ETV Bharat / state

ಮೇಕೆದಾಟು ಯೋಜನೆ ಕುರಿತು CM ತಮ್ಮ ನಿಲುವು ಸ್ಪಷ್ಟಪಡಿಸಬೇಕು: ಸಿದ್ದರಾಮಯ್ಯ - siddaramaiah

ಮೇಕೆದಾಟು ಯೋಜನೆಯ ವಿಚಾರದಲ್ಲಿ ಕಣ್ಣಾಮುಚ್ಚಾಲೆ ಆಟ ಆಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಿ, ನ್ಯಾಯದ ಪರವಾದ ಗಟ್ಟಿ ನಿಲುವು ತೆಗೆದುಕೊಳ್ಳಬೇಕು. ಅನಗತ್ಯ ತಕರಾರು ತೆಗೆಯುತ್ತಿರುವ ತಮಿಳುನಾಡು ಸರ್ಕಾರಕ್ಕೆ ಬಿಗಿಮಾತಿನಿಂದ ಬುದ್ದಿ ಹೇಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆ ಸೂಚನೆ ನೀಡಿದ್ದಾರೆ.

ಸಿದ್ದರಾಮಯ್ಯ
ಸಿದ್ದರಾಮಯ್ಯ
author img

By

Published : Aug 13, 2021, 5:29 PM IST

ಬೆಂಗಳೂರು: ಮೇಕೆದಾಟು ಯೋಜನೆ ಬಗ್ಗೆ ರಾಜ್ಯ ಸರ್ಕಾರದ ನಿಲುವು ಏನು ಎನ್ನುವುದನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಆಡಳಿತಾರೂಢ ಬಿಜೆಪಿ ಎರಡು ನಾಲಿಗೆಗಳಿಂದ ಮಾತನಾಡುತ್ತಿದೆ. ತಮಿಳುನಾಡಿನ ಬಿಜೆಪಿ ಈ ಯೋಜನೆ ವಿರೋಧಿಸುತ್ತಿದೆ, ಆ ನಿಲುವನ್ನು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಕೂಡಾ ಬೆಂಬಲಿಸುತ್ತಿದ್ದಾರೆ. ಯಾಕೆ ಈ ದಂದ್ವ ನೀತಿ?

ಈ ಯೋಜನೆ ಬಗ್ಗೆ ಮುಖ್ಯಮಂತ್ರಿಗಳು ತಳೆದಿರುವ ಗಟ್ಟಿನಿಲುವಿಗೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ. ಆದರೆ, ತಮ್ಮ ಸಡಿಲ ನಾಲಿಗೆಯ ಮೂಲಕ ಒಂದಲ್ಲ ಒಂದು ವಿವಾದ ಸೃಷ್ಟಿಸುತ್ತಿರುವ ಸಿ.ಟಿ.ರವಿ ಅವರಂತಹ ಕೂಗುಮಾರಿಗಳ ಬಾಯಿಮುಚ್ಚಿಸದೇ ಹೋದರೆ ಅನಗತ್ಯವಾಗಿ ಇದೊಂದು ಆಂತರಿಕ ವಿವಾದವಾಗಿ ನಾವು ನಾವೇ ಕಚ್ಚಾಡುವಂತಹ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದಿದ್ದಾರೆ.

ಅಧಿಕಾರದಲ್ಲಿರಲಿ, ಇಲ್ಲದೇ ಇರಲಿ ನಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ

ನೆಲ - ಜಲ - ಭಾಷೆ ವಿಚಾರದಲ್ಲಿ ನಮ್ಮ ಪಕ್ಷ ರಾಜಕೀಯ ಮಾಡಲು ಹೋಗುವುದಿಲ್ಲ, ಯಾವ ಬಗೆಯ ರಾಜಿಯನ್ನೂ ಮಾಡುವುದಿಲ್ಲ. ಅಧಿಕಾರದಲ್ಲಿರಲಿ, ಇಲ್ಲದೇ ಇರಲಿ ನಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ. ಮೇಕೆದಾಟು ಯೋಜನೆ ವಿಚಾರದಲ್ಲಿ ಮುಖ್ಯಮಂತ್ರಿಗಳು ವಿರೋಧಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಅದೇ ರೀತಿ ತಮ್ಮ ಪಕ್ಷದೊಳಗಿನ ಒಡಕು ಬಾಯಿಗಳನ್ನು ಮುಚ್ಚಿಸಬೇಕು.

