ETV Bharat / state

ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಿಂದ ಸಾಲ ಪಡೆದ ರೈತರ ಸಮಸ್ಯೆ ಬಗೆಹರಿಸಲು ಸಿಎಂ ಸಭೆ - ಈಟಿವಿ ಭಾರತ್​ ಕನ್ನಡ ನ್ಯೂಸ್

ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಿಂದ ಬೆಳೆ ಸಾಲ ಪಡೆದು ಸುಸ್ತಿದಾರರಾಗಿರುವ ರೈತರ ಸಮಸ್ಯೆ ಕುರಿತು ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
author img

By ETV Bharat Karnataka Team

Published : Aug 22, 2023, 5:09 PM IST

ಬೆಂಗಳೂರು : ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಿಂದ ಬೆಳೆ ಸಾಲ ಪಡೆದು ಸುಸ್ತಿದಾರರಾಗಿರುವ ರೈತರಿಗೆ ಒಟಿಎಸ್ (ಒನ್ ಟೈಮ್ ಸೆಟಲ್ಮೆಂಟ್) ಯೋಜನೆಯಡಿ ಅನುಕೂಲ ಕಲ್ಪಿಸುವ ಕುರಿತು ಬ್ಯಾಂಕಿನ ಮುಖ್ಯಸ್ಥರು, ನಬಾರ್ಡ್‌ ಹಾಗೂ ಪ್ರವರ್ತಕ ಬ್ಯಾಂಕ್‌ ಆದ ಕೆನರಾ ಬ್ಯಾಂಕ್‌ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಶಾಸಕ ಬಿ.ಆರ್. ಪಾಟೀಲ ಹಾಗೂ ದರ್ಶನ್‌ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ಸಿದ್ದರಾಮಯ್ಯರನ್ನು ಭೇಟಿಯಾದ ರೈತ ಮುಖಂಡರ ನಿಯೋಗದೊಂದಿಗೆ ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಬೆಳೆ ಸಾಲ ಪಡೆದು ಸುಸ್ತಿದಾರರಾಗಿರುವ ರೈತರ ಸಮಸ್ಯೆ ಕುರಿತು ಚರ್ಚಿಸಿದರು. ಅಲ್ಲದೆ, ಪರಿಹಾರ ಕಂಡುಕೊಳ್ಳಲು ಮುಖ್ಯ ಕಾರ್ಯದರ್ಶಿ ಹಾಗೂ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸುವುದಾಗಿ ಭರವಸೆ ನೀಡಿದರು.

ಬ್ಯಾಂಕಿನಿಂದ ಬೆಳೆ ಸಾಲ ಪಡೆದ ರೈತರು, ಅತಿವೃಷ್ಟಿ, ಅನಾವೃಷ್ಟಿ, ಬೆಲೆ ಕುಸಿತದಂತಹ ಸಮಸ್ಯೆಗಳಿಂದಾಗಿ ಸಕಾಲದಲ್ಲಿ ಸಾಲ ತೀರಿಸಲಾಗದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬ್ಯಾಂಕಿನ ಸಿಬ್ಬಂದಿ ಸಾಲ ಮರುಪಾವತಿಗೆ ನೊಟೀಸು, ಲೀಗಲ್‌ ನೊಟೀಸ್​ಗಳನ್ನು ಕಳುಹಿಸಿ, ಅದರ ವೆಚ್ಚವನ್ನು ರೈತರ ಮೇಲೆಯೇ ಹಾಕುತ್ತಿದ್ದಾರೆ. ಇಂತಹ ಕ್ರಮಗಳಿಂದಾಗಿ 30,000 ರೂ. ಮೊತ್ತದ ಸಾಲಕ್ಕೆ 2.8 ಲಕ್ಷ ರೂ. ಪಾವತಿಸುವಂತೆ, 3 ಲಕ್ಷ ರೂ. ಸಾಲಕ್ಕೆ 3೦ ಲಕ್ಷ ರೂ. ಪಾವತಿಸುವಂತೆ ಕಿರುಕುಳ ನೀಡಲಾಗುತ್ತಿದೆ.

