ಬೆಂಗಳೂರು : ಕೋವಿಡ್ ನಿಯಂತ್ರಣ ಸಂಬಂಧ ಕಾವೇರಿ ನಿವಾಸದಲ್ಲಿ ನಿಗದಿಯಾಗಿದ್ದ ಸಿಎಂ ಜೊತೆಗಿನ ಸಚಿವರ ಸಭೆ ರದ್ದಾಗಿದೆ.
ಇಂದು ಸಂಜೆ ಕಾವೇರಿ ನಿವಾಸದಲ್ಲಿ ಸಚಿವರ ಜೊತೆ ಮಹತ್ವದ ಸಭೆ ನಿಗದಿಯಾಗಿತ್ತು. ಈ ಸಭೆಯಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ವಿಚಾರ ವಿನಿಮಯ ಮಾಡಲು ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ಲಾಕ್‌ಡೌನ್ ಸಂಬಂಧ ಮಹತ್ವದ ನಿರ್ಧಾರ ಕೈಗೊಳ್ಳಲಾಗುತ್ತೆ ಎಂದು ಹೇಳಲಾಗಿತ್ತು.
ಇಂದು ಬೆಳಗ್ಗೆನೇ ಸಿಎಂ, ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಕೊರೊನಾ ನಿಯಂತ್ರಣ ಸಂಬಂಧ ಸಮಾಲೋಚನೆ ನಡೆಸಲಾಯಿತು. ಜೊತೆಗೆ ಸಂಪೂರ್ಣ ಲಾಕ್‌ಡೌನ್ ಮಾಡುವ ಗಂಭೀರ ಚರ್ಚೆ ನಡೆದಿದೆ.
ಎಲ್ಲಾ ಸಚಿವರು ಅಧಿಕಾರಿಗಳು ಸಂಪೂರ್ಣ ಲಾಕ್‌ಡೌನ್ ಬಗ್ಗೆ ಒಲವು ಹೊಂದಿದ್ದರು. ಇತ್ತ ಸಿಎಂ ಕೂಡ ಸಂಪೂರ್ಣ ಲಾಕ್‌ಡೌನ್ ಮಾಡುವ ಬಗ್ಗೆ ಒಲವು ಹೊಂದಿದ್ದಾರೆ.
ಈ ಸಂಬಂಧ ಸಂಜೆ ನಡೆಯುವ ಸಭೆಯಲ್ಲಿ ಅಂತಿಮ ರೂಪ ನೀಡಲಾಗುತ್ತೆ ಎನ್ನಲಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಸಭೆಯನ್ನು ರದ್ದುಗೊಳಿಸಿದ್ದಾರೆ.