ಮೇಕೆದಾಟು ಯೋಜನೆಯ ವಿಚಾರದಲ್ಲಿ ಕಣ್ಣಾಮುಚ್ಚಾಲೆ ಆಟ ಆಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಿ, ನ್ಯಾಯದ ಪರವಾದ ಗಟ್ಟಿನಿಲುವು ತೆಗೆದುಕೊಳ್ಳಬೇಕು. ಅನಗತ್ಯ ತಕರಾರು ತೆಗೆಯುತ್ತಿರುವ ತಮಿಳುನಾಡು ಸರ್ಕಾರಕ್ಕೆ ಬಿಗಿಮಾತಿನಿಂದ ಬುದ್ದಿ ಹೇಳಬೇಕು. ಮಹದಾಯಿ ಯೋಜನೆಯ ವಿಚಾರದಲ್ಲಿಯೂ ಕೇಂದ್ರ ಸರ್ಕಾರದ ತಳೆದ ದಂದ್ವ ನಿಲುವು ರಾಜ್ಯದ ಹಿತಾಸಕ್ತಿಗೆ ಮಾರಕವಾಯಿತು. ಕಾವೇರಿ ನ್ಯಾಯಮಂಡಳಿಯ ಐತೀರ್ಪು ಮತ್ತು ಸುಪ್ರೀಂಕೋರ್ಟ್ ತೀರ್ಪಿನ ನಂತರ ಕಾವೇರಿ ಜಲವಿವಾದ ಇತ್ಯರ್ಥವಾಗಿದೆ.

ತಮಿಳುನಾಡು ಮೇಕೆದಾಟು ಯೋಜನೆಗೆ ಕ್ಯಾತೆ ತೆಗೆಯುವುದು ಸರಿ ಅಲ್ಲ

ಪ್ರಕೃತಿಯ ಕೃಪೆಯಿಂದ ಕಳೆದೆರಡು ವರ್ಷಗಳಲ್ಲಿ ನದಿನೀರು ಹಂಚಿಕೆಯಲ್ಲಿ ಯಾವುದೇ ವ್ಯತ್ಯಯವಾಗದೇ ತಮಿಳುನಾಡಿಗೆ ಅದರ ಪಾಲಿನ ನೀರು ಹರಿದಹೋಗುತ್ತಿದೆ. ಈ ಸ್ಥಿತಿಯಲ್ಲಿ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಗೆ ಕ್ಯಾತೆ ತೆಗೆಯುವುದು ಸರಿ ಅಲ್ಲ.

ಕೆಆರ್ ಎಸ್ ಜಲಾಶಯದಿಂದ ಅನಿಯಂತ್ರಿತವಾಗಿ ಸಮುದ್ರಕ್ಕೆ ಹರಿದುಹೋಗುತ್ತಿರುವ ನೀರಿನಲ್ಲಿ 64 ಟಿಎಂಸಿ ನೀರನ್ನು ಬಳಸಿಕೊಂಡು ರೂಪಿಸಲಾಗಿರುವ ಮೇಕೆದಾಟು ಯೋಜನೆಯ ಮೊದಲ ಪ್ರಸ್ತಾವವವನ್ನು 2013ರಲ್ಲಿ ನಮ್ಮ ಸರ್ಕಾರ ಸಲ್ಲಿಸಿತ್ತು. 2019ರಲ್ಲಿ ನಮ್ಮದೇ ಸಂಯುಕ್ತ ಸರ್ಕಾರ ಈ ಯೋಜನೆಗೆ ಚಾಲನೆ ನೀಡಿತ್ತು. ನಮ್ಮ ಪಕ್ಷ ಈ ಯೋಜನೆಗೆ ಬದ್ಧವಾಗಿದೆ ಎಂದು ಹೇಳಿದ್ದಾರೆ.

