ETV Bharat / state

ಭದ್ರಾ ಮೇಲ್ದಂಡೆ, ಎತ್ತಿನಹೊಳೆ ಯೋಜನೆ ಶೀಘ್ರ ಪೂರ್ಣಗೊಳಿಸಿ: ಸಿಎಂ ಸೂಚನೆ - yadiyurappa latest news

ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಎತ್ತಿನಹೊಳೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆ ಸಂಬಂಧ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮಹತ್ವದ ಸಭೆ ನಡೆಸಿದ್ದಾರೆ. ಸಮಗ್ರ ಮಾಹಿತಿ ಪಡೆದುಕೊಂಡಿರುವ ಸಿಎಂ ಈ ಯೋಜನೆಗಳಿಗೆ ಮತ್ತಷ್ಟು ವೇಗ ಕೊಟ್ಟು, ಕಾಮಗಾರಿಗಳನ್ನು ಆದಷ್ಟು ಬೇಗ ಕಾಲಮಿತಿಯಲ್ಲಿಯೇ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು. ‌

cm meeting
ಸಿಎಂ ಬಿಎಸ್​ವೈ ನೇತೃತ್ವದ ಸಭೆ
author img

By

Published : Jun 29, 2021, 3:06 PM IST

ಬೆಂಗಳೂರು: ರಾಜ್ಯದ ಮಹತ್ವಾಕಾಂಕ್ಷೆಯ ನೀರಾವರಿ ಯೋಜನೆಗಳಾದ ಭದ್ರಾ ಮೇಲ್ದಂಡೆ ಹಾಗೂ ಎತ್ತಿನ ಹೊಳೆ ಯೋಜನೆಗಳಿಗೆ ವೇಗ ನೀಡಬೇಕು. ಕಾಲಮಿತಿಯಲ್ಲಿ ಯೋಜನೆಗಳನ್ನು ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಎತ್ತಿನಹೊಳೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆ ಸಂಬಂಧ ಸಿಎಂ ಬಿಎಸ್​​ವೈ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದು, ಎರಡು ನೀರಾವರಿ ಯೋಜನೆಗಳ ಬಗ್ಗೆ ಸಿಎಂ ಪ್ರಗತಿ ಪರಿಶೀಲಿಸಿದರು. ಈ ಯೋಜನೆಗಳಿಗೆ ಮತ್ತಷ್ಟು ವೇಗ ಕೊಟ್ಟು, ಕಾಮಗಾರಿಗಳನ್ನು ಆದಷ್ಟು ಬೇಗ ಕಾಲಮಿತಿಯಲ್ಲಿಯೇ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು. ‌

cm meeting
ಸಿಎಂ ಬಿಎಸ್​ವೈ ನೇತೃತ್ವದಲ್ಲಿ ಸಭೆ

ಎತ್ತಿನಹೊಳೆ ಯೋಜನೆಯು 7 ಜಿಲ್ಲೆಯ 29 ತಾಲೂಕುಗಳ 6,557 ಗ್ರಾಮಗಳ 68 ಲಕ್ಷಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರು ಒದಗಿಸಲಿದೆ. ಈವರೆಗೆ 9,003. 86 ಕೋಟಿ ರೂ. ವೆಚ್ಚವಾಗಿದ್ದು, ಮೊದಲ ಹಂತದಲ್ಲಿ ಜುಲೈ ಅಂತ್ಯದೊಳಗೆ ವೇದಾವತಿ ವ್ಯಾಲಿಗೆ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಕುಡಿಯುವ ನೀರಿನ ಯೋಜನೆಯಾಗಿರುವ ಎತ್ತಿನಹೊಳೆ ಯೋಜನೆಯನ್ನು 2023ಕ್ಕೆ ಪೂರ್ಣಗೊಳಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಆ ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವತ್ತ ಗಮನ ಹರಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಕೇಂದ್ರ ಸಚಿವ ಸಂಪುಟದ ಅನುಮೋದನೆ ಬಾಕಿಯಿದೆ. ಈ ಬಗ್ಗೆ ಕೇಂದ್ರ ಸಚಿವರೊಂದಿಗೆ ದೂರವಾಣಿ ಮೂಲಕ‌ ಚರ್ಚಿಸಲಾಗಿದ್ದು, ಶೀಘ್ರ ‌ಅನುಮೋದನೆ ನೀಡಲು‌ ಕೋರಲಾಗಿದೆ.

ಅಗತ್ಯ ಬಿದ್ದರೆ ಕೇಂದ್ರ ಸಚಿವರನ್ನು ಖುದ್ದು ಭೇಟಿ ಮಾಡಿ‌ ಮಂಜೂರಾತಿಗೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು. ಈ ಯೋಜನೆಯಡಿ ಕಳೆದರಡು ವರ್ಷಗಳಲ್ಲಿ 2362.62 ಕೋಟಿ ರೂ. ಗಳ ಆರ್ಥಿಕ ಪ್ರಗತಿ ಸಾಧಿಸಲಾಗಿದ್ದು, ಈ ಯೋಜನೆಯಿಂದ ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಿಗೆ ಅನುಕೂಲವಾಗಲಿದೆ.

ನೀರಾವರಿ ಯೋಜನೆಗಳನ್ನು ಯಾವುದೇ ಲೋಪವಿಲ್ಲದಂತೆ ಅನುಷ್ಠಾನಗೊಳಿಸಬೇಕು. ಯಾವುದೇ ಲೋಪ ದೋಷಗಳು ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇದನ್ನೂ ಓದಿ: ಬೆಳಗಾವಿಯಲ್ಲಿ ಅಧಿವೇಶನ ನಡೆಸುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

ಭದ್ರಾ ಮೇಲ್ದಂಡೆ ಯೋಜನೆ ಸಂಬಂಧ 20 ಸಾವಿರ ಕೋಟಿಗೂ ಹೆಚ್ಚು ಕಿಕ್‌ ಬ್ಯಾಕ್ ಪಡೆಯಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಆರೋಪಿಸಿದ್ದರು. ನಂತರ ಸರ್ಕಾರ ಅರೋಪ ನಿರಾಕರಿಸಿತ್ತು. ಇದೀಗ ಇದೇ ಯೋಜನೆ ಕುರಿತು ಸಿಎಂ ಯಡಿಯೂರಪ್ಪ ಅಧಿಕಾರಿಗಳ ಸಭೆ ನಡೆಸಿದ್ದು, ಇಡೀ ಯೋಜನೆ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡಿದ್ದಾರೆ. ಆರೋಪ ಹಾಗೂ ಅದಕ್ಕೆ ಇಲಾಖೆ ನೀಡಿದ್ದ ಸ್ಪಷ್ಟೀಕರಣದ ವಿವರವನ್ನೂ ಪಡೆದುಕೊಂಡರು ಎನ್ನಲಾಗಿದೆ‌.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.