ETV Bharat / state

ಸಿಎಂ ಪ್ರಮಾಣವಚನ ಹಿನ್ನೆಲೆ: ಬೆಳಗ್ಗೆ 8.30ಕ್ಕೆ ಆಗಮಿಸುವಂತೆ ಸಿಇಟಿ ವಿದ್ಯಾರ್ಥಿಗಳಿಗೆ ಮುನ್ಸೂಚನೆ..! - CET Exam

ನಾಳೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು, ಸುತ್ತಮುತ್ತ ಟ್ರಾಫಿಕ್​ ಸಮಸ್ಯೆ ಆಗುವ ಕಾರಣ ಪರೀಕ್ಷೆ ಬರೆಯುವವರಿಗಾಗಿ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗಿದೆ.

cet students are advised to arrive at 8.30
8.30ಕ್ಕೆ ಆಗಮಿಸುವಂತೆ ಸಿಇಟಿ ವಿದ್ಯಾರ್ಥಿಗಳಿಗೆ ಮುನ್ಸೂಚನೆ
author img

By

Published : May 19, 2023, 6:01 PM IST

ಬೆಂಗಳೂರು: ನಗರದ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸಮಾರಂಭ ನಿಗದಿ ಆಗಿರುವ ಹಿನ್ನೆಲೆಯಲ್ಲಿ, ಸುತ್ತಮುತ್ತಲಿನ ಕಾಲೇಜುಗಳಲ್ಲಿ ಸಿಇಟಿ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹಲವು ಕ್ರಮಗಳನ್ನು ಕೈಗೊಂಡಿದೆ. ಮುಖ್ಯವಾಗಿ, ಕಾರ್ಯಕ್ರಮ ನಡೆಯಲಿರುವ ಸ್ಥಳಕ್ಕೆ ಸಮೀಪದಲ್ಲಿ ಇರುವ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿರುವವರು ಬೆಳಗ್ಗೆ 8.30ರ ಹೊತ್ತಿಗೆ ಪರೀಕ್ಷಾ ಕೇಂದ್ರಗಳನ್ನು ತಲುಪಬೇಕು ಎಂದು ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮಧ್ಯಾಹ್ನ ನಡೆಯಲಿರುವ ಗಣಿತದ ಪರೀಕ್ಷೆ ಮಾತ್ರ ಬರೆಯುತ್ತಿರುವವರು ಸಹ ಪರೀಕ್ಷಾ ಕೇಂದ್ರಗಳನ್ನು ಬೆಳಗ್ಗೆಯೇ ತಲುಪುವುದು ಒಳ್ಳೆಯದು. ಏಕೆಂದರೆ, ಪ್ರಮಾಣ ವಚನ ಸಮಾರಂಭದಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಂಭವವಿದೆ ಎಂದಿದ್ದಾರೆ. ಒಂದು ವೇಳೆ, ಅಭ್ಯರ್ಥಿಗಳು ಸಂಚಾರ ದಟ್ಟಣೆಗೆ ಸಿಲುಕಿಕೊಂಡಲ್ಲಿ ಪರೀಕ್ಷಾ ಪ್ರವೇಶ ಪತ್ರವನ್ನು ಪೊಲೀಸರಿಗೆ ತೋರಿಸಿದರೆ ಅಂತಹವರನ್ನು ಆದಷ್ಟು ಬೇಗ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಅಗತ್ಯ ವ್ಯವಸ್ಥೆ ಮಾಡಿಕೊಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಜತೆಗೆ, ವಿಠ್ಠಲ್​ ಮಲ್ಯ ರಸ್ತೆಯಲ್ಲಿನ ಸೆಂಟ್ ಜೋಸೆಫ್ಸ್ ಇಂಡಿಯನ್ ಪಿಯು ಕಾಲೇಜು ಕಂಠೀರವ ಕ್ರೀಡಾಂಗಣಕ್ಕೆ ತುಂಬಾ ಹತ್ತಿರದಲ್ಲಿದೆ. ಹೀಗಾಗಿ ಈ ಕೇಂದ್ರದಲ್ಲಿ ಸಿಇಟಿ ಬರೆಯುತ್ತಿರುವವರಿಗೆ ಮಾತ್ರ ಬೆಳಗ್ಗೆ ಉಪಾಹಾರ ಮತ್ತು ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಪ್ರಾಧಿಕಾರದಿಂದ ಏರ್ಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ನಗರದ ಕೆಳಕಂಡ ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಬರೆಯುವವರು ಬೆಳಗ್ಗೆ 8.30ಕ್ಕೆ ಬರಲು ಸೂಚನೆ: ಬಿಷಪ್ ಕಾಟನ್ ಮಹಿಳಾ ಪದವಿ ಪೂರ್ವ ಕಾಲೇಜು, 3ನೇ ಅಡ್ಡರಸ್ತೆ, ಸಿಎಸ್ಐ ಕಾಂಪೌಂಡ್. ಗುಡ್ ವಿಲ್ ಬಾಲಕಿಯರ ಪದವಿ ಪೂರ್ವ ಕಾಲೇಜು, ಪ್ರೊಮೆನೇಡ್ ರಸ್ತೆ, ಫ್ರೇಸರ್ ಟೌನ್. ಸೆಂಟ್ ಜೋಸೆಫ್ಸ್ ಪದವಿ ಪೂರ್ವ ಕಾಲೇಜು, ರೆಸಿಡೆನ್ಸಿ ರಸ್ತೆ. ಸೆಂಟ್ ಜೋಸೆಫ್ಸ್ ಇಂಡಿಯನ್ ಪದವಿ ಪೂರ್ವ ಕಾಲೇಜು, ವಿಠಲ್ ಮಲ್ಯ ರಸ್ತೆ. ಸೆಂಟ್ ಆ್ಯನ್ಸ್ ಬಾಲಕಿಯರ ಪದವಿ ಪೂರ್ವ ಕಾಲೇಜು, ಮಿಲ್ಲರ್ಸ್ ರಸ್ತೆ. ಆರ್. ಬಿ.ಎ.ಎನ್.ಎಂ.ಎಸ್ ಪದವಿ ಪೂರ್ವ ಕಾಲೇಜು, ಅಣ್ಣಾಸ್ವಾಮಿ ಮೊದಲಿಯಾರ್ ರಸ್ತೆ. ಎಸ್.ಜೆ.ಆರ್.ಸಿ. ಬಿಐಎಫ್ಆರ್ ಪದವಿ ಪೂರ್ವ ಕಾಲೇಜು, ಆನಂದ ರಾವ್ ವೃತ್ತ. ಕ್ಯಾಥೆಡ್ರಲ್ ಕಾಂಪೋಸಿಟ್ ಪದವಿ ಪೂರ್ವ ಕಾಲೇಜು, ರಿಚ್ಮಂಡ್ ರಸ್ತೆ. ಸೆಂಟ್ ಯುಫ್ರಿಶಿಯಸ್ ಬಾಲಕಿಯರ ಪ್ರೌಢ ಶಾಲೆ ಮತ್ತು ಕಾಂಪೋಸಿಟ್ ಪದವಿ ಪೂರ್ವ ಕಾಲೇಜು, ಆಲ್ಬರ್ಟ್ ಸ್ಟ್ರೀಟ್, ರಿಚ್ಮಂಡ್ ಟೌನ್. ಸ್ಟ್ರೇಸಿ ಮೆಮೋರಿಯಲ್ ಕಾಂಪೋಸಿಟ್ ಪದವಿ ಪೂರ್ವ ಕಾಲೇಜು, ಸೆಂಟ್ ಮಾರ್ಕ್ಸ್ ರಸ್ತೆ. ಹಸನತ್ ಮಹಿಳಾ ಪದವಿ ಪೂರ್ವ ಕಾಲೇಜು, ಡಿಕನ್ಸನ್ ರಸ್ತೆ.

ಇದನ್ನೂ ಓದಿ: ನಾಳೆ ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ: ಕಂಠೀರವ ಸ್ಟೇಡಿಯಂ ಸುತ್ತ ಬಿಗಿ ಭದ್ರತೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.