ETV Bharat / state

ಪ್ರಕಾಶ್ ಹುಕ್ಕೇರಿ ದೆಹಲಿ ಕರ್ನಾಟಕ ಪ್ರತಿನಿಧಿ; ರಾಜೀವ್ ಗೌಡಗೆ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಪಟ್ಟ - etv bharat kannada

ಎಂಎಲ್​ಸಿ ಪ್ರಕಾಶ್ ಹುಕ್ಕೇರಿ ಅವರನ್ನು ದೆಹಲಿಯ ಕರ್ನಾಟಕದ ಪ್ರತಿನಿಧಿ-2 ಆಗಿ ನೇಮಕ ಮಾಡಿ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.

cm-siddaramaiah-appointed-prakash-hukkeri-as-a-delhi-karnataka-representative-2
ಪ್ರಕಾಶ್ ಹುಕ್ಕೇರಿಗೆ ದೆಹಲಿ ಕರ್ನಾಟಕ ಪ್ರತಿನಿಧಿ-2, ರಾಜೀವ್ ಗೌಡಗೆ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಪಟ್ಟ
author img

By

Published : Aug 14, 2023, 10:57 PM IST

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಅವರನ್ನು ದೆಹಲಿಯ ಕರ್ನಾಟಕದ ಪ್ರತಿನಿಧಿ-2 ಆಗಿ ನೇಮಕ ಮಾಡಲಾಗಿದೆ. ಪ್ರಕಾಶ್ ಹುಕ್ಕೇರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನದೊಂದಿಗೆ ನೇಮಕ ಮಾಡಲಾಗಿದೆ. ಇತ್ತ ರಾಜ್ಯಸಭೆಯ ಮಾಜಿ ಸದಸ್ಯ ಪ್ರೊ. ರಾಜೀವ್ ಗೌಡ ಅವರು ರಾಜ್ಯ ಯೋಜನಾ ಮಂಡಳಿಯ ಉಪಾಧ್ಯಕ್ಷರಾಗಿ ಸಂಪುಟ ದರ್ಜೆ ಸಚಿವರ ಸ್ಥಾನಮಾನದೊಂದಿಗೆ ನೇಮಕಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಕಾಂಗ್ರೆಸ್‌ ಶಾಸಕ ಟಿ.ಬಿ.ಜಯಚಂದ್ರ ಅವರನ್ನು ನವದೆಹಲಿಯಲ್ಲಿನ ಕರ್ನಾಟಕ ರಾಜ್ಯದ ವಿಶೇಷ ಪ್ರತಿನಿಧಿಯನ್ನಾಗಿ ನೇಮಿಸಲಾಗಿತ್ತು. ಇವರಿಗೂ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಮತ್ತು ಎಲ್ಲ ಸೌಲಭ್ಯಗಳನ್ನು ನೀಡಿ ಆದೇಶ ಹೊರಡಿಸಲಾಗಿತ್ತು.

ಇದನ್ನೂ ಓದಿ: Cauvery Water: ತಮಿಳುನಾಡಿಗೆ ನೀರು ಬಿಡಬೇಡಿ, ಕಾವೇರಿ ಜಲಾನಯನ ಜನತೆಯ ಹಿತ ಕಾಪಾಡಿ- ಸಿಎಂಗೆ ಬೊಮ್ಮಾಯಿ ಪತ್ರ

ಕೆಕೆಆರ್​ಡಿಬಿ ಅಧ್ಯಕ್ಷರಾಗಿ ಡಾ.ಅಜಯ್ ಸಿಂಗ್ ಅಧಿಕಾರ ಸ್ವೀಕಾರ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಯ ನೂತನ ಅಧ್ಯಕ್ಷರಾಗಿ ಜೇವರ್ಗಿ ಶಾಸಕ ಡಾ.ಅಜಯ್‌ ಸಿಂಗ್ ನೇಮಕಗೊಂಡಿದ್ದಾರೆ. ಇಂದು ಅವರು ನಗರದ ಐವಾನ-ಎ-ಶಾಹಿ ಪ್ರದೇಶದಲ್ಲಿರುವ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಈ ವೇಳೆ ಸಚಿವ ಪ್ರಿಯಾಂಕ್ ಖರ್ಗೆ ಸೇರಿ ಹಲವರು ಅಭಿನಂದನೆ ಸಲ್ಲಿಸಿದರು.

