ಬೆಂಗಳೂರು: ಆಡಳಿತ ಯಂತ್ರಕ್ಕೆ ವೇಗ ಕೊಡಲು ಮುಂದಾಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ರಾಜ್ಯದ ಎಲ್ಲಾ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಸಿ.ಇ.ಒ ಗಳ ಜೊತೆ ಸಭೆ ನಡೆಸಲಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಿರಂತರವಾಗಿ ನಡೆಯಲಿರುವ ಸಭೆಯಲ್ಲಿ ಸಿಎಂ ಯಡಿಯೂರಪ್ಪ ರಾಜ್ಯದ ಜಿಲ್ಲಾವಾರು ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.
ಜಿಲ್ಲಾವಾರು ಪ್ರಗತಿ, ಆರ್ಥಿಕ ಪರಿಸ್ಥಿತಿ ಪರಿಶೀಲನೆ ಸಂಬಂಧ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆಯಲಿರುವ ಸಿಎಂ, ಜಿಲ್ಲಾವಾರು ಬರ ಪರಿಸ್ಥಿತಿ, ಮಳೆಯ ಕೊರತೆ, ಪರಿಹಾರ ಕ್ರಮಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.