ETV Bharat / state

ನೂತನ ಸಚಿವರಿಗೆ ಖಾತೆ ಹಂಚಿಕೆ ಸರ್ಕಸ್: ರಾತ್ರಿ ಹಿರಿಯ ಸಚಿವರೊಂದಿಗೆ ಸಿಎಂ‌ ಸಭೆ? - Yediyurappa latest news

ಕೆಲ ಸಚಿವರ ಖಾತೆ ಬದಲಾವಣೆ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಖಾತೆ ಹಂಚಿಕೆ ವಿಳಂಬವಾಗಿದ್ದು, ಖಾತೆಗಳ ಹಂಚಿಕೆಗೂ ಮುನ್ನ ಹಿರಿಯ ಸಚಿವರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ರಾತ್ರಿ ಸಭೆ ನಡೆಸಲಿದ್ದಾರೆ.

Yediyurappa
ಯಡಿಯೂರಪ್ಪ
author img

By

Published : Jan 19, 2021, 5:58 PM IST

ಬೆಂಗಳೂರು: ನೂತನ ಸಚಿವರಿಗೆ ಖಾತೆಗಳ ಹಂಚಿಕೆ ಸಂಬಂಧ ಹಿರಿಯ ಸಚಿವರೊಂದಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸಮಾಲೋಚನೆ ನಡೆಸಲು ನಿರ್ಧರಿಸಿದ್ದು, ರಾತ್ರಿ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಹಿರಿಯ ಸಚಿವರ ಸಭೆ ನಡೆಸಲಿದ್ದಾರೆ ಎನ್ನಲಾಗ್ತಿದೆ.

ಸಚಿವ ಸಂಪುಟ ವಿಸ್ತರಣೆ ಮಾಡಿ ವಾರ ಕಳೆದರೂ ನೂತನ ಸಚಿವರಿಗೆ ಇನ್ನೂ ಖಾತೆಗಳ ಹಂಚಿಕೆ ಮಾಡಿಲ್ಲ. ಕೆಲ ಸಚಿವರ ಖಾತೆ ಬದಲಾವಣೆ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಖಾತೆ ಹಂಚಿಕೆ ವಿಳಂಬವಾಗಿದ್ದು, ಇದಕ್ಕೂ ಮುನ್ನ ಹಿರಿಯ ಸಚಿವರೊಂದಿಗೆ ಸಿಎಂ ಯಡಿಯೂರಪ್ಪ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲಿದ್ದಾರೆ ಎಂದು ತಿಳಿದುಬಂದಿದೆ.

ಓದಿ...ಬರೀ ತೋರಿಕೆಗೆ ಜಿ ಟಿ ದೇವೇಗೌಡ್ರನ್ನ ಕೋರ್‌ ಕಮಿಟಿಗೆ ಸೇರಿಸಬೇಕಾ.. ಹೆಚ್ ಡಿ ಕುಮಾರಸ್ವಾಮಿ

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಡಿಸಿಎಂ ಗೋವಿಂದ ಕಾರಜೋಳ, ಕಂದಾಯ ಸಚಿವ ಆರ್.ಅಶೋಕ್, ಡಿಸಿಎಂ ಲಕ್ಷ್ಮಣ ಸವದಿ ಸೇರಿದಂತೆ ಕೆಲವು ಹಿರಿಯ ಸಚಿವರನ್ನು ಅಧಿಕೃತ ನಿವಾಸ ಕಾವೇರಿಗೆ ಕರೆಸಿಕೊಂಡು ಸಿಎಂ ಚರ್ಚೆ ನಡೆಸಲಿದ್ದಾರೆ. ನೂತನ ಸಚಿವರಿಗೆ ಖಾತೆಗಳ ಹಂಚಿಕೆ ಕುರಿತು ಸಮಾಲೋಚನೆ ನಡೆಸಲಿದ್ದಾರೆ. ನಂತರ ನೂತನ ಸಚಿವರಿಗೆ ಖಾತೆಗಳ ಹಂಚಿಕೆ ಮಾಡಲಿದ್ದಾರೆ ಎಂದು ಹೇಳಲಾಗ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.