ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ಸಭೆ ನಡೆಸಲಿರುವ ಸಿಎಂ ಬಿಎಸ್ವೈ, ಪ್ರವಾಹ ಪರಿಸ್ಥಿತಿ ನಿಭಾಯಿಸುವ ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.
ಇದುವರೆಗೂ ಆಗಿರುವ ಒಟ್ಟು ಹಾನಿ, ಪರಿಹಾರ ಕಾಮಗಾರಿಗಳು, ಮೂರ್ನಾಲ್ಕು ದಿನದಲ್ಲಿ ಮತ್ತೆ ಮಳೆ ಹೆಚ್ಚಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಮಳೆ ಹೆಚ್ಚಾದರೆ ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.
ರಾಜ್ಯಕ್ಕೆ ಹೇಗೆ ನೆರವು ಕಲ್ಪಿಸಬೇಕು, ಕೇಂದ್ರದ ಮುಂದೆ ಯಾವ ರೀತಿ ಅನುದಾನಕ್ಕೆ ಬೇಡಿಕೆ ಸಲ್ಲಿಸಬೇಕು, ವರದಿ ಯಾವಾಗ ಸಲ್ಲಿಕೆ ಮಾಡಬೇಕು ಎಂದು ಚರ್ಚೆ ನಡೆಸಲಾಗುತ್ತದೆ ಎನ್ನಲಾಗಿದೆ.