ETV Bharat / state

ಮಳೆಹಾನಿ ಪ್ರದೇಶಕ್ಕೆ ಡಿಸಿಗಳು ಭೇಟಿ ನೀಡಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು: ಸಿಎಂ ಸೂಚನೆ

ವಿಧಾನಸಭಾ ಕ್ಷೇತ್ರಗಳ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು, ಹೋಟೆಲ್​ನಿಂದಲೇ ಮಳೆಹಾನಿ ಪರಿಹಾರ ಕಾರ್ಯಾಚರಣೆ ಕುರಿತು ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳೊಂದಿಗೆನ ಸಂವಾದ ನಡೆಸಿದರು.

KN_BNG_0
ವಿಡಿಯೋ ಸಂವಾದ ಮೂಲಕ ಡಿಸಿಗಳೊಂದಿಗೆ ಸಿಎಂ ಸಭೆ
author img

By

Published : Oct 13, 2022, 5:55 PM IST

ಬೆಂಗಳೂರು: ಜನ ಸಂಕಲ್ಪ ಯಾತ್ರೆಯ ನಡುವೆಯೇ ವಿಡಿಯೋ ಸಂವಾದದ ಮೂಲಕ ಮಳೆಪೀಡಿತ ಜಿಲ್ಲಾಡಳಿತಗಳ ಜೊತೆ ವೀಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಮಳೆಹಾನಿ ಪರಿಹಾರ ಕಾರ್ಯಾಚರಣೆ ಕುರಿತು ಮಾಹಿತಿ ಪಡೆದು, ಅಗತ್ಯ ಸಲಹೆ ಸೂಚನೆ ನೀಡಿದರು. ಮೂಲಸೌಕರ್ಯ ಹಾನಿಗೆ ಬಿಡುಗಡೆ ಮಾಡಲಾದ ಅನುದಾನಕ್ಕೆ ಕ್ರಿಯಾಯೋಜನೆ ರೂಪಿಸಿ, ಅನುಷ್ಠಾನಗೊಳಿಸುವಂತೆ ತಿಳಿಸಿದರು.

ಮೂರು ದಿನ ವಿಧಾನಸಭಾ ಕ್ಷೇತ್ರಗಳ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಕಮಲಾಪುರದ ಹೋಟೆಲ್ ನಿಂದಲೇ ಮಳೆ ಹಾನಿಗೆ ಸಂಬಂಧಿಸಿದಂತೆ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಸಚಿವರಾದ ಗೋವಿಂದ ಎಂ.ಕಾರಜೋಳ ಹಾಗೂ ಶಶಿಕಲಾ ಜೊಲ್ಲೆ ಉಪಸ್ಥಿತರಿದ್ದರು. ಇತರ ಜಿಲ್ಲಾ ಉಸ್ತುವಾರಿ ಸಚಿವರು, ಸರ್ಕಾರದ ಹಿರಿಯ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್​ನಲ್ಲಿ ಭಾಗವಹಿಸಿದ್ದರು.

ಸಭೆಯಲ್ಲಿ ಮನೆಗಳಿಗೆ ಸಂಬಂಧಿಸಿದ ಹಾನಿ ದಾಖಲಿಸುವಲ್ಲಿ ಯಾವುದೇ ಲೋಪವಾಗದಂತೆ ಜಿಲ್ಲಾಧಿಕಾರಿಗಳು ಖುದ್ದು ಮೇಲ್ವಿಚಾರಣೆ ವಹಿಸಬೇಕು. ವಸ್ತುಸ್ಥಿತಿ ಆಧರಿಸಿ, ಪರಿಹಾರ ಕೋರಿ ಬಂದ ಮನವಿಗಳನ್ನು ದಾಖಲಿಸಬೇಕು. ಮನೆ ಹಾನಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪರಿಹಾರ ವಿತರಣೆಗೆ ಸುತ್ತೋಲೆ ಹೊರಡಿಸುವಂತೆ ವಿಪತ್ತು ನಿರ್ವಹಣೆ ಆಯುಕ್ತರಿಗೆ ಸಿಎಂ ಸೂಚಿಸಿದರು.

ಜಂಟಿ ಸಮೀಕ್ಷೆಗೆ ಸೂಚನೆ: ಬೆಳೆಹಾನಿ ಪರಿಹಾರ ವಿತರಣೆಯನ್ನೂ ತ್ವರಿತವಾಗಿ ವಿತರಿಸಬೇಕು. ಅಕ್ಟೋಬರ್ ತಿಂಗಳಿನಲ್ಲಿ ಸಂಭವಿಸಿದ ಬೆಳೆಹಾನಿಯನ್ನು ಸಹ ಕೂಡಲೇ ಜಂಟಿ ಸಮೀಕ್ಷೆ ನಡೆಸಿ, ಈ ತಿಂಗಳೊಳಗೆ ಪರಿಹಾರ ವಿತರಿಸಬೇಕು, ಕೆರೆಗಳು ಒಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಆದೇಶಿಸಿದರು.

