ETV Bharat / state

ಡಿ ರೂಪಾ ಮತ್ತು ರೋಹಿಣಿ ಸಿಂಧೂರಿಗೆ ನೋಟಿಸ್ ನೀಡಲು ಸಿಎಂ ಬೊಮ್ಮಾಯಿ ಆದೇಶ - D Roopa and Rohini Sindhuri

ಐಎಎಸ್​ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ನಡುವೆ ಜಟಾಪಟಿ- ಈ ಇಬ್ಬರು ಅಧಿಕಾರಿಗಳಿಗೆ ನೋಟಿಸ್​ - ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
author img

By

Published : Feb 20, 2023, 4:32 PM IST

Updated : Feb 20, 2023, 5:28 PM IST

ಬೆಂಗಳೂರು: ಇಬ್ಬರು ಹಿರಿಯ ಅಧಿಕಾರಿಗಳು ರಾಜ್ಯ ಸರ್ಕಾರದ ಸೇವಾ ನಿಯಮಗಳ ಚೌಕಟ್ಟನ್ನು ಮೀರಿ ಮಾಧ್ಯಮದಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗವಾಗಿ ಆರೋಪ - ಪ್ರತ್ಯಾರೋಪದಲ್ಲಿ ತೊಡಗಿರುವುದನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳಾದ ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಬಂಧಪಟ್ಟ ಇಲಾಖೆ ಮುಖ್ಯಸ್ಥರಿಗೆ ಆದೇಶ ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಪ್ರಕರಣವನ್ನು ಗಮನಿಸಿ ರಾಜ್ಯ ಸರ್ಕಾರಕ್ಕೆ ಆಗುತ್ತಿರುವ ಮುಜುಗರದಿಂದ ಇಬ್ಬರು ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಐಎಎಸ್ ಅಧಿಕಾರಿಯಾಗಿರುವ ರಾಜ್ಯ ಧಾರ್ಮಿಕ ಮತ್ತು ದತ್ತಿ ನಿಧಿ ಇಲಾಖೆಯ ಆಯುಕ್ತೆ ರೋಹಿಣಿ ಸಿಂಧೂರಿ ಅವರಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಹಾಗೆಯೇ ಐಜಿಪಿ ದರ್ಜೆ ಅಧಿಕಾರಿಯಾಗಿರುವ ರಾಜ್ಯ ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಡಿ ರೂಪಾ ಅವರಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸಿಎಂ ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ಈ ಸೂಚನೆ ನಂತರವೂ ಇಬ್ಬರು ಅಧಿಕಾರಿಗಳ ಆರೋಪ ಮತ್ತು ಪ್ರತ್ಯಾರೋಪ ಮುಂದುವರೆದಿದೆ.

ರೋಹಿಣಿ ಸಿಂಧೂರಿ ಪತಿಯಿಂದ ಡಿ ರೂಪಾ ವಿರುದ್ಧ ದೂರು: ರೋಹಿಣಿ ಸಿಂಧೂರಿ ವೈಯಕ್ತಿಕ ಫೋಟೋಗಳನ್ನು ವೈರಲ್ ಮಾಡಿರುವ ಡಿ. ರೂಪಾ ವಿರುದ್ಧ ಸಿಂಧೂರಿ ಪತಿ ಬಾಗಲಗುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ರೂಪಾ ಮಾಡಿದ ಆರೋಪಕ್ಕೆ ನಿನ್ನೆ ತಿರುಗೇಟು ನೀಡಿದ್ದ ರೋಹಿಣಿ‌ ಸಿಂಧೂರಿ,‌ ಕಾನೂನು ಕ್ರಮ‌ ಕೈಗೊಳ್ಳುವುದಾಗಿ ಹೇಳಿದ್ದರು. ಇಂದು ಬೆಳಗ್ಗೆ ಬಾಗಲಗುಂಟೆ ಪೊಲೀಸ್ ಠಾಣೆಗೆ ಸಿಂಧೂರಿ ಪತಿ ಸುಧೀರ್ ರೆಡ್ಡಿ ತೆರಳಿ ರೂಪಾ ವಿರುದ್ಧ ದೂರು ನೀಡಿದ್ದಾರೆ. ಪತ್ನಿ ಸಿಂಧೂರಿ ಅವರ ವೈಯಕ್ತಿಕ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ‌ ಮಹಿಳಾ ಘನತೆ ಹಾಗೂ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಅಲ್ಲದೇ, ಸರ್ಕಾರಿ ಅಧಿಕಾರಿಯನ್ನ ತೇಜೋವಧೆ ಮಾಡುವ ಪ್ರಯತ್ನ ಮಾಡಲಾಗಿದೆ ಎಂದು ಫೇಸ್ ಬುಕ್ ಹಾಗೂ‌ ಟ್ವಿಟರ್ ಲಿಂಕ್​ ಇರುವ ಎರಡು ಪುಟಗಳ ದೂರು ನೀಡಿದ್ದಾರೆ. ದೂರು ಸ್ವೀಕರಿಸಿರುವ ಪೊಲೀಸರು, ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ಕ್ರಮ‌ ಕೈಗೊಳ್ಳುವ ಸಾಧ್ಯತೆಯಿದೆ.

