ETV Bharat / state

ಶಿವಕುಮಾರ ಶ್ರೀಗಳ ಹುಟ್ಟೂರಿನಲ್ಲಿ ಪಾರಂಪರಿಕ ಕೇಂದ್ರ ಸ್ಥಾಪನೆಗೆ ಆದ್ಯತೆ ನೀಡಿ: ಸಿಎಂ ಸೂಚನೆ

ಗೃಹ ಕಚೇರಿ‌ ಕೃಷ್ಣಾದಲ್ಲಿ ಸಿಎಂ ನೇತೃತ್ವದಲ್ಲಿ ನಡೆದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಯಿತು. ಕೊರೊನಾ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಒಳಗಾದ 16,095 ಕಲಾವಿದರು, ಸಾಹಿತಿಗಳಿಗೆ ತಲಾ ಎರಡು ಸಾವಿರ ರೂ. ಗಳಂತೆ ಒಟ್ಟು 3.21 ಕೋಟಿ ರೂ. ಆರ್ಥಿಕ ನೆರವು ಒದಗಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

CM Meeting
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ
author img

By

Published : Jun 12, 2020, 2:04 PM IST

ಬೆಂಗಳೂರು: ಸಿದ್ಧಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯವರ ಹುಟ್ಟೂರು ವೀರಾಪುರ ಗ್ರಾಮ ಹಾಗು ಬಾಲಗಂಗಾಧರನಾಥ ಸ್ವಾಮೀಜಿಗಳ ಜನ್ಮಸ್ಥಳವಾದ ಬಾನಂದೂರು ಗ್ರಾಮದಲ್ಲಿ ಸಾಂಸ್ಕೃತಿಕ ಮತ್ತು ಪಾರಂಪರಿಕ ಕೇಂದ್ರದ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಗೃಹ ಕಚೇರಿ‌ ಕೃಷ್ಣಾದಲ್ಲಿ ಸಿಎಂ ನೇತೃತ್ವದಲ್ಲಿ ನಡೆದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ, ಕೊರೊನಾ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಒಳಗಾದ 16,095 ಕಲಾವಿದರು, ಸಾಹಿತಿಗಳಿಗೆ ತಲಾ ಎರಡು ಸಾವಿರ ರೂ. ಗಳಂತೆ ಒಟ್ಟು 3.21 ಕೋಟಿ ರೂ. ಆರ್ಥಿಕ ನೆರವು ಒದಗಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸಭೆ

ಪ್ರವಾಸೋದ್ಯಮ ವಲಯದಲ್ಲಿ ಕೋವಿಡ್-19 ನಿಂದಾಗಿ ಸುಮಾರು 15 ಸಾವಿರ ಕೋಟಿ ರೂ. ನಷ್ಟವಾಗಿದ್ದು, 3 ಲಕ್ಷ ಉದ್ಯೋಗ ಅಪಾಯದ ಅಂಚಿನಲ್ಲಿದೆ. ಕೆ ಎಸ್​ಟಿಡಿಸಿ ಸಂಸ್ಥೆ ಹಾಗೂ ಜಂಗಲ್ ಲಾಡ್ಜಸ್​ ಸಂಸ್ಥೆಗೆ ಕ್ರಮವಾಗಿ 14 ಕೋಟಿ ರೂ. ಹಾಗೂ 15 ಕೋಟಿ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಲಾಕ್​ಡೌನ್​ನಿಂದಾಗಿ ರಾಜ್ಯದಲ್ಲಿ ಸಿಲುಕಿಕೊಂಡಿರುವ 6780 ವಿದೇಶಿ ಪ್ರವಾಸಿಗರನ್ನು ಸ್ವದೇಶಗಳಿಗೆ ಕಳುಹಿಸಲು ಸಮನ್ವಯ ಸಾಧಿಸಲಾಗಿದ್ದು, ಈ ಬಗ್ಗೆ ಪ್ರವಾಸಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

ಅಧಿಕಾರಿಗಳ ಮಾಹಿತಿ ಆಲಿಸಿದ ಸಿಎಂ ರಾಜ್ಯದ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 20 ಪ್ರಮುಖ ತಾಣಗಳ ಸಮಗ್ರ ಅಭಿವೃದ್ಧಿಗೆ ವಿಸ್ತೃತ ಯೋಜನಾ ವರದಿಗಳು ಸಿದ್ಧವಾಗಿವೆ. ಇವುಗಳನ್ನು ಹಂತ ಹಂತವಾಗಿ ಜಾರಿಗೊಳಿಸುವಂತೆ ಮುಖ್ಯಮಂತ್ರಿ ಸೂಚಿಸಿದರು.

ಸಭೆಯಲ್ಲಿ ಸಚಿವ ಸಿ.ಟಿ. ರವಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.