ಮೂಲಸೌಲಭ್ಯ ಹಾನಿಗೆ ಸಂಬಂಧಿಸಿದಂತೆ ಹಾನಿಯ ತೀವ್ರತೆಯನ್ನು ಆಧರಿಸಿ, ಸಿ ವರ್ಗ- ಎನ್​ಡಿಆರ್​​ಎಫ್​​ ಮಾರ್ಗಸೂಚಿಯನ್ವಯ ದುರಸ್ತಿ, ಬಿ ವರ್ಗ- ಸರ್ಕಾರದಿಂದ ಹೆಚ್ಚುವರಿ ನೆರವು ಅಗತ್ಯವಿರುವ ಕಾಮಗಾರಿಗಳು, ಎ- ಸಂಪೂರ್ಣ ಪುನರ್ ನಿರ್ಮಾಣ ಅಗತ್ಯವಿರುವ ಕಾಮಗಾರಿಗಳು ಎಂದು ಗುರುತಿಸಿ, ಪ್ರಸ್ತಾವನೆ ಸಲ್ಲಿಸುವಂತೆ ಡಿಸಿಗಳಿಗೆ ಸಿಎಂ ತಿಳಿಸಿದರು.

ಆದ್ಯತೆಯ ಮೇಲೆ ಕೆಲಸ ಮಾಡುವಂತೆ ನಿರ್ದೇಶನ: ಸೇತುವೆಗಳ ನಿರ್ಮಾಣದ ವಿಷಯದಲ್ಲಿಯೂ ಆದ್ಯತೆಯನ್ನು ಗುರುತಿಸಿ, ಅದರಂತೆ ದುರಸ್ತಿ, ಮರುನಿರ್ಮಾಣ ಮಾಡಬೇಕು. ಕೆರೆಗಳು ದುರ್ಬಲವಾಗಿರುವುದು, ನೀರಿನ ಒತ್ತಡ ಹೆಚ್ಚಿರುವ ಸೂಕ್ಷ್ಮ ಪರಿಸ್ಥಿತಿಯನ್ನು ಅವಲೋಕಿಸಿ, ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು. ವಿದ್ಯುತ್ ಕಂಬಗಳು, ಟ್ರಾನ್ಸ್​ಪಾರ್ಮರ್​ಗಳನ್ನ 24 ಗಂಟೆಗಳೊಳಗೆ ಸರಿಪಡಿಸಿ, ವಿದ್ಯುತ್ ಸಂಪರ್ಕ ಒದಗಿಸಬೇಕು. ದಿಢೀರ್ ಪ್ರವಾಹ ಉಂಟಾಗುವ ಹೊಳೆ, ಹಳ್ಳಗಳ ವ್ಯಾಪ್ತಿಯಲ್ಲಿ ಸೂಕ್ತ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮುನ್ನೆಚ್ಚರಿಕೆ ವಹಿಸಲು ಆರ್ಡರ್​: ರಾಜ್ಯದಲ್ಲಿ ಹಿಂದೆಂದೂ ಕಾಣದಂತಹ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಮಳೆಹಾನಿಯಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಿ, ಪರಿಹಾರ ವಿತರಣೆ, ಮಾಹಿತಿ ದಾಖಲಿಸುವಲ್ಲಿ ಲೋಪಗಳಾಗದಂತೆ ತಹಸೀಲ್ದಾರರಿಗೆ ಮಾರ್ಗಸೂಚಿ ನೀಡಬೇಕು. ಬೆಳೆಹಾನಿ ಹಾಗೂ ಮನೆಹಾನಿಗೆ ಪರಿಹಾರ ನೀಡಲು ಅನುದಾನದ ಕೊರತೆ ಇಲ್ಲ. ಮೂಲಸೌಕರ್ಯ ಹಾನಿಗೆ ಬಿಡುಗಡೆ ಮಾಡಲಾದ ಅನುದಾನಕ್ಕೆ ಕ್ರಿಯಾಯೋಜನೆ ರೂಪಿಸಿ, ಅನುಷ್ಠಾನಗೊಳಿಸುವಂತೆ ಸೂಚಿಸಿದರು.

ಇದನ್ನೂ ಓದಿ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸಕ್ಕೆ ಹಾಜರಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.