ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಸುರಿಯುತ್ತಿರುವ ಅಕಾಲಿಕ ಮಳೆಯಿಂದ(Karnataka rain) ಆಗಿರುವ ಹಾನಿ ಹಾಗೂ ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಡಳಿತಗಳೊಂದಿಗೆ(CM Meeting with District administrations) ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದಾರೆ.
ಇಂದು ಮಧ್ಯಾಹ್ನ 1 ಗಂಟೆಗೆ ಗೃಹ ಕಚೇರಿ ಕೃಷ್ಣಾದಿಂದ ಸಿಎಂ ಬೊಮ್ಮಾಯಿ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಲಿದ್ದು, ಸಭೆಯಲ್ಲಿ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಆಯಾ ಜಿಲ್ಲೆಗಳಿಂದ ಮಳೆ ಪ್ರಮಾಣ, ಹಾನಿ ವಿವರ, ಪರಿಹಾರ ಕಾರ್ಯಾಚರಣೆ, ತುರ್ತು ಬಳಕೆಗೆ ಜಿಲ್ಲಾಧಿಕಾರಿ ಖಾತೆಯಲ್ಲಿರುವ ಹಣದ ಪ್ರಮಾಣದ ಕುರಿತು ಸಿಎಂ(CM Basavaraj bommai) ಮಾಹಿತಿ ಪಡೆದುಕೊಳ್ಳಲಿದ್ದಾರೆ.
ಮಳೆಗಾಲದ ವೇಳೆಯಲ್ಲಿಯೇ ಸಾಕಷ್ಟು ಹಾನಿಯಾಗಿದ್ದು ಪರಿಹಾರ ಕಾರ್ಯಕ್ಕೆ ಸರ್ಕಾರ ಸರ್ಕಸ್ ನಡೆಸುತ್ತಿದೆ ಅದರ ನಡುವೆ ಇದೀಗ ಮತ್ತೆ ಮಳೆಹಾನಿ ಸಂಭವಿಸಿದ್ದು, ಈ ಕುರಿತು ಪರಿಹಾರ ಕಾರ್ಯದ ಕುರಿತು ಸಿಎಂ ಸಲಹೆ ಸೂಚನೆ ನೀಡಲಿದ್ದಾರೆ.
ಇದನ್ನೂ ಓದಿ: ಏರ್‌ಪೋರ್ಟ್ ರಸ್ತೆಯಲ್ಲಿ 2 ಕಾರುಗಳ ನಡುವೆ ಡಿಕ್ಕಿ; ಮೂವರ ಸಾವು, ಇಬ್ಬರ ಸ್ಥಿತಿ ಗಂಭೀರ