ETV Bharat / state

3 ವರ್ಷ ಜಿಎಸ್​ಟಿ ಪರಿಹಾರ ವಿಸ್ತರಿಸುವಂತೆ ನಿರ್ಮಲಾ ಸೀತಾರಾಮನ್​ಗೆ ಸಿಎಂ ಮನವಿ

ಮುಂದಿನ ಮೂರು ವರ್ಷಗಳ ಅವಧಿಗೆ ಜಿಎಸ್​ಟಿ ಪರಿಹಾರ ವಿಸ್ತರಿಸುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​​ಗೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ
author img

By

Published : Aug 26, 2021, 6:46 PM IST

ಬೆಂಗಳೂರು : ರಾಜ್ಯಗಳ ಹಣಕಾಸು ಸ್ಥಿತಿ ಸುಧಾರಿಸುವವರೆಗೆ ಕೇಂದ್ರದ ನೆರವು ಅತೀ ಅಗತ್ಯವಾಗಿದೆ. ಈ ಹಿನ್ನೆಲೆ ಮುಂದಿನ ಮೂರು ವರ್ಷಗಳ ಅವಧಿಗೆ ಜಿಎಸ್​ಟಿ ಪರಿಹಾರ ವಿಸ್ತರಿಸುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​​ಗೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ನವದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಕೇಂದ್ರ ಸರ್ಕಾರದಿಂದ ಜಿಎಸ್​​ಟಿ ಪರಿಹಾರವನ್ನು ಇನ್ನೂ ಮೂರು ವರ್ಷಗಳಿಗೆ ಮುಂದುವರೆಸುವಂತೆ ಹಾಗೂ 15ನೇ ಹಣಕಾಸು ಆಯೋಗದ ಅನುದಾನ ಹಂಚಿಕೆ ಹೆಚ್ಚಿಸುವಂತೆ ಮನವಿ ಮಾಡಿದರು.

ಕೋವಿಡ್ ಸಾಂಕ್ರಾಮಿಕದಿಂದಾಗಿ ರಾಜ್ಯಗಳ ತೆರಿಗೆ ಸಂಗ್ರಹ ಕಡಿಮೆಯಾಗಿದ್ದು, ಸಾಮಾನ್ಯ ಸ್ಥಿತಿಗೆ ಬರಲು ಕೆಲವು ವರ್ಷಗಳೇ ಬೇಕಾಗಬಹುದು. ಕಳೆದ ವರ್ಷ ಜಿಎಸ್​ಟಿ ಪರಿಹಾರ ಸಾಲ ಒದಗಿಸಲಾಗಿತ್ತು. ಈ ವರ್ಷವೂ ಈ ಸೌಲಭ್ಯ ವಿಸ್ತರಿಸಲಾಗಿದೆ. ಆದರೆ, ರಾಜ್ಯಗಳ ಹಣಕಾಸು ಸ್ಥಿತಿ ಸುಧಾರಿಸುವವರೆಗೆ ಕೇಂದ್ರದ ನೆರವು ಅತಿ ಅಗತ್ಯವಾಗಿದೆ ಎಂದು ತಮ್ಮ ಬೇಡಿಕೆ ಸಮರ್ಥಿಸಿಕೊಂಡರು.

‘15 ನೇ ಹಣಕಾಸು ಆಯೋಗದ ಅನುದಾನ ಹೆಚ್ಚಿಸಿ’

