ETV Bharat / state

ಮಹಾತ್ಮ ಗಾಂಧಿ ಕೊಂದ ಮನಸ್ಥಿತಿಯೇ ಗೌರಿ ಲಂಕೇಶ್, ಎಂ.ಎಂ.ಕಲಬುರ್ಗಿ ಕೊಂದಿದೆ : ಸಿದ್ದರಾಮಯ್ಯ - Journalist Gowri lankesh program

ಗೌರಿ ಮೆಮೋರಿಯಲ್ ಟ್ರಸ್ಟ್ ಪತ್ರಕರ್ತೆ ಗೌರಿ ಲಂಕೇಶ್ ಸ್ಮರಣಾರ್ಥ ಟೌನ್ ಹಾಲ್​ನಲ್ಲಿ ಹಮ್ಮಿಕೊಂಡಿದ್ದ "ಸರ್ವಾಧಿಕಾಲದ ಹೊತ್ತಲ್ಲಿ ದೇಶವನ್ನು ಮರುಕಟ್ಟುವ ಕಲ್ಪನೆ" ಕುರಿತ ಸಂವಾದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದರು.

cm-siddaramaiah-attends-journalist-gowri-lankesh-memorial-program
ಮಹಾತ್ಮಗಾಂಧಿಯನ್ನು ಕೊಂದ ಮನಸ್ಥಿತಿಯೇ ಗೌರಿ ಲಂಕೇಶ್, ಎಂ.ಎಂ.ಕಲ್ಬುರ್ಗಿಯವರನ್ನೂ ಕೊಂದಿದೆ : ಸಿದ್ದರಾಮಯ್ಯ
author img

