಸಮಗ್ರ ವರದಿ ಸಲ್ಲಿಸಿ ಸಿಎಂ ಸೂಚನೆ
author img

By

Published : Oct 8, 2020, 2:35 PM IST

ಬೆಂಗಳೂರು: ರಾಜ್ಯದ ಪ್ರವಾಸೋದ್ಯಮ ಕೇಂದ್ರಗಳನ್ನು ಗುರುತಿಸಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಮಗ್ರ ವರದಿಯೊಂದಿಗೆ ಅನುಮತಿ ಪಡೆಯಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ.

ಸಭೆಯಲ್ಲಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ಈಗಾಗಲೇ ಗುರುತಿಸಲಾಗಿರುವ ಪ್ರವಾಸೋದ್ಯಮ ಕೇಂದ್ರಗಳ ಸಮಗ್ರ ಅಭಿವೃದ್ಧಿಗೆ ಇರುವ ತೊಡಕುಗಳನ್ನು ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲು ಅನುಮತಿ ನೀಡಿದರು. ಈ ನಿಟ್ಟಿನಲ್ಲಿ ಅಗತ್ಯ ತಿದ್ದುಪಡಿಯೊಂದಿಗೆ ಪ್ರಸ್ತಾವನೆ ಮಂಡಿಸಲು ಸೂಚಿಸಿದರು.

ಸಭೆಯ ಮುಖ್ಯಾಂಶಗಳು:

1. ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿರುವ ಜಿಲ್ಲೆಗಳನ್ನು ಗುರುತಿಸಿ ಅಧಿಕಾರಿಗಳನ್ನು ನಿಯೋಜಿಸುವಂತೆ ಇಲಾಖಾ ಸಚಿವ ಸಿ.ಟಿ. ರವಿ ಮುಖ್ಯಮಂತ್ರಿ ಬಳಿ ಕೋರಿದರು. ಜಿಲ್ಲೆಗಳಲ್ಲಿ ಅಧಿಕಾರಿಗಳಿಲ್ಲದೆ ಪ್ರಗತಿ ಪರಿಶೀಲನೆ ಅಸಾಧ್ಯವಾಗಿದೆ ಎಂಬ ಅಂಶವನ್ನು ಈ ಸಂದರ್ಭದಲ್ಲಿ ಸಿಎಂ ಗಮನಕ್ಕೆ ತಂದರು.

2. ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶವಿರುವ ಜಿಲ್ಲೆಗಳಲ್ಲಿ ಕೆ.ಎ.ಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಪ್ರಭಾರವನ್ನು ನೀಡಬಹುದಾಗಿದೆ ಎಂದು ಹೇಳಿದರು.

3. ಪ್ರವಾಸೋದ್ಯಮಕ್ಕೆ ಉತ್ತೇಜನ ಇಲಾಖೆಯ ಮುಖ್ಯ ಧ್ಯೇಯವಾಗಬೇಕಿದ್ದು, ಅಭಿವೃದ್ಧಿ ತಾಣಗಳ ಗುರುತಿಸುವಿಕೆ, ನಿರ್ವಹಣೆ, ಸಂರಕ್ಷಣೆಗೆ ಆದ್ಯತೆ ನೀಡಬೇಕು.

4. ಯೋಜನೆಯನ್ನು ಪರಿಪೂರ್ಣವಾಗಿ ಕೈಗೊಂಡು ಮುಗಿಸಬೇಕು, ಆಗ ಮಾತ್ರ ರಾಜ್ಯದ ಪ್ರವಾಸೋದ್ಯಮದಲ್ಲಿ ಅಭಿವೃದ್ಧಿಯಲ್ಲಿ ಹೊಸ ಶಕೆ ನಿರೀಕ್ಷಿಸಬಹುದು.

5. ಜೋಗ ಜಲಪಾತ 120 ಕೋಟಿ ರೂ.ಗಳ ಯೋಜನೆ ಕೆ.ಪಿ.ಸಿ.ಎಲ್ ಮೂಲಕ ಅನುಷ್ಠಾನಕ್ಕೆ ತರಲಾಗುವುದು. ಈ ಮಾಹೆಯ ಅಂತ್ಯದೊಳಗೆ ಯೋಜನೆಯ ವೆಚ್ಚವನ್ನು ಅಂತಿಮಗೊಳಿಸಲಾಗುವುದು ಎಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮಾಹಿತಿ ನೀಡಿದರು.

6. ಕೆಮ್ಮಣ್ಣುಗುಂಡಿ ಮತ್ತು ನಂದಿ ಬೆಟ್ಟದ ಸಮಗ್ರ ಅಭಿವೃದ್ಧಿಯ ಹೊಣೆಯನ್ನು ಪ್ರವಾಸೋದ್ಯಮ ಇಲಾಖೆಗೆ ವಹಿಸುವಂತೆ ಪ್ರವಾಸೋದ್ಯಮ ಇಲಾಖಾ ಸಚಿವರು ಸಲಹೆ ನೀಡಿದರು.

7. ಬಾದಾಮಿ ಅಭಿವೃದ್ಧಿ ಆದ್ಯತೆಯ ಬಗ್ಗೆಯೂ ಸಭೆಯಲ್ಲಿ ಸವಿವರ ಚರ್ಚೆ ನಡೆಯಿತು. ಅಂತಾರಾಷ್ಟ್ರೀಯ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಈ ತಾಣದಲ್ಲಿ ವಿಶ್ವಮಟ್ಟದ ಸೌಲಭ್ಯಗಳನ್ನು ಕಲ್ಪಿಸಲು ಎ.ಪಿ.ಎಂ.ಸಿ ಭೂಮಿಯನ್ನು ಕೆ.ಎಸ್.ಟಿ.ಡಿ.ಸಿ ಗೆ ಹಸ್ತಾಂತರಿಸಿ ವಾಹನ ನಿಲ್ದಾಣ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಬಹುದು.

8. ಶ್ರೀರಂಗಪಟ್ಟಣ ಹಾಗೂ ಮೈಸೂರು ಹಾಥ್ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಯಿತು.

ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್, ಕೆ.ಎಸ್.ಟಿ.ಡಿ.ಸಿ ಅಧ್ಯಕ್ಷರಾದ ಶೃತಿ, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.