ದೂರು ನೀಡುವ ಮುನ್ನ ಮಾತನಾಡಿದ ಸುಧೀರ್ ರೆಡ್ಡಿ, 'ವೈಯಕ್ತಿಕ ಉದ್ದೇಶದಿಂದ ಆರೋಪಿಸುತ್ತಿರುವ ಡಿ. ರೂಪಾಗೆ ಮಾನಸಿಕ ತೊಂದರೆಯಿದೆ. ನಾನು ಎಲ್ಲಿಯೂ ಪತ್ನಿಯ ಅಧಿಕಾರ ದುರ್ಬಳಕೆ ಮಾಡಿಕೊಂಡವನಲ್ಲ. ಸುಖಾಸುಮ್ಮನೆ ನಮ್ಮ ವಿರುದ್ಧ ಮಾತನಾಡಿದ್ರೆ ಕಾನೂನು ಕ್ರಮ ಕೈಗೊಳ್ಳುತ್ತೇನೆ.

ನಾನು ಯಾವತ್ತೂ ಮಾಧ್ಯಮದ ಮುಂದೆ ಬಂದವನಲ್ಲ. ಆದರೆ, ಈ ವಿಚಾರ ತೀರಾ ವೈಯಕ್ತಿಕವಾಗಿರುವುದರಿಂದ ಮಾತನಾಡುತ್ತಿದ್ದೇನೆ. ತನಗಿಂತ 10 ವರ್ಷ ಜೂನಿಯರ್ ಆಗಿರುವ ಸಿಂಧೂ ಇಷ್ಟು ಹೆಸರು ಮಾಡಿದ್ದಾರೆ ಎಂದು ರೂಪಾಗೆ ಅಸೂಯೆ ಇದೆ. ಹೀಗಾಗಿ, ಅವರು ಸುಖಾ ಸುಮ್ಮನೆ ಆರೋಪ ಮಾಡ್ತಿದ್ದಾರೆ. ರೂಪಾ ಅವರ ಪರ್ಸನಲ್ ಅಜೆಂಡಾ ಏನಿದೆ ಅನ್ನೋದು ಗೊತ್ತಾಗಬೇಕು. ಅವರಿಗೆ ಪ್ರಚಾರ ಬೇಕಾಗಿದೆ. ಆದರೆ ಸಿಂಧೂ ಕೆಲಸವೇ ಹೇಳತ್ತದೆ, ಅವರಿಗೆ ಪ್ರಚಾರದ ಗೀಳು ಇಲ್ಲ ಎನ್ನುವ ಮೂಲಕ ಡಿ ರೂಪಾ ಅವರಿಗೆ ತಿರುಗೇಟು ನೀಡಿದರು.

ಇದನ್ನೂ ಓದಿ : ಡಿ. ರೂಪಾ ವಿರುದ್ಧ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ ರೋಹಿಣಿ ಸಿಂಧೂರಿ

Last Updated : Feb 20, 2023, 5:28 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.