By ETV Bharat Karnataka Team

Published : Sep 5, 2023, 10:13 PM IST

ಬೆಂಗಳೂರು : ಅತ್ಯಂತ ಧರ್ಮವಂತರಾಗಿ ಬದುಕುತ್ತಿದ್ದ ಮಹಾತ್ಮ ಗಾಂಧಿಯನ್ನು ಕೊಂದ ಮನಸ್ಥಿತಿಯೇ ಗೌರಿ ಲಂಕೇಶ್, ದಾಭೋಲ್ಕರ್, ಪನ್ಸಾರೆ, ಎಂ.ಎಂ.ಕಲಬುರ್ಗಿ ಅವರನ್ನು ಕೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಗೌರಿ ಮೆಮೋರಿಯಲ್ ಟ್ರಸ್ಟ್ ಪತ್ರಕರ್ತೆ ಗೌರಿ ಲಂಕೇಶ್ ಸ್ಮರಣಾರ್ಥ ಟೌನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ "ಸರ್ವಾಧಿಕಾರದ ಹೊತ್ತಲ್ಲಿ ದೇಶವನ್ನು ಮರುಕಟ್ಟುವ ಕಲ್ಪನೆ" ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಹಾತ್ಮಗಾಂಧಿ ಅತ್ಯಂತ ಧರ್ಮನಿರಪೇಕ್ಷತೆಯಿಂದ ಬದುಕನ್ನು ಆಚರಿಸುತ್ತಿದ್ದರು. ಇದನ್ನು ಸಹಿಸಲಾಗದ ಮನಸ್ಥಿತಿಗಳು ಅವರನ್ನು ಕೊಂದು ಹಾಕಿದರು. ಗೌರಿ ಲಂಕೇಶ್ ಅವರು ಇಂದು ನಮ್ಮ ಜತೆಗಿಲ್ಲ. ಆದರೆ, ಅವರ ಅದಮ್ಯ ಚೇತನ ನಮ್ಮ ಜತೆಗಿದೆ ಎಂದರು. ಮಹಾತ್ಮಗಾಂಧಿ, ಗೌರಿ ಲಂಕೇಶ್ ಮಾತ್ರವಲ್ಲ. ಯಾರ್ಯಾರು ಬಸವಾದಿ ಶರಣರು, ಅಂಬೇಡ್ಕರ್, ಬುದ್ಧರ ವಿಚಾರ ಧಾರೆಗಳನ್ನು ಆಚರಿಸುತ್ತಾ ಜಾತಿ ಅಸಮಾನತೆ, ಧರ್ಮ ಸಂಘರ್ಷವನ್ನು ವಿರೋಧಿಸುತ್ತಾರೋ ಅವರೆಲ್ಲರಿಗೂ ಬೆದರಿಕೆ ಪತ್ರಗಳನ್ನು ಬರೆಯುತ್ತಿದ್ದಾರೆ. ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆಯುತ್ತಿರುವ ಕಿಡಿಗೇಡಿಗಳು ಎಷ್ಟೇ ಪ್ರಬಲರಾಗಿದ್ದರೂ, ಅವರ ಹಿಂದೆ ಎಷ್ಟೇ ದೊಡ್ಡ ರಾಜಕೀಯ ಒತ್ತಾಸೆ ಇದ್ದರೂ ಅವರನ್ನು ಬಂಧಿಸಿ ಕಾನೂನು ಕ್ರಮಕ್ಕೆ ಒಪ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಗೌರಿಯನ್ನು ಕೊಂದ ಆರೋಪಿಗಳಿಗೆ ಶಿಕ್ಷೆ ಆದಾಗ ಮಾತ್ರ ಗೌರಿ ಆತ್ಮಕ್ಕೆ ಶಾಂತಿ ಸಿಗುತ್ತದೆ. ಪೊಲೀಸ್ ಅಧಿಕಾರಿಗಳ ಜತೆ ಈ ಬಗ್ಗೆ ಚರ್ಚೆ ನಡೆಸಿ ಮಾಹಿತಿ ಪಡೆದಿದ್ದೇನೆ. ಸಾವಿರಕ್ಕೂ ಅಧಿಕ ಪುಟಗಳ ಆರೋಪ ಪಟ್ಟಿ ಸಲ್ಲಿಕೆಯಾಗಿ, 500ಕ್ಕೂ ಹೆಚ್ಚು ಸಾಕ್ಷಿಗಳನ್ನು ಪಟ್ಟಿ ಮಾಡಲಾಗಿದೆ. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಕೂಡ ವೇಗವಾಗಿ ನಡೆಯುತ್ತಿದೆ ಎನ್ನುವ ಮಾಹಿತಿ ಸಿಕ್ಕಿದೆ. ಹೀಗಾಗಿ ತನಿಖಾ ತಂಡದ ವೃತ್ತಿಪರತೆ ಮತ್ತು ಶ್ರಮ ವ್ಯರ್ಥ ಆಗುವುದಿಲ್ಲ. ಆರೋಪಿಗಳಿಗೆ ಖಂಡಿತಾ ಶಿಕ್ಷೆ ಆಗುತ್ತದೆ ಎನ್ನುವ ಭರವಸೆ ನನಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ನಟ ಪ್ರಕಾಶ್ ರೈ "ನಾನು ಇಲ್ಲಿಗೆ ಬರುವ ಮೊದಲು ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನಕ್ಕೆ ಹೋಗಿದ್ದೆ. ಅದು ಯಾವ ಚಾನಲ್..? ಅದು ಅವರ ಚಾನಲ್..! ಎಲ್ಲಾ 30 ಜನ ಖಾವಿ ಶಾಲು ಹಾಕಿಕೊಂಡು ಬಂದಿದ್ದರು. ಅವರನ್ನು ನೋಡಿ ನಾನು ನಿಮ್ಮ ಜೊತೆನೇ ಮಾತನಾಡಬೇಕು ಬನ್ನಿ ಅಂತ ಕರೆದೆ. ನಾನು ಟ್ವೀಟ್ ನಲ್ಲಿ ಸನಾತನಿ ಸಂಸತ್ ಅಂತ ಹಾಕಿದ್ದೆ. ಅದಕ್ಕೆ ಒಬ್ಬ ಪ್ರಶ್ನೆ ಕೇಳಿದ, ನೀನು ಸನಾತನ ಧರ್ಮ ಅಲ್ವಾ ಅಂತಾ. ಆಗ, ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ, ನಾನು ನಮ್ಮ ಅಪ್ಪನಿಗೆ ಹುಟ್ಟಿದ್ದೇನೆ. ನಾನು ಧರ್ಮದ ವಿರುದ್ಧ ಅಲ್ಲ, ಮೋದಿಯ ವಿರುದ್ದ. ಮೋದಿ ನೂತನ ಸಂಸತ್ ಭವನ ಉದ್ಘಾಟನೆ ವೇಳೆ ಹೋಮ ಹವನ ಮಾಡಿಸಿದರು. ಅದು ನಮ್ಮ ಸಂಸತ್. ಅಲ್ಲಿ ಹೋಮ ಹವನ ಮಾಡಬಾರದು" ಎಂದರು.

