ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ವಾರ ಲಾಕ್ಡೌನ್ ವಿಸ್ತರಿಸಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಜೂನ್ 14 ರವರೆಗೆ ಕಠಿಣ ನಿರ್ಬಂಧಗಳು ಮುಂದುವರಿಯಲಿದ್ದು, ಕೆಲ ಕೈಗಾರಿಕಾ ವಲಯಗಳಿಗೆ ರಿಲೀಫ್ ನೀಡಿದ್ದಾರೆ.
500 ಕೋಟಿ ರೂ. ವಿಶೇಷ ಪ್ಯಾಕೇಜ್:
ಸಂಕಷ್ಟದಲ್ಲಿರುವ ವಲಯಗಳಿಗೆ ರಾಜ್ಯ ಸರ್ಕಾರದಿಂದ 500 ಕೋಟಿ ರೂ.ವಿಶೇಷ ಪ್ಯಾಕೇಜ್ ಘೋಷಿಸಲಾಗಿದೆ.
ಯಾರಿಗೆ ಸಹಾಯಧನ?
ಚಲನಚಿತ್ರ, ದೂರದರ್ಶನ ಕಲಾವಿದರಿಗೆ ತಲಾ 3 ಸಾವಿರ ರೂ., ಅರ್ಚಕರು, ಅಡುಗೆ ಕೆಲಸಗಾರರಿಗೆ ತಲಾ 3 ಸಾವಿರ ರೂ., ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರಿಗೆ 2 ಸಾವಿರ ರೂ, ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ., ಮೀನುಗಾರರಿಗೆ ತಲಾ 3 ಸಾವಿರ ರೂ., ಅನುದಾನ ರಹಿತ ಶಾಲಾ ಶಿಕ್ಷಕರಿಗೆ ತಲಾ 5 ಸಾವಿರ ರೂ, ಮಗ್ಗಗಳ ಕಾರ್ಮಿಕರಿಗೆ ತಲಾ 3 ಸಾವಿರ ರೂ. ಪರಿಹಾರ ಘೋಷಿಸಲಾಗಿದೆ.
ಶಾಲಾ ಮಕ್ಕಳಿಗೆ ಜೂನ್, ಜುಲೈನಲ್ಲಿ ಹಾಲಿನ ಪುಡಿ ನೀಡಲಾಗುವುದು, ಸಣ್ಣ ಕೈಗಾರಿಕೆಗಳ ವಿದ್ಯುತ್ ಬಿಲ್ ಪಾವತಿಯಲ್ಲಿ ರಿಯಾಯಿತಿ ನೀಡಲಾಗಿದೆ.
ಹೋಟೆಲ್ಗಳಲ್ಲಿ ಪಾರ್ಸೆಲ್ಗೆ ಮಾತ್ರ ಅವಕಾಶ:
ಹೋಟೆಲ್ಗಳನ್ನು ಸಂಜೆವರೆಗೂ ತೆರೆಯಬಹುದು, ಕೇವಲ ಪಾರ್ಸಲ್ಗೆ ಮಾತ್ರ ಅವಕಾಶವಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.