ಬೆಂಗಳೂರು: ಲಾಕ್‌ಡೌನ್ ಸಂಕಷ್ಟಕ್ಕೆ ಸಿಲುಕಿದವರ ನೆರವಿಗಾಗಿ ಘೋಷಿಸಿದ ವಿಶೇಷ ಪ್ಯಾಕೇಜ್‌ನಲ್ಲಿ ರೈತ ಸಮುದಾಯಕ್ಕೆ ನಿರೀಕ್ಷಿತ ಆದ್ಯತೆ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತವಾದ ಹಿನ್ನೆಲೆ ರೈತ ಮುಖಂಡರ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಸಭೆ ನಡೆಸಲಿದ್ದಾರೆ.
ಲಾಕ್‌ಡೌನ್ ನಂತರ ಕೃಷಿಕ್ಷೇತ್ರದ ಸಮಸ್ಯೆಗಳು, ಕೈಗೊಳ್ಳಬೇಕಾದ ಪರಿಹಾರಗಳ ಕುರಿತು ಚರ್ಚಿಸಲು ಇಂದು ಸಂಜೆ 4.30 ಕ್ಕೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ರೈತ ಪ್ರತಿನಿಧಿಗಳ ಸಭೆಯನ್ನು ಕರೆದಿದ್ದಾರೆ.
ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಸೇರಿದಂತೆ ರೈತ ಮುಖಂಡರು ಸಭೆಯಲ್ಲಿ ಭಾಗಿಯಾಗಲಿದ್ದು, ರೈತರ ಸಮಸ್ಯೆ, ಸಂಕಷ್ಟ, ಸವಾಲುಗಳ ಕುರಿತು ಚರ್ಚಿಸಲಿದ್ದಾರೆ.