ರೈತ ಮುಖಂಡ ರಾಕೇಶ್ ಟಿಕಾಯತ್ ಮಾತನಾಡಿ, "ಕರ್ನಾಟಕದ ಜನ ಬಹು ದೊಡ್ಡ ಸಂದೇಶವನ್ನು ದೇಶಕ್ಕೆ ಕೊಟ್ಟಿದ್ದಾರೆ. ಈಗ ಬೇರೆ ರಾಜ್ಯಗಳಲ್ಲೂ ಇದೆ ಪರಿವರ್ತನೆ ಆಗಬೇಕು. ದೆಹಲಿ ಹೋರಾಟದಲ್ಲಿ ರೈತರು ಸತ್ತರು. ಹದಿಮೂರು ತಿಂಗಳು ರೈತರನ್ನು ಬೀದಿಯಲ್ಲಿ ಇಟ್ಟಿದ್ದರು, ಆಗ ಯಾರ ಸರ್ಕಾರ ಅಧಿಕಾರದಲ್ಲಿ ಇತ್ತು..?. ಕಾಶ್ಮೀರ ಪ್ರವಾಸೋದ್ಯಮ ಈಗ ನಷ್ಟದಲ್ಲಿದೆ. 50 ಸಾವಿರ ಜನ ದುಡಿಯುತ್ತಿದ್ದರು, ಈಗ 2 ಸಾವಿರ ಜನ ದುಡಿಯುತ್ತಿದ್ದಾರೆ" ಎಂದರು.

ಸಿಎಂಗೆ ಶೈಲಜಾ ಟೀಚರ್ ಅಭಿನಂದನೆ : ನಾಡಿನ‌ ಜನರನ್ನು ಜಾತಿ ಆಧಾರದಲ್ಲಿ ವಿಭಜಿಸಿ ಭ್ರಷ್ಟಾಚಾರವನ್ನು ಆಚರಿಸುತ್ತಿದ್ದ ಬಿಜೆಪಿ ಮತ್ತು ಆರ್ ಎಸ್ ಎಸ್ ಸಿದ್ಧಾಂತವನ್ನು ಹೀನಾಯವಾಗಿ ಸೋಲಿಸಿ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ್ದಕ್ಕಾಗಿ ಕೇರಳದ ಮಾಜಿ ಸಚಿವೆ ಶಾಸಕಿ ಶೈಲಜಾ ಟೀಚರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಈ ಸಂದರ್ಭದಲ್ಲಿ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಅಖಿಲ ಭಾರತ ರೈತ ಆಂದೋಲನದ ನಾಯಕ ರೈತ ಮುಖಂಡ ರಾಕೇಶ್ ಟಿಕಾಯತ್, ಮಾನವ ಹಕ್ಕು ಹೋರಾಟಗಾರ್ತಿ ತೀಸ್ತಾ ಸೆತಲ್ವಾಡ್​ , ರಾಜಕೀಯ ಕಾರ್ಯಕರ್ತೆ ಏಂಜೆಲಾ ರಂಗದ್, ಬಹುಭಾಷಾ ನಟ ಪ್ರಕಾಶ್ ರೈ, ಕೇರಳ ರಾಜ್ಯದ ಮಾಜಿ ಸಚಿವೆ ಶಾಸಕಿ ಶೈಲಜಾ ಟೀಚರ್, ಖ್ಯಾತ ಪತ್ರಕರ್ತೆ ಸುಪ್ರಿಯಾ ಶ್ರೀನಾಟೆ, ಮುಸ್ಲಿಂ ಒಕ್ಕೂಟದ ಮುಖಂಡರಾದ ಯಾಸಿನ್ ಮಲ್ಪೆ, ಮಾಜಿ ಸಚಿವ ಆಂಜನೇಯ ಮತ್ತಿತರರು ಭಾಗಿಯಾಗಿದ್ದರು.

ಇದನ್ನೂ ಓದಿ : ಪಿಡಿಒ ಅಧಿಕಾರಿಗಳ ಜೇಷ್ಠತಾ ಪಟ್ಟಿ ಪರಿಶೀಲಿಸಿ ಅಂತಿಮ‌ಪಟ್ಟಿ ಪ್ರಕಟಿಸಲು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.