’ಎಂ.ಕೆ.ಸ್ಟಾಲಿನ್ ಒಬ್ಬ ಪ್ರಬುದ್ಧ ರಾಜಕಾರಣಿ’

ಮೇಕೆದಾಟು ಯೋಜನೆಯಿಂದ ತಮಿಳುನಾಡಿನ ರೈತರಿಗೆ ಯಾವ ಹಾನಿಯೂ ಇಲ್ಲ. ತಮಿಳುನಾಡಿನ ಈಗಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಒಬ್ಬ ಪ್ರಬುದ್ಧ ರಾಜಕಾರಣಿ. ಅವರು ಹಿಂದಿನ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರಂತೆ ನೆಲ - ಜಲ-ಭಾಷೆಯ ವಿಚಾರದಲ್ಲಿ ರಾಜಕೀಯ ಮಾಡಲು ಹೋಗಬಾರದು.

ನೆರೆರಾಜ್ಯಗಳ ಜೊತೆ ಸೌಹಾರ್ದಯುತ ಸಂಬಂಧವನ್ನು ಉಳಿಸಿ-ಬೆಳೆಸಿಕೊಂಡು ಹೋಗಬೇಕು. ಮೇಕೆದಾಟು ಮೂಲಭೂತವಾಗಿ ಬೆಂಗಳೂರು - ಮೈಸೂರು ನಗರಗಳಿಗಾಗಿ ರೂಪಿಸಿರುವ ಕುಡಿಯುವ ನೀರಿನ ಯೋಜನೆ. ಬೆಂಗಳೂರಿನಲ್ಲಿ ಕೇವಲ ಕನ್ನಡಿಗರು ಮಾತ್ರವಲ್ಲ ತಮಿಳು ಭಾಷಿಕರು ಸೇರಿದಂತೆ ದೇಶದ ಬೇರೆ ಬೇರೆ ರಾಜ್ಯಗಳ ಜನರಿದ್ದಾರೆ. ಇಂತಹ ಕುಡಿಯುವ ನೀರು ಪೂರೈಸುವ ಯೋಜನೆಗೆ ತಮಿಳುನಾಡು ಸರ್ಕಾರ ರಾಜಕೀಯ ಕಾರಣಕ್ಕಾಗಿ ವಿರೋಧ ವ್ಯಕ್ತಪಡಿಸುವುದು ಸರಿ ಅಲ್ಲ ಎಂದಿದ್ದಾರೆ.

ತಮಿಳುನಾಡು ಸರ್ಕಾರ ಕೂಡಾ ಕಾವೇರಿ ಜಲಾನಯನ ಪ್ರದೇಶದಲ್ಲಿ ಎರಡು ಜಲವಿದ್ಯುತ್ ಯೋಜನೆಯನ್ನು ಪ್ರಾರಂಭಿಸಿದೆ. ಅವುಗಳನ್ನು ಕರ್ನಾಟಕ ವಿರೋಧಿಸಿಲ್ಲ. ಪ್ರಾಕೃತಿಕ ಸಂಪತ್ತನ್ನು ಹಂಚಿಕೊಂಡು ಬೆಳೆಯಬೇಕು ಎನ್ನುವುದು ನಮ್ಮ ನಿಲುವು. ತಮಿಳುನಾಡು ಹಟಹಿಡಿದು ಮೇಕೆದಾಟು ಯೋಜನೆಯನ್ನು ವಿರೋಧಿಸಿದರೆ ರಾಜಕೀಯ ಸಂಘರ್ಷ ಅನಿವಾರ್ಯವಾಗಬಹುದು ಎಂದು ತಮ್ಮ ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.