ಬೆಂಗಳೂರು : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಾಣಿಜ್ಯ ಸಂಘ-ಸಂಸ್ಥೆಗಳೊಂದಿಗೆ ಸಭೆ ನಡೆಸಿದರು.
ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಣ್ಣ ಕೈಗಾರಿಕೆ ಹಾಗೂ ವಾರ್ತಾ ಸಚಿವ ಸಿ ಸಿ ಪಾಟೀಲ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ ಎಸ್ ನ್ ಪ್ರಸಾದ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಹಾಗೂ ವಾಣಿಜ್ಯ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಾಣಿಜ್ಯ ಇಲಾಖೆಯ ತಜ್ಞರು ಇದೇ ಸಂದರ್ಭ ಉಪಸ್ಥಿತರಿದ್ದು, ವರ್ಷದಲ್ಲಿ ಅಗತ್ಯವಿರುವ ಒಟ್ಟಾರೆ ಅನುದಾನದ ಬೇಡಿಕೆ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಕೋವಿಡ್-19 ಹಿನ್ನೆಲೆ ಸಾಕಷ್ಟು ಆರ್ಥಿಕ ಹೊಡೆತ ಬಿದ್ದಿದೆ. ಸರ್ಕಾರ ನೀಡುವ ಅನುದಾನದ ಮೇಲೆ ಇದನ್ನ ಅವಲಂಬಿಸಿರುವ ಕ್ಷೇತ್ರಗಳ ಅಭಿವೃದ್ಧಿ ನಿಂತಿದೆ.
ಆದ್ಯತೆಯ ಮೇರೆಗೆ ಹೆಚ್ಚುವರಿ ಅನುದಾನ ನೀಡುವಂತೆ ಈ ಸಂದರ್ಭ ಆರ್ಥಿಕ ಇಲಾಖೆ ಅಧಿಕಾರಿಗಳು ಹಾಗೂ ತಜ್ಞರು ಸಿಎಂಗೆ ಮನವರಿಕೆ ಮಾಡಿಕೊಡುವ ಪ್ರಯತ್ನವನ್ನು ಈ ಸಂದರ್ಭ ಮಾಡಿದ್ದಾರೆ. ಇದಲ್ಲದೆ ಇಂದು ವಿಧಾನಸೌಧದಲ್ಲಿ ಸಿಎಂ, ಸಾರಿಗೆ ಇಲಾಖೆ, ಅಬಕಾರಿ ಹಾಗೂ ಭೂ ಮಾರುಕಟ್ಟೆ ಸಂಘಗಳ ಜತೆಗೂ ಬಜೆಟ್ ಪೂರ್ವಭಾವಿ ಸಭೆ ನಡೆಸಿದರು. ಈ ಸಂದರ್ಭ ಅವಶ್ಯಕವಿರುವ ಅನುದಾನ ಹಾಗೂ ಆರ್ಥಿಕ ಚೇತರಿಕೆಗೆ ಅಗತ್ಯ ಕ್ರಮಗಳ ಕುರಿತು ಸಿಎಂ ಸುದೀರ್ಘ ಚರ್ಚಿಸಿದರು.
ಮಾರ್ಚ್ 8ಕ್ಕೆ ಆರ್ಥಿಕ ಸಚಿವರು ಆಗಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಈ ಸಂದರ್ಭದಲ್ಲಿ ಎಷ್ಟು ಅನುದಾನ ಅಗತ್ಯವಿದೆ ಎಂಬ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ನಿರಂತರ ಹತ್ತು ಹನ್ನೆರಡು ದಿನಗಳಿಂದ ವಿವಿಧ ಇಲಾಖೆಗಳ ಜೊತೆ ಸಭೆ ನಡೆಸಿರುವ ಸಿಎಂ, ಬಜೆಟ್ ರೂಪುರೇಷೆ ಸಿದ್ಧಪಡಿಸುತ್ತಿದ್ದಾರೆ.