15 ನೇ ಹಣಕಾಸು ಆಯೋಗವು 2021 ರಿಂದ 2026 ರ ಅವಧಿಗೆ ರಾಜ್ಯಗಳಿಗೆ ತೆರಿಗೆ ಹಂಚಿಕೆಗೆ ಮಾಡಿದ ಶಿಫಾರಸಿನ ಅನ್ವಯ ರಾಜ್ಯದ ಹಂಚಿಕೆ 14 ನೇ ಹಣಕಾಸು ಆಯೋಗ ಶಿಫಾರಸು ಮಾಡಿದ ಶೇ. 4.71 ರಿಂದ ಶೇ. 3.647 ಕ್ಕೆ ಇಳಿಕೆಯಾಗಿದೆ. ಇದರಿಂದ ಅನುದಾನ ಹಂಚಿಕೆಯಲ್ಲಿ ತೀವ್ರ ಇಳಿಕೆಯಾಗಿದೆ. ಅನುದಾನ ಹಂಚಿಕೆ ಕುರಿತ ಮಾನದಂಡಗಳನ್ನು ಬದಲಿಸುವಂತೆ ರಾಜ್ಯ ಸರ್ಕಾರವು 15ನೇ ಹಣಕಾಸು ಆಯೋಗಕ್ಕೆ ಈಗಾಗಲೇ ಮನವಿ ಸಲ್ಲಿಸಿದ್ದು, ರಾಜ್ಯದ ಮನವಿಯನ್ನು ಆಯೋಗವು ಪರಿಗಣಿಸಿಲ್ಲ. ಇದರಿಂದಾಗಿ ದಕ್ಷಿಣದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಮೇಲೆ ತೀವ್ರ ಪರಿಣಾಮ ಬೀರಿದೆ ಎಂದು ಮುಖ್ಯಮಂತ್ರಿ ವಿವರಿಸಿದರು.

ಇದನ್ನೂ ಓದಿ: ಎರಡು ದಿನಗಳ ದೆಹಲಿ ಪ್ರವಾಸ ಮುಗಿಸಿ ಇಂದು ರಾತ್ರಿ ಬೆಂಗಳೂರಿಗೆ ಸಿಎಂ ವಾಪಸ್

15ನೇ ಹಣಕಾಸು ಆಯೋಗವು ತನ್ನ ಶಿಫಾರಸಿನಲ್ಲಿ ರಾಜ್ಯ ನಿರ್ದಿಷ್ಟ ಅನುದಾನದಡಿ ರಾಜ್ಯಕ್ಕೆ ಬೆಂಗಳೂರಿನ ಜಲಮೂಲಗಳು ಹಾಗೂ ಪೇರಿಫೆರಲ್ ರಿಂಗ್ ರಸ್ತೆಗೆ 6000 ಕೋಟಿ ರೂ. ನಿಗದಿ ಪಡಿಸಿದೆ. ಆದರೆ, ಭಾರತ ಸರ್ಕಾರದ ಎಕ್ಸ್​​​ಪ್ಲೆನೇಟರಿ ಮೆಮೊರಂಡಂ ನಲ್ಲಿ ಹಣಕಾಸು ಆಯೋಗ ಈ ಶಿಫಾರಸು ಪ್ರಸ್ತಾಪಿಸಿಲ್ಲ. ಇದರಿಂದ ಮೊದಲೇ ತೆರಿಗೆ ಹಂಚಿಕೆಯಲ್ಲಿ ಇಳಿಕೆಯಾಗಿರುವ ರಾಜ್ಯಕ್ಕೆ ಇನ್ನಷ್ಟು ಹಿನ್ನಡೆಯಾಗಲಿದೆ ಎಂದು ವಿತ್ತ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.

ಮಾಹಿತಿ ತಂತ್ರಜ್ಞಾನ ಹಾಗೂ ಸ್ಟಾರ್ಟ್ ಅಪ್ ರಾಜಧಾನಿ ಎನಿಸಿಕೊಂಡಿರುವ ಬೆಂಗಳೂರು ದೇಶದ ಆರ್ಥಿಕತೆಗೆ ಗಣನೀಯ ಕೊಡುಗೆ ನೀಡುತ್ತಿದೆ. ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಯಿಂದ ಹೆಚ್ಚಿನ ಹೂಡಿಕೆ ಆಕರ್ಷಿಸಲು ಸಾಧ್ಯವಾಗುವುದು. ಆದ್ದರಿಂದ 15 ನೇ ಹಣಕಾಸು ಆಯೋಗದ ಶಿಫಾರಸಿನಂತೆ ಬೆಂಗಳೂರು ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಮನವಿ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.