ETV Bharat / state

ಪಂಚಮಸಾಲಿ ಮೀಸಲಾತಿ ಅಧ್ಯಯನ ವರದಿಗೆ ಸಿಎಂ ಸೂಚನೆ: ನಿರಾಣಿ, ಸಿಸಿಪಿ ಅಭಿನಂದನೆ

author img

By

Published : Feb 5, 2021, 10:42 PM IST

ಪಂಚಮಸಾಲಿ ಸಮಾಜವನ್ನು ಪ್ರವರ್ಗ 2ಎ ಗೆ ಸೇರಿಸುವ ಕುರಿತು ಕಾನೂನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧನಿದ್ದೇನೆ ಹಾಗೂ ಉಭಯ ಶ್ರೀಗಳ ಬೇಡಿಕೆಯ ಬಗ್ಗೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನು ಪಂಚಮ ಸಾಲಿ ಸಮಾಜವನ್ನು 2-ಎ ಪ್ರವರ್ಗಗಕ್ಕೆ ಸೇರಿಸುವ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲು ಕೋರಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

cm-note-to-study-report-on-panchamasali-reservation
ನಿರಾಣಿ, ಸಿಸಿಪಿ ಅಭಿನಂದನೆ

ಬೆಂಗಳೂರು: ಪಂಚಮಸಾಲಿ ಸಮಾಜವನ್ನು ಪ್ರವರ್ಗ 2ಎ ಗೆ ಸೇರಿಸುವ ಬಗ್ಗೆ ಸಮಗ್ರ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಹಿಂದುಳಿದ ವರ್ಗದ ಆಯೋಗಕ್ಕೆ ಸೂಚನೆ ನೀಡಿದ ಸಿಎಂ ಯಡಿಯೂರಪ್ಪ ಅವರಿಗೆ ಸಚಿವರಾದ ಮುರುಗೇಶ್ ನಿರಾಣಿ ಮತ್ತು ಸಿ.ಸಿ. ಪಾಟೀಲ ಅಭಿನಂದನೆ ಸಲ್ಲಿಸಿದ್ದಾರೆ.

ಓದಿ: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ವಿಚಾರ: ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸಿಎಂ ಸೂಚನೆ

ನಮ್ಮನ್ನೊಳಗೊಂಡಂತೆ ಪಂಚಮಸಾಲಿ ಸಮಾಜದ ಹತ್ತು-ಹನ್ನೊಂದು ಶಾಸಕರುಗಳನ್ನು, ಪಾದಯಾತ್ರೆ ನಡೆಸುತ್ತಿರುವ ಉಭಯ ಶ್ರೀಗಳಾದ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ವಚನಾನಂದ ಸ್ವಾಮೀಜಿಯವರು ಮತ್ತು ಸಮಾಜದ ಮುಖಂಡರನ್ನು ಭೇಟಿಗೆ ಕಳಿಸಿದ್ದರು ಎನ್ನುವ ಮಾಹಿತಿಯನ್ನು ಪತ್ರಿಕಾ ಹೇಳಿಕೆ ಮೂಲಕ ಉಭಯ ಸಚಿವರು ಹಂಚಿಕೊಂಡಿದ್ದಾರೆ.

ಪಂಚಮಸಾಲಿ ಸಮಾಜವನ್ನು ಪ್ರವರ್ಗ 2ಎ ಗೆ ಸೇರಿಸುವ ಕುರಿತು ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲು ಸಿದ್ಧನಿದ್ದೇನೆ ಹಾಗೂ ಉಭಯ ಶ್ರೀಗಳ ಬೇಡಿಕೆಯ ಬಗ್ಗೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನು ಪಂಚಮಸಾಲಿ ಸಮಾಜವನ್ನು 2-ಎ ಪ್ರವರ್ಗಕ್ಕೆ ಸೇರಿಸುವ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲು ಕೋರಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಆದರೆ ಇಂದು ನಡೆದ ವಿಧಾನಸಭಾ ಅಧಿವೇಶನದಲ್ಲಿ ನಮ್ಮದು ರಾಷ್ಟ್ರೀಯ ಪಕ್ಷ ಎಲ್ಲರೊಂದಿಗೆ ಚರ್ಚಿಸಿ ನಿರ್ಣಯ ತೆಗೆದುಕೊಳ್ಳಬೇಕೆಂಬುದನ್ನು ತಪ್ಪಾಗಿ ಅರ್ಥೈಸಲಾಗಿದೆ. ಮುಖ್ಯಮಂತ್ರಿಯವರು, ಪಂಚಮಸಾಲಿ ಸಮಾಜವನ್ನು ಪ್ರವರ್ಗ 2ಎ ಗೆ ಸೇರಿಸುವ ಬಗ್ಗೆ ಸಮಗ್ರ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಈಗಾಗಲೆ ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷರನ್ನು ಕೋರಿದ್ದಾರೆ.

ಅಲ್ಲದೆ ನಮ್ಮ ಸರ್ಕಾರ ಈ ಹಿಂದೆ ಪಂಚಮಸಾಲಿ ಸಮಾಜವನ್ನು ಹಿಂದುಳಿದ ಪ್ರವರ್ಗ 3ಬಿ ಗೆ ಸೇರಿಸಿರುವುದನ್ನು ಈ ಸಂದರ್ಭದಲ್ಲಿ ನನಪಿಸಿಕೊಳ್ಳಬಹುದಾಗಿದೆ. ಈ ಕಾರಣಕ್ಕಾಗಿ ನಾವೆಲ್ಲರು ಮುಖ್ಯಮಂತ್ರಿಯವರನ್ನು ಅಭಿನಂದಿಸುತ್ತೇವೆ ಎಂದು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.