ಬಳಿಕ ಮಾತನಾಡಿದ ಶಾಸಕ ಅಜಯ್‌ ಸಿಂಗ್, "ಮ್ಯಾಕ್ರೋ ಯೋಜನೆಗಳನ್ನು ಇಲ್ಲಿ ಅನುಷ್ಠಾನಕ್ಕೆ ತರಲಾಗುತ್ತದೆ. ಈ ಮೂಲಕ ಕಲ್ಯಾಣ ಕರ್ನಾಟಕಕ್ಕೆ ಅಂಟಿಕೊಂಡಿರುವ ಹಿಂದುಳಿದ ಪ್ರದೇಶ ಎಂಬ ಹಣೆಪಟ್ಟಿಯನ್ನು ಹೋಗಲಾಡಿಸುವುದೇ ನಮ್ಮ ಮೊದಲ ಗುರಿ. ಈ ಪ್ರದೇಶದಲ್ಲಿನ ಸಾಕ್ಷರತೆ ಪ್ರಮಾಣ ಹೆಚ್ಚಿಸುವುದು, ಅಪೌಷ್ಟಿಕತೆ ನಿವಾರಣೆ, ತಾಯಿ-ಮಕ್ಕಳ ಮರಣ ಪ್ರಮಾಣ ತಗ್ಗಿಸುವುದರ ಜೊತೆಗೆ ಆರೋಗ್ಯ ಕ್ಷೇತ್ರದಲ್ಲಿ ಗಮನಾರ್ಹ ಪ್ರಗತಿ ಸಾಧಿಸುವುದು, ಮೂಲಸೌಕರ್ಯ ಅಭಿವೃದ್ಧಿಪಡಿಸುವುದು ನಮ್ಮ ಮೊದಲ ಆದ್ಯತೆ" ಎಂದು ಹೇಳಿದರು.

"ರಾಜ್ಯದ ಈ ಹಿಂದಿನ 175 ತಾಲೂಕುಗಳಲ್ಲಿ 114 ತಾಲೂಕು ಹಿಂದುಳಿದ ತಾಲೂಕುಗಳಾಗಿವೆ. ಇದರಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ 39 ತಾಲೂಕು ಸೇರಿವೆ ಎಂದು ಡಾ.ಡಿ.ಎಂ.ನಂಜುಂಡಪ್ಪ ಅವರ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಈ ಪ್ರತಿ ತಾಲೂಕಿನಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಟ್ರಾಮಾ ಸೆಂಟರ್ ಸ್ಥಾಪನೆ ಮಾಡಲಾಗುವುದು. ರಾಜ್ಯದ ಸಾಕ್ಷರತೆ ಪ್ರಮಾಣ ಶೇ.75.36 ಇದ್ದರೆ, ಕ.ಕ. ಭಾಗದ ಪ್ರಮಾಣ ಸಾಕ್ಷರತೆ ಶೇ.64ರಷ್ಟು ಇದೆ. ಈ ವ್ಯತ್ಯಾಸವನ್ನು ಸರಿದೂಗಿಸಲು ಪ್ರತಿ ಹೋಬಳಿವಾರು ಪದವಿ ಪೂರ್ವ ಕಾಲೇಜುಗಳನ್ನು ಸ್ಥಾಪಿಸಲು ಪ್ರಮಾಣಿಕವಾಗಿ ಪ್ರಯತ್ನಿಸಲಾಗುವುದು" ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.