ETV Bharat / state

ಸಂಪುಟ ವಿಸ್ತರಣೆ ಸಂಬಂಧ ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ

ಈಗಾಗಲೇ ಸಚಿವ ಸ್ಥಾನಕ್ಕೆ ಲಾಬಿ ನಡೆಯುತ್ತಿದ್ದು, ಹೈಕಮಾಂಡ್ ಯಾರಿಗೆ ಮಣೆ ಹಾಕುತ್ತೆ ಅನ್ನೋದು ಭಾರಿ ಕುತೂಹಲ ಮೂಡಿಸಿದೆ..

ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
author img

By

Published : Aug 1, 2021, 5:14 PM IST

Updated : Aug 1, 2021, 5:47 PM IST

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಹೈಕಮಾಂಡ್​ ಬುಲಾವ್ ನೀಡಿದ್ದು, ಇಂದು ಸಂಜೆ 5.40ಕ್ಕೆ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಜತೆ ಮಾತುಕತೆ ನಡೆಸಿ, ಸಚಿವರ ಪಟ್ಟಿಯನ್ನು ಅಂತಿಮಗೊಳಿಸಿಕೊಂಡು ವಾಪಸ್ಸಾಗಲಿದ್ದಾರೆ ಎನ್ನಲಾಗಿದೆ.

ಇಡೀ ದಿನ ರಾಜಕೀಯ ಚಟುವಟಿಕೆಯಲ್ಲಿ ತೊಡಗಿದ್ದ ಸಿಎಂ ಬೊಮ್ಮಾಯಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಂಜೆ 5:40 ಕ್ಕೆ ದೆಹಲಿಗೆ ಪ್ರಯಾಣ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಿಎಂ, ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರನ್ನು ಭೇಟಿ ಮಾಡಲಿದ್ದು, ಸಚಿವ ಸಂಪುಟ ರಚನೆ ಬಗ್ಗೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ.

ಈಗಾಗಲೇ ಹೈಕಮಾಂಡ್ ಜೊತೆ ಒಂದು ಸುತ್ತಿನ ಮಾತುಕತೆ ನಡೆದಿದ್ದು, ಸಚಿವರ ಪಟ್ಟಿಯಲ್ಲಿನ ಕೆಲ ಹೆಸರು ಬದಲಾವಣೆ ಕುರಿತು ಮರು ಪರಿಶೀಲನೆ ನಡೆಸಿ ಪರಿಷ್ಕೃತ ಪಟ್ಟಿ ತರುವಂತೆ ಹೈಕಮಾಂಡ್ ಸೂಚನೆ ನೀಡಿತ್ತು ಎನ್ನಲಾಗಿದೆ. ಅದರಂತೆ ಬೆಂಗಳೂರಿಗೆ ವಾಪಸ್ಸಾಗಿದ್ದ ಸಿಎಂ, ನಿನ್ನೆ ಮತ್ತು ಇಂದು ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾಗಿ ಸಂಪುಟ ರಚನೆ ಕುರಿತು ಚರ್ಚಿಸಿದ್ದಾರೆ.

ಹೈಕಮಾಂಡ್ ಸೂಚಿಸಿದ್ದ ಕೆಲ ಹೆಸರು ಬದಲಾವಣೆ ಕುರಿತು ಯಡಿಯೂರಪ್ಪ ಜೊತೆ ಸಮಾಲೋಚನೆ ನಡೆಸಿರುವ ಬೊಮ್ಮಾಯಿ ಅವರ ಸಲಹೆ ಪಡೆದು ಸಚಿವಾಕಾಂಕ್ಷಿಗಳ ಪಟ್ಟಿ ತಯಾರಿಸಿದ್ದಾರೆ. ಇದೀಗ ಪರಿಷ್ಕೃತ ಪಟ್ಟಿಯೊಂದಿಗೆ ಸಿಎಂ ಬೊಮ್ಮಾಯಿ ದೆಹಲಿಗೆ ತೆರಳುತ್ತಿದ್ದಾರೆ. ನಾಳಿನ ಭೇಟಿ ವೇಳೆ ಪರಿಷ್ಕೃತ ಪಟ್ಟಿಗೆ ಸಿಎಂ ಸಮ್ಮತಿ ಪಡೆದುಕೊಂಡು ಸಂಪುಟ ರಚನೆಗೆ ಗ್ರೀನ್ ಸಿಗ್ನಲ್ ಪಡೆದುಕೊಂಡು ವಾಪಸ್ಸಾಗಲಿದ್ದಾರೆ ಎನ್ನಲಾಗಿದೆ.

Last Updated : Aug 1, 2021, 5:47 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.