ಇದನ್ನು ಪ್ರತಿಭಟಿಸಿ, 8 ತಿಂಗಳಿನಿಂದ ರೈತ ಹೋರಾಟಗಾರರು ಧರಣಿ ನಡೆಸುತ್ತಿದ್ದಾರೆ. ರೈತರು ಓಟಿಎಸ್ ಅಡಿ ಶೇ. 50 ರಷ್ಟು ಅಸಲು ಪಾವತಿಸಲು ಸಿದ್ಧರಿದ್ದಾರೆ. ರೈತರ ಸಮಸ್ಯೆ ಬಗೆಹರಿಸಿ, ಅನುಕೂಲ ಮಾಡಿಕೊಡುವಂತೆ ರೈತ ಮುಖಂಡರ ನಿಯೋಗ ಮನವಿ ಮಾಡಿತು. ಹಲವು ರಾಷ್ಟ್ರೀಕೃತ ಬ್ಯಾಂಕುಗಳು ರೈತರಿಗೆ ಈ ಅನುಕೂಲ ಕಲ್ಪಿಸಿವೆ ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಬ್ಯಾಂಕ್‌ ಅಧಿಕಾರಿಗಳು, ಬ್ಯಾಂಕಿನ ಆಡಳಿತ ಮಂಡಳಿ ಇದಕ್ಕೆ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಬ್ಯಾಂಕ್‌ನಲ್ಲಿ 6500 ಕೋಟಿ ರೂ. ಸುಸ್ತಿ ಸಾಲವಿದ್ದು, ಅದರಲ್ಲಿ 5000 ಕೋಟಿ ರೂ. ಬೆಳೆ ಸಾಲವಾಗಿದೆ ಎಂದರು. ಬ್ಯಾಂಕಿನ ಅಧ್ಯಕ್ಷರು ಗೈರು ಹಾಜರಾದ ಕುರಿತು ಸಿಎಂ ಅಸಮಾಧಾನ ವ್ಯಕ್ತಪಡಿಸಿದರು.

ನಂತರ ಮಾತನಾಡಿದ ಸಿದ್ದರಾಮಯ್ಯ, ರೈತರ ಕುರಿತು ಮಾನವೀಯತೆಯಿಂದ ವರ್ತಿಸುವಂತೆ ಅಧಿಕಾರಿಗಳಿಗೆ ಸಲಹೆ ಮಾಡಿದರಲ್ಲದೆ, ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಂಬಂಧಿಸಿದ ಬ್ಯಾಂಕರುಗಳ ಸಭೆ ನಡೆಸಿದ ಪರಿಹಾರ ಸೂತ್ರ ಕಂಡುಕೊಂಡ ನಂತರ ಮತ್ತೊಮ್ಮೆ ರೈತ ಪ್ರತಿನಿಧಿಗಳೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದರು.

ಸಭೆಯಲ್ಲಿ ಕೃಷಿ ತಜ್ಞ ಡಾ. ಪ್ರಕಾಶ್‌ ಕಮ್ಮರಡಿ, ರೈತ ಮುಖಂಡರಾದ ಬಡಗಲಪುರ ನಾಗೇಂದ್ರ, ಜಿ.ಸಿ. ಬಯ್ಯಾರೆಡ್ಡಿ, ಮಾಧವರೆಡ್ಡಿ, ಚಾಗನೂರು ಮಲ್ಲಿಕಾರ್ಜುನ ರೆಡ್ಡಿ, ಝಾನ್ಸಿಲಕ್ಷ್ಮಿ, ಟಿ.ಯಶವಂತ್, ಅಲಿಬಾಬ ಸೇರಿ ಹಲವು ರೈತ ಮುಖಂಡರು ಭಾಗವಹಿಸಿದ್ದರು.

ಇದನ್ನೂ ಓದಿ : ಕಾವೇರಿ-ಮಹದಾಯಿ ಜಲವಿವಾದದ ಬಗ್ಗೆ ಚರ್ಚಿಸಲು ನಾಳೆ ಸರ್ವಪಕ್ಷಗಳ ಸಭೆ.. ಪತ್ರದ ಮೂಲಕ ಸಭೆಗೆ ಆಹ್ವಾನ ನೀಡಿದ ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.